40 Km ಮೈಲೇಜ್.. ಹೊಸ ಟಿವಿಎಸ್ ಎನ್‌ಟಾರ್ಕ್ 150 ಸ್ಕೂಟರ್ ಖರೀದಿಸಬೇಕೇ, ಆನ್-ರೋಡ್ ಬೆಲೆ ಎಷ್ಟು, EMI ಏನು?
ಇತ್ತೀಚೆಗೆ ಹೊಚ್ಚ ಹೊಸ ಟಿವಿಎಸ್ ಎನ್‌ಟಾರ್ಕ್ 150 (TVS Ntorq 150) ಸ್ಕೂಟರ್‌ನ್ನು ಬಿಡುಗಡೆಗೊಳಿಸಲಾಗಿತ್ತು. ಇದು ಹೈಪರ್-ಸ್ಪೋರ್ಟ್ಸ್ ಮಾಡೆಲ್ ಎಂದೇ ಖ್ಯಾತಿ ಗಳಿಸಿದೆ. ಕನಿಷ್ಠ ರೂ.1.09 ಲಕ್ಷ ಹಾಗೂ ಗರಿಷ್ಠ ರೂ.1.18 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ನೂತನ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ಎನ್‌ಟಾರ್ಕ್ 150' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಇದೇ ಸ್ಕೂಟರ್‌ನ ಆನ್-ರೋಡ್ ಬೆಲೆ (On-Road Price) ಹಾಗೂ ಇಎಂಐ (EMI) ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ನೂತನ 'ಟಿವಿಎಸ್ ಎನ್‌ಟಾರ್ಕ್ 150' ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ ಸ್ಟ್ಯಾಂಡರ್ಡ್ ಎನ್‌ಟಾರ್ಕ್ 150 ರೂಪಾಂತರ, ರೂ.1.27 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.20,000 ಡೌನ್-ಪೇಮೆಂಟ್ ಪಾವತಿಸಿ ಮನೆಗೆ ತಂದರೆ, ರೂ.1.07 ಲಕ್ಷವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ಮಾಸಿಕ ರೂ.3,300 ವರೆಗೆ ಇಎಂಐ ಕಟ್ಟಬೇಕು.

ಮತ್ತೊಂದು ಟಿಎಫ್‌ಟಿ ಎನ್‌ಟಾರ್ಕ್ 150 ರೂಪಾಂತರ, ರೂ.1.37 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.20,000 ಡೌನ್-ಪೇಮೆಂಟ್ ಕಟ್ಟಿ ಕೊಂಡುಕೊಂಡರೆ, ರೂ.1.17 ಲಕ್ಷವರೆಗೆ ಸಾಲ ಬಾಕಿಯಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ಹಾಕಿ 3 ವರ್ಷಕ್ಕೆ ತಿಂಗಳಿಗೆ ರೂ.3.600 ವರೆಗೆ ಇಎಂಐ ಪಾವತಿ ಮಾಡಬೇಕು.
ಟಿವಿಎಸ್ ಎನ್‌ಟಾರ್ಕ್ 150 ವಿಶೇಷತೆಗಳೇನು:
ವಿಶೇಷವಾಗಿ ಈ ಸ್ಕೂಟರ್‌ನ್ನು ಯುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿದೆ. ಇದು ಉತ್ತಮವಾದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟರ್ನ್ ಇಂಡಿಕೇಟರ್‌ಗಳು, ಸ್ಪ್ಲಿಟ್ ಗ್ರಾಬ್ ರೈಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್ & 12 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸ್ಟೆಲ್ತ್ ಸಿಲ್ವರ್, ರೇಸಿಂಗ್ ರೆಡ್, ಟರ್ಬೊ ಬ್ಲೂ ಮತ್ತು ನೈಟ್ರೋ ಗ್ರೀನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಎನ್‌ಟಾರ್ಕ್ 150' ಗಾತ್ರದಲ್ಲಿ ಹೆಚ್ಚು ದೊಡ್ಡದಾಗಿದೆ. 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1,285 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 115 ಕೆಜಿ ತೂಕವಿದೆ. 104 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 6.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಈ ಸ್ಕೂಟರ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 149.7 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7,000 ಆರ್‌ಪಿಎಂನಲ್ಲಿ 13.2 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5500 ಆರ್‌ಪಿಎಂನಲ್ಲಿ 14.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರ ಹಾಕುತ್ತದೆ. 35 ರಿಂದ 40 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 5.8 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.

ಇದು ಸ್ಟ್ರೀಟ್ ಹಾಗೂ ರೇಸ್ ಎಂಬ 2 ರೈಡಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ. ಹಾಗೆಯೇ ಹತ್ತಾರು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಎಲ್‌ಸಿಡಿ ಡಿಸ್‌ಪ್ಲೇ & ಫುಲ್ ಟಿಎಫ್‌ಟಿ ಡಿಸ್‌ಪ್ಲೇ ಪಡೆದಿದ್ದು, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಟ್ರಾಕ್ಷನ್ ಕಂಟ್ರೋಲ್‌ನ್ನು ಒಳಗೊಂಡಿದೆ.
ಹೊಸ 'ಟಿವಿಎಸ್ ಎನ್‌ಟಾರ್ಕ್ 150' ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ನೀಡಬಲ್ಲದು. ಅದಕ್ಕಾಗಿ ಮುಂದೆ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ ಮತ್ತು ಹಿಂದೆ (ರೇರ್) ಕಾಯಿಲ್-ಸ್ಪ್ರಿಂಗ್ ಹೈಡ್ರಾಲಿಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) & ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. 22 ಲೀ.ನಷ್ಟು ಅಂಡರ್ ಸೀಟ್ ಸ್ಟೋರೇಜ್‌ನ್ನು ತನ್ನದಾಗಿಸಿಕೊಂಡಿದೆ.
ನಿಮ್ಮ ಗಮನಕ್ಕೆ.. ಈ ಸ್ಕೂಟರ್‌ನ ಆನ್-ರೋಡ್ ಬೆಲೆ ಮತ್ತು ಇಎಂಐ ಆಯ್ಕೆಗಳು ನಗರದಿಂದ ನಗರಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.


Click it and Unblock the Notifications








