226 Km ಮೈಲೇಜ್.. ಹೊಸ TVS Jupiter CNG ಸ್ಕೂಟರ್ ಶೀಘ್ರದಲ್ಲೇ ಬಿಡುಗಡೆ, ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು?
ಟಿವಿಎಸ್ ಮೋಟಾರ್ (TVS Motor), ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ವೇಗವಾಗಿ ಮುನ್ನುಗ್ಗುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ಜೂಪಿಟರ್ (Jupiter) ಜನಪ್ರಿಯ ಸ್ಕೂಟರ್ ಆಗಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಕಂಪನಿಯು ಇದೇ ಸ್ಕೂಟರ್‌ನ್ನು ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಜೂಪಿಟರ್ ಸಿಎನ್‌ಜಿ ಮಾಡೆಲ್‌ನ್ನು ಪ್ರದರ್ಶನ ಮಾಡಲಾಗಿತ್ತು. ಇದು ವಿಶ್ವದ ಮೊದಲ ಸಿಎನ್‌ಜಿ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಈ ಟಿವಿಎಸ್ ಜೂಪಿಟರ್ ಸಿಎನ್‌ಜಿ ಸ್ಕೂಟರ್ ಶೀಘ್ರದಲ್ಲಿಯೇ ಮಾರಾಟಕ್ಕೂ ಬರಲಿದೆ.
ನೂತನ ಟಿವಿಎಸ್ ಜೂಪಿಟರ್ ಸಿಎನ್‌ಜಿ (TVS Jupiter CNG) ಸ್ಕೂಟರ್, ಅತಿ ಕಡಿಮೆ ಬೆಲೆಗೆ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.90,000 ರಿಂದ 1 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಈ ಸ್ಕೂಟರ್ ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ಅದ್ದೂರಿಯಾಗಿ ಮಾರಾಟಕ್ಕೆ ಬರುವ ಸಾಧ್ಯತೆಯೂ ಇದೆ.

ಈ ಟಿವಿಎಸ್ ಜೂಪಿಟರ್ ಸಿಎನ್‌ಜಿ ಸ್ಕೂಟರ್, ಶಕ್ತಿಯುತವಾದ 124.8 ಸಿಸಿ ಸಿಂಗಲ್ ಸಿಲಿಂಡರ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6,000 ಆರ್‌ಪಿಎಂನಲ್ಲಿ 7.1 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,500 ಆರ್‌ಪಿಎಂನಲ್ಲಿ 9.4 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಹೊಸ ಜೂಪಿಟರ್ ಸಿಎನ್‌ಜಿ ಸ್ಕೂಟರ್, 2 - ಲೀಟರ್ ಪೆಟ್ರೋಲ್ ಹಾಗೂ 1.4 - ಕೆಜಿ ಸಾಮರ್ಥ್ಯದ ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್ ಆಯ್ಕೆಯನ್ನು ಪಡೆದಿದೆ. ಬರೋಬ್ಬರಿ 226 ಕಿಲೋಮೀಟರ್ ಮೈಲೇಜ್ ನೀಡುತ್ತದೆ. ಜೊತೆಗೆ 80.5 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

ನೂತನ ಟಿವಿಎಸ್ ಜೂಪಿಟರ್ ಸಿಎನ್‌ಜಿ ಸ್ಕೂಟರ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಇದು ಎಲ್‌ಇಡಿ ಹೆಡ್‌ಲೈಟ್, ಮೊಬೈಲ್ ಚಾರ್ಜಿಂಗ್ ಪೋರ್ಟ್, ಆಲ್-ಇನ್-ಒನ್ ಲಾಕ್ ಹಾಗೂ ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರ ಎಂಜಿನ್ ಇಕೋ-ಥ್ರಸ್ಟ್ ಫ್ಯುಯೆಲ್-ಇಂಜೆಕ್ಷನ್ & ಇಂಟೆಲಿಗೊ ಟೆಕ್ನಾಲಜಿಯನ್ನು ಹೊಂದಿರಲಿದೆ ಎಂದು ವರದಿಯಾಗಿದೆ.
ಟಿವಿಎಸ್ ಜುಪಿಟರ್ 110 (Tvs Jupiter 110) ಸ್ಕೂಟರ್ ಕೂಡ ಖರೀದಿಗೆ ಲಭ್ಯ: ಇದು ರೂ.78,391 ರಿಂದ ರೂ.92,366 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 113.3 ಸಿಸಿ ಒಬಿಡಿ-2ಬಿ 4-ಸ್ಟ್ರೋಕ್, ಸಿಂಗಲ್ ಸಿಲಿಂಡರ್, ಏರ್ ಕೂಲ್ಡ್ ಎಂಜಿನ್ ಪಡೆದಿದ್ದು, ಡಿಜಿಟಲ್- ಇನ್ಸ್ಟ್ರುಮೆಂಟ್ ಕ್ಲಸ್ಟರ್, ಇಂಟಲಿಜೆಂಟ್ ಸ್ಟಾರ್ಟ್/ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್ ಹಾಗೂ ಯುಎಸ್‌ಬಿ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಿವಿಎಸ್ ಜೂಪಿಟರ್ 125 TVS (Tvs Jupiter 125) ಸಹ ಗ್ರಾಹಕರಿಗೆ ಸಿಗುತ್ತದೆ: ಈ ಸ್ಕೂಟರ್ ರೂ.89,396 ರಿಂದ ರೂ.99,805 ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.15 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.5 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. ಜೊತೆಗೆ 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








