ರಿವರ್ಸ್ ಮೋಡ್‌ನ ಓಲಾದ ಮೊದಲ ಇ-ಬೈಕ್ ಫ್ಯಾಕ್ಟರಿಯಿಂದ ಹೊರ ಬಂತು.. ಶೀಘ್ರ ನಿಮ್ಮ ಮನೆಗೆ, ಬೆಲೆ ಎಷ್ಟು?
ಬೆಂಗಳೂರು ಮೂಲದ ಓಲಾ ಎಲೆಕ್ಟ್ರಿಕ್ (Ola Electric), ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ (Two Wheeler) ಕಂಪನಿಯಾಗಿ ಗುರುತಿಸಿಕೊಂಡಿದೆ. ಕಳೆದ ಫೆಬ್ರವರಿಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮೊಟ್ಟ ಮೊದಲ ಇ-ಬೈಕ್ 'ರೋಡ್‌ಸ್ಟರ್ ಎಕ್ಸ್'ನ್ನು ಬಹಳ ಅದ್ದೂರಿಯಾಗಿಯೂ ಬಿಡುಗಡೆಗೊಳಿಸಿತ್ತು. ಸದ್ಯ, ಈ ನೂತನ ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ನ ಉತ್ಪಾದನೆಗೆ ಹೆಚ್ಚಿನ ವೇಗ ನೀಡಲಾಗಿದ್ದು, ರಸ್ತೆಗಿಳಿಯಲು ಸಂಪೂರ್ಣವಾಗಿ ಸಿದ್ದಗೊಂಡಿರುವ ಹೊಚ್ಚ ಹೊಸ 'ರೋಡ್‌ಸ್ಟರ್ ಎಕ್ಸ್' ಇ-ಬೈಕ್‌ನ್ನು ತಯಾರಿಕಾ ಘಟಕದಿಂದ ಹೊರತರಲಾಗಿದೆ. ಕೆಲವೇ ದಿನಗಳಲ್ಲಿ ವಿತರಣೆಯೂ ಶುರುವಾಗುವ ನಿರೀಕ್ಷೆಯಿದೆ.
ಈ ಕುರಿತಂತೆ 'ಎಕ್ಸ್' ಖಾತೆಯಲ್ಲಿ ಓಲಾ ಎಲೆಕ್ಟ್ರಿಕ್ ಸಿಇಒ ಭವೀಶ್ ಅಗರ್ವಾಲ್ (Bhavish Aggarwal) ಅವರು ಪೋಸ್ಟ್ ಮಾಡಿ, ಸಂತಸವನ್ನು ಹಂಚಿಕೊಂಡಿದ್ದಾರೆ. 'ಇಂದು ನಮ್ಮ ಮೊದಲ 'ರೋಡ್‌ಸ್ಟರ್ ಎಕ್ಸ್' ಬೈಕ್‌ನ್ನು ಹೊರತರಲಾಗಿದೆ. ಈ ಮೂಲಕ 'ಇವಿ' ಕ್ರಾಂತಿಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಾಗುತ್ತದೆ. ಭಾರತದಲ್ಲಿ ಮೋಟಾರ್‌ಸೈಕಲ್‌ಗಳ ಭವಿಷ್ಯವನ್ನು ಬೆಳಗಲು ಅವಿರತವಾಗಿ ಶ್ರಮಿಸಿದ ನಮ್ಮ ತಂಡದ ಬಗ್ಗೆ ತುಂಬಾ ಹೆಮ್ಮೆಯಿದೆ' ಎಂದು ಹೇಳಿದ್ದಾರೆ.

ನೂತನ ಓಲಾ ರೋಡ್‌ಸ್ಟರ್ ಎಕ್ಸ್ (Ola Roadster X) ಎಲೆಕ್ಟ್ರಿಕ್ ಬೈಕ್, ಎರಡು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅವುಗಳಲ್ಲಿ ರೋಡ್‌ಸ್ಟರ್ ಎಕ್ಸ್ (Roadster X) ಎಂಟ್ರಿ ಲೆವೆಲ್ ಮಾಡೆಲ್ ಆಗಿದ್ದು, ರೋಡ್‌ಸ್ಟರ್ ಎಕ್ಸ್ ಪ್ಲಸ್ (Roadster X Plus) ಟಾಪ್ ಎಂಡ್ ಮಾಡೆಲ್ ಎಂದೇ ಹೆಸರುವಾಸಿಯಾಗಿದೆ.
ಸ್ಟ್ಯಾಂಡರ್ಡ್ ಓಲಾ ರೋಡ್‌ಸ್ಟರ್ ಎಕ್ಸ್ ಮಾಡೆಲ್, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಇದು ರೂ.84,999 ರಿಂದ ರೂ.1.05 ಎಕ್ಸ್-ಶೋರೂಂ ದರವನ್ನು ಪಡೆದಿದೆ. 2.5 ಕೆಡಬ್ಲ್ಯೂಹೆಚ್, 3.5 ಕೆಡಬ್ಲ್ಯೂಹೆಚ್ ಹಾಗೂ 4.5 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 252 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.

ಈ ರೋಡ್‌ಸ್ಟರ್ ಎಕ್ಸ್ ಬೈಕ್, 125 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಇಕೋ, ನಾರ್ಮಲ್ ಮತ್ತು ಸ್ಪೋರ್ಟ್ ಎಂಬ ಮೂರು ಅತ್ಯಾಧುನಿಕ ರೈಡಿಂಗ್ ಮೋಡ್‌ಗಳನ್ನು ಪಡೆದಿದೆ. 4.3-ಇಂಚಿನ ಎಲ್‌ಸಿಡಿ ಸೆಗ್ಮೆಂಟ್ ಡಿಸ್‌ಪ್ಲೇ, ಟರ್ನ್- ಬೈ-ಟರ್ನ್), ಕ್ರೂಸ್ ಕಂಟ್ರೋಲ್, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಒಟಿಎ ಅಪ್‌ಡೇಟ್‌ಗಳು ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ವಿಶೇಷವಾಗಿ ಹೊಸ ಓಲಾ ರೋಡ್‌ಸ್ಟರ್ ಎಕ್ಸ್ ಮಾಡೆಲ್, ರಿವರ್ಸ್ ಮೋಡ್‌ನ್ನು ಹೊಂದಿದೆ. ಸುರಕ್ಷತೆಗೂ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಪೋರ್ಕ್ಸ್ ಮತ್ತು ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ಸ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಪಡೆದಿದೆ. ಇದರೊಂದಿಗೆ ಸಿಂಗಲ್-ಚಾನೆಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಓಲಾ ರೋಡ್‌ಸ್ಟರ್ ಎಕ್ಸ್ ಪ್ಲಸ್ (Ola Roadster X Plus) ಶಕ್ತಿಯುತವಾಗಿರುವ ಮಾಡೆಲ್ ಆಗಿದೆ. ಇದು ಹೆಚ್ಚು-ಕಮ್ಮಿ ರೋಡ್‌ಸ್ಟರ್ ಎಕ್ಸ್ ಮಾಡೆಲ್‌ನಂತೆಯೇ ವೈಶಿಷ್ಟ್ಯಗಳನ್ನು ಹೊಂದಿದ್ದು, ರೂ.1.15 ಲಕ್ಷದಿಂದ ರೂ.1.85 ಲಕ್ಷ ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ. 4.5 ಕೆಡಬ್ಲ್ಯೂಹೆಚ್ & 9.1 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 501 ಕಿಲೋಮೀಟರ್‌ಗೆ ಕ್ರಮಿಸುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








