ಇತ್ತೀಚೆಗೆ ಬಿಡುಗಡೆಯಾದ 2025ರ 'ಸುಜುಕಿ ಆಕ್ಸೆಸ್ 125' ಸ್ಕೂಟರ್ ಕುರಿತು ಪ್ರಮುಖಾಂಶಗಳಿವು... ಯಾರು ಹೇಳಲ್ಲ!
ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ಪ್ರಖ್ಯಾತ ದ್ವಿಚಕ್ರ ವಾಹನ (Two-wheeler) ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ (Bharat Mobility Global Expo) ವಾಹನ ಪ್ರದರ್ಶನದಲ್ಲಿ ನವೀಕರಿಸಿದ 2025ರ ಹೊಚ್ಚ ಹೊಸ 'ಆಕ್ಸೆಸ್ 125' ಸ್ಕೂಟರ್‌ನ್ನು ಬಿಡುಗಡೆಗೊಳಿಸಿತ್ತು. ಬನ್ನಿ.. ನೂತನ ಈ ಸ್ಕೂಟರ್ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants): ನೂತನ ಸುಜುಕಿ ಆಕ್ಸೆಸ್ 125 (Suzuki Access 125) ಸ್ಕೂಟರ್, ಅತ್ಯಂತ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗಿದೆ. ಇದು ರೂ.81,700 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಸ್ಟ್ಯಾಂಡರ್ಡ್, ಸ್ಪೆಷಲ್ ಮತ್ತು ರೈಡ್ ಕನೆಕ್ಟ್ ಎಡಿಷನ್ ಎಂಬ ಮೂರು ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ.

ವಿನ್ಯಾಸ & ಬಣ್ಣಗಳು (Design & Colors): ಈ ಸ್ಕೂಟರ್, ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಹೊಸದಾಗಿರುವ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಜೊತೆಗೆ ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಸಾಲಿಡ್ ಐಸ್ ಗ್ರೀನ್ ಮತ್ತು ಪರ್ಲ್ ಶೈನಿ ಬೀಜ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಕಾರ್ಯಕ್ಷಮತೆ (Performance): ಹೊಸ ಸುಜುಕಿ ಆಕ್ಸೆಸ್ 125 ಸ್ಕೂಟರ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 125 ಸಿಸಿ ಸಿಂಗಲ್- ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8.3 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.2 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 45 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ.

ವೈಶಿಷ್ಟ್ಯಗಳು (Features): ಈ ಸ್ಕೂಟರ್ ಯುವ ಗ್ರಾಹಕರನ್ನು ಸೆಳೆಯುವ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ವಿಶೇಷವಾಗಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಪಡೆದಿದೆ. ಜೊತೆಗೆ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯನ್ನು ಒಳಗೊಂಡಿದ್ದು, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಕಾಲ್/ಎಸ್ಎಂಎಸ್ ಅಲರ್ಟ್, ರೈನ್ ಅಲರ್ಟ್ ಹಾಗೂ ಕ್ಯಾಲೆಂಡರ್ ಅಲರ್ಟ್‌ನ್ನು ಸಪೋರ್ಟ್ ಮಾಡುತ್ತದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ನೂತನ ಸುಜುಕಿ ಆಕ್ಸೆಸ್ 125 ಸ್ಕೂಟರ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಸಿಂಗಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಸವಾರರಿಗೆ ಹೆಚ್ಚಿನ ರಕ್ಷಣೆ ಒದಗಿಸಲು ಡಿಸ್ಕ್ & ಹಿಂದೆ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.

ಇನ್ನು, ಸುಜುಕಿ ಆಕ್ಸೆಸ್ 125 ಸ್ಕೂಟರ್‌ಗೆ ಟಿವಿಎಸ್ ಜುಪಿಟರ್ 125 ಮತ್ತು ಹೋಂಡಾ ಆಕ್ಟಿವಾ 125 ಸ್ಕೂಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ. ಈ ಹೊಸ ಸ್ಕೂಟರ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೆ ಬಂದಿದ್ದು, ಪುರುಷರು ಮಾತ್ರವಲ್ಲದೆ ಮಹಿಳೆಯರ ಆಯ್ಕೆಯ ದ್ವಿಚಕ್ರ ವಾಹನವಾಗಬಹುದು ಎನ್ನಲಾಗಿದೆ. ಮುಂಬರುವ ದಿನಗಳಲ್ಲಿ ಸುಜುಕಿ ಆಕ್ಸೆಸ್ 125 ಸ್ಕೂಟರ್‌ಗೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








