Ola: ದಾಖಲೆ ಸಂಖ್ಯೆಯಲ್ಲಿ ಓಲಾ ಇ-ಸ್ಕೂಟರ್‌ಗಳು ಮಾರಾಟ.. ಮುಗಿಬಿದ್ದ ಗ್ರಾಹಕರು!
ಬೆಂಗಳೂರು ಮೂಲದ ಓಲಾ ಎಲೆಕ್ಟ್ರಿಕ್ (Ola Electric), ಪ್ರಖ್ಯಾತ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೆಸರುವಾಸಿಯಾಗಿದೆ. ಇತ್ತೀಚೆಗೆ 'ರೋಡ್‌ಸ್ಟರ್' ಎಲೆಕ್ಟ್ರಿಕ್ ಬೈಕ್ ಬಿಡುಗಡೆಗೊಳಿಸಿ, ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಸದ್ಯ, ಓಲಾ ಕಂಪನಿಯು ಈ ಫೆಬ್ರವರಿ (February) ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ಎಸ್1 (S1) ಸೀರೀಸ್ ಎಲೆಕ್ಟ್ರಿಕ್ ಸ್ಕೂಟರ್‌ಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ತಿಂಗಳು (ಫೆಬ್ರವರಿ - 2025) ಓಲಾ ಎಲೆಕ್ಟ್ರಿಕ್, ಸರಿ ಸುಮಾರು 25,000ಕ್ಕೂ ಅಧಿಕ ಎಸ್1 ಸೀರೀಸ್ ಇ-ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. ಇದರೊಂದಿಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two Wheeler) ಮಾರುಕಟ್ಟೆಯಲ್ಲಿ ಶೇಕಡ 28% ಪಾಲನ್ನು ಹೊಂದಿದೆ. ಈ ಮೂಲಕ ಕಂಪನಿಯು ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ.

ಓಲಾ ಎಸ್1 ಸೀರೀಸ್ ಇ-ಸ್ಕೂಟರ್‌ಗಳ ವಿಶೇಷತೆಗಳೇನು: ಇದು ಹಲವು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಎಸ್1 ಎಕ್ಸ್ ಮಾಡೆಲ್ 2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ರೂ.79,999 ರಿಂದ ರೂ.89,999 (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 108 ರಿಂದ 176 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಓಲಾ ಎಸ್1 ಎಕ್ಸ್ ಪ್ಲಸ್ ಮಾಡೆಲ್ ಬಗ್ಗೆ ಹೇಳುವುದಾದರೆ, ಇದು ರೂ.1,07,999 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 242 ಕಿಲೋಮೀಟರ್ ಓಡುತ್ತದೆ. 125 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಓಲಾ ಎಸ್1 ಪ್ರೊ ಹಾಗೂ ಪ್ರೊ ಪ್ಲಸ್ ಮಾಡೆಲ್‌ಗಳ ಕುರಿತಂತೆ ಮಾತನಾಡುವುದಾದರೆ, ಇದರ ಎಸ್1 ಪ್ರೊ ಇ-ಸ್ಕೂಟರ್ ರೂ.1,14,999 (ಎಕ್ಸ್- ಶೋರೂಂ) ದರವನ್ನು ಒಳಗೊಂಡಿದೆ. 3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 176 ಕಿಲೋಮೀಟರ್ ಕ್ರಮಿಸುತ್ತದೆ. ಮತ್ತೊಂದು ಪ್ರೊ ಪ್ಲಸ್ ಇ-ಸ್ಕೂಟರ್ ರೂ.1,54,999 ಬೆಲೆಯನ್ನು ಪಡೆದಿದೆ. 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಒಳಗೊಂಡಿದ್ದು, ಪೂರ್ತಿ ಚಾರ್ಜ್‌ನಲ್ಲಿ 242 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಓಲಾ ರೋಡ್‌ಸ್ಟರ್ ಎಕ್ಸ್ ಇ-ಬೈಕ್ ಕೂಡ ಮಾರಾಟಕ್ಕೆ ಬಂದಿದೆ.. ಇದು ರೋಡ್‌ಸ್ಟರ್ ಎಕ್ಸ್ ಹಾಗೂ ರೋಡ್‌ಸ್ಟರ್ ಎಕ್ಸ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಸಾಮಾನ್ಯ ರೋಡ್‌ಸ್ಟರ್ ಎಕ್ಸ್ ಮಾಡೆಲ್, ಬ್ಯಾಟರಿ ಪ್ಯಾಕ್‌ಗೆ ಅನುಗುಣವಾಗಿ ರೂ.75,000, ರೂ.85,000 ರಿಂದ ರೂ.95,000 (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 252 ಕಿಲೋಮೀಟರ್‌ಗೆ ರೇಂಜ್ (ಮೈಲೇಜ್) ನೀಡುತ್ತದೆ.
ಮತ್ತೊಂದು ಓಲಾ ರೋಡ್‌ಸ್ಟರ್ ಎಕ್ಸ್ ಪ್ಲಸ್ ಮಾಡೆಲ್, 4.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 9.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ರೂ.1,04,999 ಹಾಗೂ ರೂ.1,54,999 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 501 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








