Suzuki: ಕೆಲವೇ ದಿನಗಳಲ್ಲಿ ಅಗ್ಗದ ಸುಜುಕಿ ಆಕ್ಸೆಸ್ ಇ-ಸ್ಕೂಟರ್ ಬಿಡುಗಡೆ.. ಸದ್ದಿಲ್ಲದೇ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ!

ಸುಜುಕಿ ಆಕ್ಸೆಸ್ 125 (Suzuki Access 125) ಜಗಮೆಚ್ಚಿದ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇದೇ ಸ್ಕೂಟರ್‌ನ್ನು ಎಲೆಕ್ಟ್ರಿಕ್ ರೂಪದಲ್ಲೂ ಮಾರಾಟಕ್ಕೆ ತರಲು ಕಂಪನಿಯು ಹಣಿಯಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಕೆಲವೇ ದಿನಗಳಲ್ಲಿ 'ಹೋಂಡಾ ಆಕ್ಟಿವಾ ಇ' ಪ್ರತಿಸ್ಪರ್ಧಿಯಾದ ಹೊಚ್ಚ ಹೊಸ 'ಸುಜುಕಿ ಇ ಆಕ್ಸೆಸ್' ಅದ್ದೂರಿಯಾಗಿಯೂ ಬಿಡುಗಡೆಯಾಗಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ನೂತನ 'ಇ ಆಕ್ಸೆಸ್'ನ್ನು ಈ ವರ್ಷಾಂತ್ಯದೊಳಗೆ ಪರಿಚಯಿಸಲಾಗಿದೆ. ಅದಕ್ಕಾಗಿ ಭರದಿಂದ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ದೇಶಾದ್ಯಂತ ಆಯ್ದ ಡೀಲರ್‌ಶಿಪ್‌ಗಳಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯುತ್ತಿದೆ. ಈ ಬಗ್ಗೆ 'ಬೈಕ್‌ದೇಖೋ' ವರದಿ ಮಾಡಿದೆ.

New Suzuki Access Electric Scooter Launch Soon In India Charging Stations Already Ready Details

ಸುಜುಕಿ ಇ ಆಕ್ಸೆಸ್ (Suzuki e Access) ಹೇಗಿದೆ:

ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.1.20 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕಲಿದೆ. ಈಗಾಗಲೇ, 'ಸುಜುಕಿ ಇ ಆಕ್ಸೆಸ್'ನ ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳ ಕುರಿತ ಬಹುತೇಕ ಎಲ್ಲ ವಿವರಗಳು ಬಹಿರಂಗಗೊಂಡಿವೆ.

ಈ ಎಲೆಕ್ಟ್ರಿಕ್ ಸ್ಕೂಟರ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರನ್ನು ಸೆಳೆಯುವಂತಿದೆ. ಉತ್ತಮವಾದ ಎಲ್‌ಇಡಿ ಹೆಡ್‌ಲೈಟ್‌, ಎಲ್‌ಇಡಿ ಇಂಡಿಕೇಟರ್‌ಗಳು ಹಾಗೂ ಟೇಲ್‌ಲೈಟ್‌ನ್ನು ಪಡೆದಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಮೆಟಾಲಿಕ್ ಮ್ಯಾಟ್ ಬೋರ್ಡೆಕ್ಸ್ ರೆಡ್, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಫೈಬ್ರಾಯಿನ್ ಗ್ರೇ ಮತ್ತು ಪರ್ಲ್ ಜೇಡ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯಲಿದೆ.

New Suzuki Access Electric Scooter Launch Soon In India Charging Stations Already Ready Details

ನೂತನ 'ಸುಜುಕಿ ಇ ಆಕ್ಸೆಸ್' ಸ್ಕೂಟರ್ ಹೆಚ್ಚು ವಿಶಾಲ ಗಾತ್ರದಲ್ಲಿದೆ. 1,860 ಮಿ.ಮೀ ಉದ್ದ, 715 ಮಿ.ಮೀ ಅಗಲ ಮತ್ತು 1,135 ಮಿ.ಮೀ ಎತ್ತರವಿದೆ. ಜೊತೆಗಿದು 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,305 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 122 ಕೆಜಿ ತೂಕವಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಈ ಸ್ಕೂಟರ್ ಪಡೆದಿರುವ ಎಲೆಕ್ಟ್ರಿಕ್ ಮೋಟಾರ್, 4.1 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 15 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಹೊಸ 'ಸುಜುಕಿ ಇ ಆಕ್ಸೆಸ್' ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಟಿಎಫ್‌ಟಿ ಡಿಸ್‌ಪ್ಲೇ 4.2 (ಇಂಚು), ಸುಜುಕಿ ರೈಡ್ ಕನೆಕ್ಟ್ ಅಪ್ಲಿಕೇಶನ್, ರಿಮೋಟ್ ಸ್ಟಾರ್ಟ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಇಕೋ, ರೈಡ್ ಎ & ರೈಡ್ ಬಿ ಎಂಬ 2 ಆಕರ್ಷಕವಾದ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. ಇದರ ಬ್ಯಾಟರಿ ಪ್ಯಾಕ್, ಡಿಸಿ ಚಾರ್ಜರ್ ಉಪಯೋಗ ಮಾಡಿದಾಗ 72 ನಿಮಿಷಗಳಲ್ಲಿ ಶೇಕಡ 0 ರಿಂದ 80% ಚಾರ್ಜ್ ಆಗಿ ಬಿಡುತ್ತದೆ.

ಈ ಸ್ಕೂಟರ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಕಾಯಿಲ್-ಸ್ಪ್ರಿಂಗ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ.

ಸುಜುಕಿ ಇ ಆಕ್ಸೆಸ್ ಪ್ರತಿಸ್ಪರ್ಧಿ 'ಹೋಂಡಾ ಆಕ್ಟಿವಾ ಇ' ವಿಶೇಷತೆಗಳೇನು:

ಇದು ರೂ.1.17 ಲಕ್ಷದಿಂದ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 102 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಹಾಗೂ ಹೆಚ್-ಸ್ಮಾರ್ಟ್ ಕೀ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Wednesday, October 29, 2025, 11:07 [IST]
English summary
New suzuki access electric scooter launch soon in india charging stations already ready details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+