ಫ್ರೈಡೇ ಲಾಂಚ್.. 140 Km ರೇಂಜ್, ಅಗ್ಗದ ಬೆಲೆ.. ಬೆಂಗಳೂರು ಕಂಪನಿಯ ಹೊಸ ಇ-ಸ್ಕೂಟರ್ ಕುರಿತ ಪ್ರಮುಖಾಂಶಗಳಿವು!
ಬೆಂಗಳೂರು (Bengaluru) ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ನ್ಯೂಮೆರೋಸ್ ಮೋಟಾರ್ಸ್ (Numeros Motors), ಗುರುತಿಸಿಕೊಂಡಿದೆ. ನವದೆಹಲಿಯಲ್ಲಿ ಆದ್ದೂರಿಯಾಗಿ ಜರುಗುತ್ತಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಶುಕ್ರವಾರ ಹೊಚ್ಚ ಹೊಸ ಡಿಪ್ಲೋಸ್ ಮ್ಯಾಕ್ಸ್ (Diplos Max) ಸ್ಕೂಟರ್‌ನ್ನು ಬಿಡುಗಡೆಗೊಳಿಸಿತ್ತು. ಇದು ಅತ್ಯುತ್ತಮವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ.. ಈ ನೂತನ ಎಲೆಕ್ಟ್ರಿಕ್ ಸ್ಕೂಟರ್ ಕುರಿತ ಪ್ರಮುಖಾಂಶಗಳನ್ನು ತಿಳಿಯೋಣ.
ಬೆಲೆ (Price): ಹೊಸ ನ್ಯೂಮೆರೋಸ್ ಡಿಪ್ಲೋಸ್ ಮ್ಯಾಕ್ಸ್ (Numeros Diplos Max) ಎಲೆಕ್ಟ್ರಿಕ್ ಸ್ಕೂಟರ್, ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಮಾರಾಟಕ್ಕೆ ಬಂದಿದೆ. ಇದು ರೂ.1,09,999 (ಎಕ್ಸ್ ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ನಗರ ಸಂಚಾರಕ್ಕೆ ಹೆಚ್ಚು ಸೂಕ್ತವಾಗಿರುವುದರಿಂದ ಆಫೀಸ್‌ಗೆ ಕೆಲಸಕ್ಕೆ ಹೋಗುವವರು ಸುಲಭವಾಗಿ ಖರೀದಿ ಮಾಡಬಹುದು.

ವಿನ್ಯಾಸ (Design): ನೂತನ ಇ-ಸ್ಕೂಟರ್ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ರೌಂಡ್-ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್ ಮತ್ತು ಓವಲ್ ಎಲ್ಇಡಿ ಬ್ರೇಕ್ ಲೈಟಿಂಗ್, ಟರ್ನ್ ಸಿಗ್ನಲ್‌ಗಳನ್ನು ಹೊಂದಿದೆ. ಜೊತೆಗೆ ಇದರ ಬಾಡಿ ಪ್ಯಾನೆಲ್‌ಗಳು ಹೆಚ್ಚು ಗಟ್ಟಿಮುಟ್ಟಾಗಿದ್ದು, ಸೀಟ್‌ಗಳು ಕೂಡ ವಿಶಾಲವಾಗಿವೆ. ಸವಾರರು ಆರಾಮದಾಯಕವಾಗಿ ಪ್ರಯಾಣ ಮಾಡಬಹುದು.
ಕಾರ್ಯಕ್ಷಮತೆ (Performance): ಈ ನ್ಯೂಮೆರೋಸ್ ಡಿಪ್ಲೋಸ್ ಮ್ಯಾಕ್ಸ್ ಎಲೆಕ್ಟ್ರಿಕ್ ಸ್ಕೂಟರ್, 3.7 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಡುಯಲ್- ಬ್ಯಾಟರಿ ಪ್ಯಾಕ್‌ನ್ನು ಆಯ್ಕೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 140 ಕಿಲೋಮೀಟರ್ ಓಡುತ್ತದೆ. ಇದರಲ್ಲಿ ಹಬ್ ಎಲೆಕ್ಟ್ರಿಕ್ ಮೋಟರ್ ಬಳಕೆ ಮಾಡಲಾಗಿದ್ದು, 3.58 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) & 138 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಹೊಸ ಡಿಪ್ಲೋಸ್ ಮ್ಯಾಕ್ಸ್ ಇ-ಸ್ಕೂಟರ್ 63 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೋಬ್ಬರಿ 137 ಕೆಜಿ ತೂಕವಿದೆ. 1,960 ಎಂಎಂ ಉದ್ದ, 720 ಎಂಎಂ ಅಗಲ ಮತ್ತು 1,125 ಎಂಎಂ ಎತ್ತರವೂ ಇದೆ. 150 ಎಂಎಂ ಇರುವ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,430 ಎಂಎಂ ಉದ್ದದ ವೀಲ್‌ಬೇಸ್‌ನ್ನು ಪಡೆದಿದೆ.
ವೈಶಿಷ್ಟ್ಯಗಳ (Features): ಈ ಎಲೆಕ್ಟ್ರಿಕ್ ಸ್ಕೂಟರ್ ಸಣ್ಣದಾದ ಇನ್ಸ್ಟ್ರುಮೆಂಟ್ ಸ್ಕ್ರೀನ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ನೂತನ ಸ್ಕೂಟರ್‌ನ್ನು 1.2 ಕೆಡಬ್ಲ್ಯೂ ಚಾರ್ಜರ್‌ಗೆ ಪ್ಲಗ್ ಮಾಡುವುದರೊಂದಿಗೂ ಸುಲಭವಾಗಿ ಚಾರ್ಜ್ ಮಾಡಬಹುದು. ಇದು ಭರ್ತಿಯಾಗಿ ಚಾರ್ಜ್ ಆಗುವುದಕ್ಕೆ 3 ರಿಂದ 4 ಗಂಟೆ ಸಮಯಾವಕಾಶವನ್ನು ತೆಗೆದುಕೊಳ್ಳುತ್ತದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಹೊಸ ಸ್ಕೂಟರ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ & ಹಿಂಭಾಗ (ರೇರ್) ಅಡ್ಜೆಸ್ಟೇಬಲ್ ಡುಯಲ್ ಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸವಾರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. 12-ಇಂಚಿನ ವೀಲ್‌ಗಳು ಮತ್ತು 90/90 ಅಳತೆಯ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








