ಆಕ್ಟಿವಾ ಇ ಪ್ರತಿಸ್ಪರ್ಧಿ: ಹೊಸ ಸುಜುಕಿ ಆಕ್ಸೆಸ್ ಇ-ಸ್ಕೂಟರ್ ಈ ಅವಧಿಯಲ್ಲಿ ಬಿಡುಗಡೆ, ಕಡಿಮೆ ಬೆಲೆಗೆ ಮಾರಾಟಕ್ಕೆ!

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ದೇಶೀಯ ಮಾರುಕಟ್ಟೆಯಲ್ಲಿ ಆಕ್ಸೆಸ್ 125 ಸ್ಕೂಟರ್‌ನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇದೇ ಸ್ಕೂಟರ್‌ನ್ನು ಎಲೆಕ್ಟ್ರಿಕ್ ರೂಪದಲ್ಲಿಯೂ ಬಿಡುಗಡೆಗೊಳಿಸಲು ಕಂಪನಿಯು ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳತ್ತಿದೆ. ಕಳೆದ ತಿಂಗಳು ನವದೆಹಲಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಚ್ಚ ಹೊಸ ಇ ಆಕ್ಸೆಸ್ (e Access) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಅನಾವರಣಗೊಳಿಸಿತ್ತು. ಸದ್ಯ ಈ ನೂತನ ಸ್ಕೂಟರ್ ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಹೊಸ ಸುಜುಕಿ ಇ ಆಕ್ಸೆಸ್ (Suzuki e Access) ಎಲ್ಲವು ಅಂದುಕೊಂಡಂತೆ ನಡೆದರೆ, ಆಗಸ್ಟ್ & ಸೆಪ್ಟೆಂಬರ್ ಅವಧಿಯಲ್ಲಿ ಮಾರಾಟಕ್ಕೆ ಬರಲಿದೆ. ಈ ಸಮಯದಲ್ಲಿ ದೇಶಾದ್ಯಂತ ಸಾಲು ಸಾಲು ಹಬ್ಬಗಳು ಕೂಡ ಶುರುವಾಗಲಿವೆ. ನೂತನ ಸುಜುಕಿ ಇ ಆಕ್ಸೆಸ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬರಲಿದೆ ಎಂದು ಹೇಳಲಾಗಿದೆ. ಇದು ರೂ.1 ಲಕ್ಷದಿಂದ ರೂ.1.20 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

New Suzuki e Access Expected Launch On Festival Season Very Low Price Details

ಈ ನೂತನ ಸುಜುಕಿ ಇ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್, 3.07 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಜೊತೆಗೆ 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 4.1 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 15 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹೊಸ ಇ-ಸ್ಕೂಟರ್‌ನ ಬ್ಯಾಟರಿ ಪ್ಯಾಕ್ ಪೋರ್ಟಬಲ್ ಚಾರ್ಜರ್ (ಮನೆ ವಿದ್ಯುತ್) ಬಳಕೆಯಲ್ಲಿ ಶೇಕಡ 0 ರಿಂದ 100% ಚಾರ್ಜ್ ಆಗುವುದಕ್ಕೆ 6 ಗಂಟೆ 42 ನಿಮಿಷಗಳು ಬೇಕಾಗುತ್ತದೆ.

New Suzuki e Access Expected Launch On Festival Season Very Low Price Details

ಹೊಸ ಸುಜುಕಿ ಇ ಆಕ್ಸೆಸ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಎಲ್‌ಇಡಿ ಲೈಟಿಂಗ್ ಸೆಟಪ್, ಟಿಎಫ್‌ಟಿ ಡಿಸ್‌ಪ್ಲೇ, ಸುಜುಕಿ ರೈಡ್ ಕನೆಕ್ಟ್ ಇ-ಆ್ಯಪ್, ನ್ಯಾವಿಗೇಷನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇದರೊಟ್ಟಿಗೆ ಇಕೋ, ರೈಡ್ ಎ ಮತ್ತು ರೈಡ್ ಬಿ ಎಂಬ ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್ 12-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ನೂತನ ಸುಜುಕಿ ಇ ಆಕ್ಸೆಸ್ ಸ್ಕೂಟರ್‌ಗೆ ಟಿವಿಎಸ್ ಐಕ್ಯೂಬ್, ಬಜಾಜ್ ಚೇತಕ್, ಓಲಾ ಎಸ್1 ಎಕ್ಸ್, ಹೋಂಡಾ ಆಕ್ಟಿವಾ-ಇ ಮತ್ತು ಹೀರೋ ವಿಡಾ ವಿ2 ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಸುಜುಕಿ ಆಕ್ಸೆಸ್ 125 ಕೂಡ ಯಶಸ್ವಿಯಾಗಿ ಮಾರಾಟ: ಇದು ರೂ.81,700 ಎಕ್ಸ್-ಶೋರೂಂ ದರವನ್ನು ಪಡೆದಿದೆ. 125 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಅಂದಾಜಿಸಲಾಗಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, March 2, 2025, 21:42 [IST]
English summary
New suzuki e access expected launch on festival season very low price details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+