ಪೆಟ್ರೋಲ್‌ಗೆ ಹೇಳಿ ಗುಡ್‌ಬೈ.. ಫೆ.5ರಂದು ಓಲಾ ರೋಡ್‌ಸ್ಟರ್ ಎಕ್ಸ್ ಬೈಕ್ ಬಿಡುಗಡೆ, ಬೆಲೆ ಎಷ್ಟು, ವಿಶೇಷತೆಗಳೇನು?
ಬೆಂಗಳೂರು ಮೂಲದ ಓಲಾ ಎಲೆಕ್ಟ್ರಿಕ್ (Ola Electric), ಹೊಚ್ಚ ಹೊಸ 'ರೋಡ್‌ಸ್ಟರ್ ಎಕ್ಸ್' ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಬಿಡುಗಡೆ ಸಂಬಂಧ ಎಲ್ಲ ತಯಾರಿಗಳನ್ನು ಮಾಡಿಕೊಂಡಿದೆ. ನೂತನ ಇ-ಬೈಕ್‌ನ್ನು ಇದೇ 5 ರಂದು ಅದ್ದೂರಿಯಾಗಿ ಮಾರಾಟಕ್ಕೆ ತರಲಿದೆ. ಈ ಬಗ್ಗೆ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿಯೂ ಕಂಪನಿಯು ಮಾಹಿತಿ ನೀಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಈ ತಿಂಗಳ 15ರ ಬಳಿಕ, 'ರೋಡ್‌ಸ್ಟರ್ ಎಕ್ಸ್' ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ವಿತರಣೆಗಳು ಕೂಡ ಶುರುವಾಗಲಿದೆ.
ಈಗಾಗಲೇ, ನೂತನ ಓಲಾ ರೋಡ್‌ಸ್ಟರ್ ಎಕ್ಸ್ (Ola Roadster X) ಇ-ಬೈಕ್ ಉತ್ಪಾದನೆ ಸಹ ಆರಂಭಗೊಂಡಿದೆ. 2024ರ ಆಗಸ್ಟ್ ತಿಂಗಳಲ್ಲೇ ಹೊಸ 'ರೋಡ್‌ಸ್ಟರ್' ಸರಣಿಯ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‍ಗಳನ್ನು ಕಂಪನಿಯು ಪರಿಚಯಿಸಿತ್ತು. ಆಗಲೇ, ಈ ಓಲಾ ರೋಡ್‌ಸ್ಟರ್ ಎಕ್ಸ್ ಆರಂಭಿಕ ಶ್ರೇಣಿ ರೂಪಾಂತರ (ಎಂಟ್ರಿ ಲೆವೆಲ್ ವೇರಿಯೆಂಟ್) ಆಗಿದೆ ಎಂದು ಕಂಪನಿಯೇ ಹೇಳಿತ್ತು.

ಈ ಹಿಂದೆ, ಓಲಾ ಎಲೆಕ್ಟ್ರಿಕ್ ಬಹಿರಂಗಪಡಿಸಲಾದ ಮಾಹಿತಿ ಪ್ರಕಾರ, ನೂತನ ರೋಡ್‌ಸ್ಟರ್ ಎಕ್ಸ್ ಇ-ಬೈಕ್ 2.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 4.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಕ್ರಮವಾಗಿ ರೂ.74,999, ರೂ.84,999 ಮತ್ತು ರೂ.99,999 ಎಕ್ಸ್-ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.
ಹೊಸ ರೋಡ್‌ಸ್ಟರ್ ಎಕ್ಸ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್, 11 ಕೆಡಬ್ಲ್ಯೂ ಸಾಮರ್ಥ್ಯದ ಎಲೆಕ್ಟ್ರಿಕ್ ಮೋಟಾರ್ ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 200 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 124 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 2.8 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಸಹ ಪಡೆಯಲಿದೆ.

ನೂತನ ಇ-ಬೈಕ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. 4.3-ಇಂಚಿನ ಎಲ್‌ಸಿಡಿ ಸೆಗ್ಮೆಂಟ್ ಡಿಸ್‌ಪ್ಲೇ, ಓಲಾ ಮ್ಯಾಪ್ ನ್ಯಾವಿಗೇಷನ್ (ಟರ್ನ್- ಬೈ-ಟರ್ನ್), ಕ್ರೂಸ್ ಕಂಟ್ರೋಲ್, ಡಿಐವೈ ಮೋಡ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಒಟಿಎ ಅಪ್ಡೇಟ್ಸ್, ಮೋಟಾರ್‌ಸೈಕಲ್ ಡಿಜಿಟಲ್ ಕೀ ಅನ್‌ಲಾಕ್ ಮತ್ತು 18-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಇಕೋ, ನಾರ್ಮಲ್, ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫ್ರಂಟ್ ಪೋರ್ಕ್ಸ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಜೊತೆಗೆ ಸಿಬಿಎಸ್ (ಕಾಂಬಿ ಬ್ರೇಕಿಂಗ್ ಸಿಸ್ಟಮ್) ಅನ್ನು ತನ್ನದಾಗಿಸಿಕೊಂಡಿದೆ.
ಇನ್ನು, ಓಲಾ ರೋಡ್‌ಸ್ಟರ್ ಮೆತ್ತೆರಡು ಮಾಡೆಲ್‌ಗಳು ಕೂಡ ಅತಿ ಶೀಘ್ರದಲ್ಲೇ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. 'ರೋಡ್‌ಸ್ಟರ್' ಎಲೆಕ್ಟ್ರಿಕ್ ಬೈಕ್ ರೂ.1,04,999 ರಿಂದ ರೂ.1,39,999 ಎಕ್ಸ್-ಶೋರೂಂ ದರವನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 248 ಕಿಲೋಮೀಟರ್‌ವರೆಗೆ ಓಡುತ್ತದೆ. ಮತ್ತೊಂದು ರೋಡ್‌ಸ್ಟರ್ ಪ್ರೊ ರೂ.1,99,999 ರಿಂದ ರೂ.2,49,999 ಎಕ್ಸ್-ಶೋರೂಂ ಬೆಲೆಯನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 579 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








