Ultraviolette: ಬೆಂಗಳೂರಿನ ಅಲ್ಟ್ರಾವೈಲೆಟ್‌ ಕಂಪನಿಯಿಂದ ಹೊಸ ಆಫ್-ರೋಡ್ ಇ-ಬೈಕ್ ಬಿಡುಗಡೆ.. ಬೆಲೆ ಇಷ್ಟೇನಾ?

ಬೆಂಗಳೂರಿನ ಅಲ್ಟ್ರಾವೈಲೆಟ್ (Ultraviolette), ಪ್ರಖ್ಯಾತ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two Wheeler) ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿಂದು ಮೊದಲ 'ಟೆಸ್ಸೆರಾಕ್ಟ್' ಇ-ಸ್ಕೂಟರ್‌ನ್ನು ಬಿಡುಗಡೆಗೊಳಿಸಿದೆ. ಇದರೊಟ್ಟಿಗೆ ಆಫ್-ರೋಡ್ ಎಲೆಕ್ಟ್ರಿಕ್ ಬೈಕ್ 'ಶಾಕ್‌ವೇವ್'ನ್ನು ಮಾರಾಟಕ್ಕೆ ತಂದಿದೆ. ಇದು ಹೆಚ್ಚು ಅತ್ಯಾಧುನಿಕವಾಗಿದೆ. ಬನ್ನಿ.. ನೂತನ ಇ-ಮೋಟಾರ್‌ಸೈಕಲ್ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಹೊಸ ಅಲ್ಟ್ರಾವೈಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಬೈಕ್ (Ultraviolette Shockwave Electric Bike) ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ರೂ.1.75 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಆದರೆ, ಮೊದಲ 1,000 ಖರೀದಿದಾರರು ರೂ.1.50 ಲಕ್ಷ ಎಕ್ಸ್-ಶೋರೂಂ ಬೆಲೆಯಲ್ಲಿ ಕೊಂಡುಕೊಳ್ಳಬಹುದು.

New Ultraviolette Shockwave Electric Bike Launched Details

ನೂತನ ಅಲ್ಟ್ರಾವೈಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್, ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಇದು ಸಾಕಷ್ಟು ಸ್ಲಿಮ್ ಆಗಿದ್ದು, ಡುಯಲ್ ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು ಎತ್ತರದಲ್ಲಿರುವ ಹ್ಯಾಂಡಲ್‌ಬಾರ್‌ನ್ನು ಪಡೆದಿದೆ. ಕಾಸ್ಮಿಕ್ ಬ್ಲ್ಯಾಕ್ & ಫ್ರಾಸ್ಟ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಶಾಕ್‌ವೇವ್ ಇ-ಬೈಕ್ 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 165 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 14.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 505 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

New Ultraviolette Shockwave Electric Bike Launched Details

ಹೊಸ ಅಲ್ಟ್ರಾವೈಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್, 120 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 2.9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಜೊತೆಗೆ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 19/17-ಇಂಚಿನ ವೈರ್ ಸ್ಪೋಕ್ ವೀಲ್‌ಗಳು, 90/90 ಆರ್19 ಮತ್ತು 110/90 ಆರ್17 ಅಳತೆಯ ಡುಯಲ್-ಪರ್ಪಸ್ ಟೈರ್‌ಗಳನ್ನು ಪಡೆದಿದೆ.

ನೂತನ ಅಲ್ಟ್ರಾವೈಲೆಟ್ ಶಾಕ್‌ವೇವ್ ಇ-ಮೋಟಾರ್‌ಸೈಕಲ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಇದರೊಟ್ಟಿಗೆ ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದ್ದು, ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

New Ultraviolette Shockwave Electric Bike Launched Details

ಈ ಅಲ್ಟ್ರಾವೈಲೆಟ್ ಶಾಕ್‌ವೇವ್‌ ಇ-ಮೋಟಾರ್‌ಸೈಕಲ್‌ನ ಬುಕ್ಕಿಂಗ್‌ಗಳು ಕೂಡ ಶುರುವಾಗಿದೆ. ಆಸಕ್ತ ಗ್ರಾಹಕರು ಅಧಿಕೃತ ವೆಬ್‌ಸೈಟ್ ಹಾಗೂ ಕಂಪನಿಯ ಯಾವುದೇ ಡೀಲರ್‌ಶಿಪ್‌ಗಳಿಗೆ ಭೇಟಿ ನೀಡಿ, ಆರ್ಡರ್ ಮಾಡಬಹುದು. ಬಹುತೇಕ 2026ರ ಮೊದಲ ತ್ರೈಮಾಸಿಕದಲ್ಲಿ ನೂತನ ಎಲೆಕ್ಟ್ರಿಕ್ ಬೈಕ್ ವಿತರಣೆಗಳು ಶುರುವಾಗುವ ಸಾಧ್ಯತೆಯಿದೆ.

ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್‌ ಸಹ ಖರೀದಿಗೆ ಲಭ್ಯ: ಇದು ರೂ.1.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 261 ಕಿಲೋಮೀಟರ್‌ವರೆಗೂ ಓಡುತ್ತದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕೀಲೆಸ್ ಆಕ್ಸೆಸ್ ಮತ್ತು ಮ್ಯೂಸಿಕ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, March 5, 2025, 16:53 [IST]
English summary
New ultraviolette shockwave electric bike launched details
Read more on ultraviolette india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+