TVS X: ಹೊಚ್ಚ ಹೊಸ 'ಟಿವಿಎಸ್ ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ವಿತರಣೆ ಶುರು.. ಬೆಲೆ ಎಷ್ಟು, ವಿಶೇಷತೆಗಳೇನು?
ಟಿವಿಎಸ್ ಮೋಟಾರ್ (TVS Motor), ಖರೀದಿದಾರರ ನೆಚ್ಚಿನ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಬೈಕ್ ಹಾಗೂ ಸ್ಕೂಟರ್‌ಗಳನ್ನು ಸಾಮಾನ್ಯರಿಂದ ಹಿಡಿದು ಶ್ರೀಮಂತ ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಟಿವಿಎಸ್‌ನ ಜನಪ್ರಿಯ ಇ-ಸ್ಕೂಟರ್ ಐಕ್ಯೂಬ್ (iQube) ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ತನ್ನದೆಯಾದ ಪ್ರಾಬಲ್ಯವನ್ನು ಸಾಧಿಸಿದೆ. ಸದ್ಯ, ಕಂಪನಿಯು 2023ರ ಆಗಸ್ಟ್ ತಿಂಗಳಲ್ಲಿ ಬಿಡುಗಡೆಗೊಳಿಸಿದ 'ಎಕ್ಸ್' ಹೆಸರಿನ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಯನ್ನು ಡಿಸೆಂಬರ್‌ನಿಂದಲೇ ಶುರು ಮಾಡಿದೆ ಎಂದು ವರದಿಯಾಗಿದೆ.
ನೂತನ ಟಿವಿಎಸ್ ಎಕ್ಸ್ (TVS X) ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಆಗಿರುವುದರಿಂದ ಸ್ವಲ್ಪ ಹೆಚ್ಚಿನ ದರವನ್ನು ಒಳಗೊಂಡಿದೆ. ರೂ.2.50 ಲಕ್ಷ (ಎಕ್ಸ್ ಶೋರೂಂ - ನವದೆಹಲಿ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಈ ಹೊಸ ಸ್ಕೂಟರ್‌ಗೆ ಎಥರ್ 450 ಅಪೆಕ್ಸ್ (Ather 450 Apex) ನೇರ ಎದುರಾಳಿಯಾಗಿದೆ.

ಈ ಟಿವಿಎಸ್ ಎಕ್ಸ್ ಇ-ಸ್ಕೂಟರ್, 4.44 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 11 ಕೆಡಬ್ಲ್ಯೂ ಪೀಕ್ ಪವರ್ ಮತ್ತು 40 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಹೊಸ ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್, ಸಂಪೂರ್ಣ ಚಾರ್ಜ್‌ನಲ್ಲಿ 140 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 2.6 ಸೆಕೆಂಡುಗಳಲ್ಲಿ 0-40 ಕೆಎಂಪಿಹೆಚ್ ವೇಗವನ್ನು ಪಡೆಯುತ್ತದೆ. 3 ಕೆಡಬ್ಲ್ಯೂ ಫಿಕ್ಸೆಡ್ ಚಾರ್ಜರ್ ಉಪಯೋಗ ಮಾಡಿದಾಗ ಶೇಕಡ 0 ರಿಂದ 50% ಚಾರ್ಜ್ ಆಗಲು 1 ಗಂಟೆ ತೆಗೆದುಕೊಳ್ಳುತ್ತದೆ.

ಈ ಟಿವಿಎಸ್ ಎಕ್ಸ್ ಇ-ಸ್ಕೂಟರ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಟಿಎಫ್‌ಟಿ ಕನ್ಸೋಲ್, ಕ್ರೂಸ್ ಕಂಟ್ರೋಲ್, ನವ್‌ಪ್ರೊ ನ್ಯಾವಿಗೇಷನ್ ಮತ್ತು ಜಿಯೋಫೆನ್ಸಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 175 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 770 ಎಂಎಂ ಸೀಟ್ ಹೈಟ್ ಅನ್ನು ಒಳಗೊಂಡಿದೆ.
ನೂತನ ಟಿವಿಎಸ್ ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಜೊತೆಗೆ ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಸಹ ಪಡೆದಿದೆ.

ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಕೂಡ ಖರೀದಿಗೆ ಲಭ್ಯ: ಇದು ಕನಿಷ್ಠ ರೂ.1.07 ಲಕ್ಷ ಮತ್ತು ಗರಿಷ್ಠ ರೂ.1.37 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 3.04 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 5.1 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 75 ರಿಂದ 150 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ. ಜೊತೆಗೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








