TVS: ಶೀಘ್ರ ನವೀಕರಿಸಿದ ಹೊಚ್ಚ ಹೊಸ ಟಿವಿಎಸ್ ಐಕ್ಯೂಬ್ ಎಸ್‌ಟಿ ಇ-ಸ್ಕೂಟರ್ ಬಿಡುಗಡೆ.. ಬೆಲೆ ಎಷ್ಟಿರಲಿದೆ?
ಟಿವಿಎಸ್ ಐಕ್ಯೂಬ್ (TVS iQube) ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಈ ಹಿನ್ನೆಲೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಬ್ಯಾಟರಿ ಪ್ಯಾಕ್‌ಗೆ ಅನುಗುಣವಾಗಿ ಐಕ್ಯೂಬ್ ಇ-ಸ್ಕೂಟರ್ 5 ವಿಧದಲ್ಲೂ ಲಭ್ಯವಿದೆ. ಇದೇ ಸ್ಕೂಟರ್‌ನ 'ಐಕ್ಯೂಬ್ ಎಸ್‌ಟಿ' ಮಾಡೆಲ್‌ನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲು ಕಂಪನಿಯು ಸಹ ತಯಾರಿ ನಡೆಸುತ್ತಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಎಲ್ಲವು ಅಂದುಕೊಂಡಂತೆ ನಡೆದರೆ, ನವೀಕರಣಕ್ಕೆ ಒಳಗಾಗಿರುವ ಹೊಸ 'ಟಿವಿಎಸ್ ಐಕ್ಯೂಬ್ ಎಸ್‌ಟಿ' ಎಲೆಕ್ಟ್ರಿಕ್ ಸ್ಕೂಟರ್ ಇದೇ ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ. ಅಂದರೆ, ಸೆಪ್ಟೆಂಬರ್ ವೇಳೆಗೆ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ 2025ರ ನೂತನ ಐಕ್ಯೂಬ್ ಎಸ್‌ಟಿ ಕಾನ್ಸೆಪ್ಟ್ ಇ-ಸ್ಕೂಟರ್‌ನ್ನು ಅನಾವರಣಗೊಳಿಸಲಾಗಿತ್ತು.

ಹೊಚ್ಚ ಹೊಸ ಟಿವಿಎಸ್ ಐಕ್ಯೂಬ್ ಎಸ್‌ಟಿ (TVS iQube ST) ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿರುವ ಸಾಧ್ಯತೆಯಿದೆ. ಎಕ್ಸ್‌ಪೋದಲ್ಲಿ ಪ್ರದರ್ಶಿಸಿದ 'ಐಕ್ಯೂಬ್ ಎಸ್‌ಟಿ' ಕಾನ್ಸೆಪ್ಟ್ ಮಾಡೆಲ್ ಉತ್ತಮವಾಗಿರುವ ಕ್ವಿಲ್ಟೆಡ್ ಸೀಟ್, ಬ್ಯಾಕ್‌ರೆಸ್ಟ್ ಹಾಗೂ ಫ್ಲೋರ್‌ಬೋರ್ಡ್‌ನ್ನು ಪಡೆದಿತ್ತು.
ನೂತನ ಐಕ್ಯೂಬ್ ಎಸ್‌ಟಿ ಇ-ಸ್ಕೂಟರ್‌ನ ಕಾರ್ಯಕ್ಷಮತೆಯ ಕುರಿತಂತೆ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಇದು ಪ್ರಸ್ತುತ ಗ್ರಾಹಕರ ಖರೀದಿಗೆ ದೊರೆಯುವ ಐಕ್ಯೂಬ್ ಎಸ್‌ಟಿ ಮಾಡೆಲ್‌ನಂತೆ 3.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 5.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರುವ ನಿರೀಕ್ಷೆಯಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 100 ರಿಂದ 150 ಕಿ.ಮೀ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ.

ಮುಂಬರಲಿರುವ ಹೊಸ ಟಿವಿಎಸ್ ಐಕ್ಯೂಬ್ ಎಸ್‌ಟಿ ಎಲೆಕ್ಟ್ರಿಕ್ ಹತ್ತಾರು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನೀರಿಕ್ಷೆಯಿದೆ. ಬಹುಮುಖ್ಯವಾಗಿ 7-ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಕಾಪರ್ ಬ್ರೌನ್ ಮ್ಯಾಟ್, ಸ್ಟಾರ್‌ಲೈಟ್ ಬ್ಲ್ಯೂ ಗ್ಲೋಸಿ ಮತ್ತು ಟೈಟಾನಿಯಂ ಗ್ರೇ ಮ್ಯಾಟ್ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗುವ ನಿರೀಕ್ಷೆಯಿದೆ.
ನೂತನ ಟಿವಿಎಸ್ ಐಕ್ಯೂಬ್ ಎಸ್‌ಟಿ ಎಲೆಕ್ಟ್ರಿಕ್ ಸ್ಕೂಟರ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿರಲಿದೆ. ಜೊತೆಗೆ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಈ ಸ್ಕೂಟರ್ ರೂ.1.50 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ.

ಟಿವಿಎಸ್ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೇಗಿದೆ..
ಟಿವಿಎಸ್ ಕಂಪನಿಯು 'ಐಕ್ಯೂಬ್' ಇ-ಸ್ಕೂಟರ್ ನೆರವಿನಿಂದ ಎಲೆಕ್ಟ್ರಿಕ್ ವಾಹನಗಳನ್ನು ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಳಿಸಿದೆ. ಕಳೆದ ತಿಂಗಳು (ಏಪ್ರಿಲ್-2025) ಬರೋಬ್ಬರಿ 27,684 ಯುನಿಟ್ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 17,403 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ 59% ಪ್ರಗತಿಯಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








