ನಿನ್ನೆ ಬಿಡುಗಡೆ.. ದರವೂ ಅಗ್ಗ, ಅಲ್ಟ್ರಾವೈಲೆಟ್‌ನ ಪ್ರಪ್ರಥಮ ಇ-ಸ್ಕೂಟರ್ 'ಟೆಸ್ಸೆರಾಕ್ಟ್'ನ ಪ್ರಮುಖಾಂಶಗಳಿವು!

ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಅಲ್ಟ್ರಾವೈಲೆಟ್ (Ultraviolette), ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಗ್ರಾಹಕರಿಗಾಗಿ ಬುಧವಾರ ಹೊಚ್ಚ ಹೊಸ ಟೆಸ್ಸೆರಾಕ್ಟ್ (Tesseract) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮಾರಾಟಕ್ಕೆ ತಂದಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯಲಿದೆ. ನಾವಿಲ್ಲಿ ಈ ನೂತನ 'ಅಲ್ಟ್ರಾವೈಲೆಟ್‌ ಟೆಸ್ಸೆರಾಕ್ಟ್' ಇ-ಸ್ಕೂಟರ್‌ನ ಪ್ರಮುಖಾಂಶಗಳ ಕುರಿತಂತೆ ತಿಳಿಸಿಕೊಟ್ಟಿದ್ದೇವೆ.

ಬೆಲೆ & ಬುಕ್ಕಿಂಗ್ (Price & Booking): ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್‌, ಬಜೆಟ್ ಬೆಲೆಯನ್ನು ಹೊಂದಿದ್ದು, ರೂ.1.45 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಆದರೂ, ಮೊದಲ 10,000 ಖರೀದಿದಾರರಿಗೆ ಈ ನೂತನ ಎಲೆಕ್ಟ್ರಿಕ್ ಸ್ಕೂಟರ್ 1.20 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ದೊರೆಯುತ್ತದೆ. ಈಗಾಗಲೇ ಬುಕ್ಕಿಂಗ್‌ ಆರಂಭವಾಗಿದ್ದು, ರೂ.999 ಮುಂಗಡ ಹಣವನ್ನು ಪಾವತಿ ಮಾಡಿ ಕಾಯ್ದಿರಿಸಬಹುದು.

New Ultraviolette Tesseract Electric Scooter Top Things You Should Must Know

ವಿನ್ಯಾಸ & ಬಣ್ಣಗಳು (Design & Colors): ಈ ಎಲೆಕ್ಟ್ರಿಕ್ ಸ್ಕೂಟರ್‌ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಹಾಗೂ ಫ್ಲೋಟಿಂಗ್ ಡಿಆರ್‌ಎಲ್‌ಗಳನ್ನು ಪಡೆದಿದೆ. ಇದರೊಟ್ಟಿಗೆ ಡೆಸರ್ಟ್ ಬ್ಲ್ಯಾಕ್, ಸೋನಿಕ್ ಪಿಂಕ್ & ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳನ್ನು ತನ್ನದಾಗಿಸಿಕೊಂಡಿದೆ.

ಕಾರ್ಯಕ್ಷಮತೆ (Performance): ನೂತನ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಇ-ಸ್ಕೂಟರ್‌ 3.5 ಕೆಡಬ್ಲ್ಯೂಹೆಚ್, 5 ಕೆಡಬ್ಲ್ಯೂಹೆಚ್ ಹಾಗೂ 6 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 261 ಕಿ.ಮೀ ವರೆಗೂ ರೇಂಜ್ (ಮೈಲೇಜ್) ಕೊಡುತ್ತದೆ. ಕೇವಲ 2.9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

New Ultraviolette Tesseract Electric Scooter Top Things You Should Must Know

ವೈಶಿಷ್ಟ್ಯಗಳು (Features): ಈ ಎಲೆಕ್ಟ್ರಿಕ್ ಸ್ಕೂಟರ್‌ ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್, ಹಿಲ್ ಹೋಲ್ಡ್, ಕ್ರೂಸ್ ಕಂಟ್ರೋಲ್, ನ್ಯಾವಿಗೇಷನ್ ಹಾಗೂ ಮ್ಯೂಸಿಕ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ 34-ಲೀ.ನ ಅಂಡರ್ ಸೀಟ್ ಸ್ಟೋರೇಜ್ ಮತ್ತು 14-ಇಂಚಿನ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಇ-ಸ್ಕೂಟರ್‌ ಸವಾರರ ರಕ್ಷಣೆಗಾಗಿ ಫ್ರಂಟ್ & ರೇರ್ ಡಿಸ್ಕ್ ಬ್ರೇಕ್‌ಗಳು ಡುಯಲ್ ಚಾನೆಲ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್ ಮತ್ತು ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್‌ನ್ನು ಹೊಂದಿದೆ.

New Ultraviolette Tesseract Electric Scooter Top Things You Should Must Know

ಅಲ್ಟ್ರಾವೈಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಕೂಡ ಖರೀದಿಗೆ ಲಭ್ಯ: ಇದು ರೂ.1.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 165 ಕಿ.ಮೀ ವರೆಗೆ ಓಡುತ್ತದೆ. 120 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದ್ದು, ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ಸದ್ಯ ಬುಕ್ಕಿಂಗ್‌ ಪ್ರಕ್ರಿಯೆ ಆರಂಭವಾಗಿದ್ದು, 2026ರ ಮೊದಲ ತ್ರೈಮಾಸಿಕದಲ್ಲಿ ವಿತರಣೆಗಳು ಶುರುವಾಗುವ ಸಾಧ್ಯತೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, March 6, 2025, 11:52 [IST]
English summary
New ultraviolette tesseract electric scooter top things you should must know
Read more on ultraviolette india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+