ಬ್ರೋ: ಈ ಬೈಕ್‌ಗಳನ್ನು ಕಂಡ್ರೆ ಜನ ತಿರುಗಿ ನೋಡ್ತಾರೆ.. ನಿಮ್ಮ ಜೇಬು ಗಟ್ಟಿಯಾಗಿ ಇದ್ರೆ ಮಾತ್ರ ತೆಗೆದುಕೊಳ್ಳಿ!

'ಬೈಕ್' ತೆಗೆದುಕೊಳ್ಳಬೇಕು ಎಂಬುದು ಪ್ರತಿಯೊಬ್ಬ ಯುವಕರ ಕನಸು.. ಕೆಲವರು ದುಬಾರಿ ಬೆಲೆಯ ಐಷಾರಾಮಿ ಮೋಟಾರ್‌ಸೈಕಲ್‌ನ್ನು ಖರೀದಿ ಮಾಡುವುದರೊಂದಿಗೆ ಆ ಕನಸನ್ನು ಈಡೇರಿಸಿಕೊಳ್ಳುತ್ತಿದ್ದಾರೆ. ಅಂತಹ ಒಂದಷ್ಟು ಬೈಕ್‌ಗಳು ರಸ್ತೆ ಮೇಲೆ ಹೋಗಬೇಕಾದರೆ, ದಾರಿ ಹೋಕರ ಗಮನ ಸೆಳೆಯುವಲ್ಲಿಯೂ ಯಶಸ್ವಿಯಾಗುತ್ತವೆ. ಇಲ್ಲಿ ಜನ ಒಮ್ಮೆ ನಿಂತು ತಿರುಗಿ ನೋಡುವಂತಹ ಸುಜುಕಿ ಹಯಾಬುಸಾ, ಕವಾಸಕಿ ನಿಂಜಾ 650, ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450, ಕೆಟಿಎಂ 390 ಡ್ಯೂಕ್ ಹಾಗೂ ಹೋಂಡಾ ಸಿಬಿ350 ಆರ್‌ಎಸ್ ಮಾಡೆಲ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಸುಜುಕಿ ಹಯಾಬುಸಾ (Suzuki Hayabusa):

ಇದೊಂದು ಪ್ರೀಮಿಯಂ ಮೋಟಾರ್‌ಸೈಕಲ್‌ ಆಗಿದ್ದು, ರೂ.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ಬೈಕ್ ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಪಡೆದಿದೆ. ಮೆಟಾಲಿಕ್ ಥಂಡರ್ ಗ್ರೇ, ಕ್ಯಾಂಡಿ ಡೇರಿಂಗ್ ರೆಡ್ ಹಾಗೂ ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ.

People Will Turn Around And Look If You Have This 5 Bikes Suzuki Hayabusa Himalayan 450 to Duke 390

ನೂತನ ಹಯಾಬುಸಾ ಮೋಟಾರ್‌ಸೈಕಲ್‌ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1340 ಸಿಸಿ ಪೆಟ್ರೋಲ್ ಎಂಜಿನ್‌ ಹಾಗೂ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಕವಾಸಕಿ ನಿಂಜಾ 650 (Kawasaki Ninja 650):

ಈ ಬೈಕ್‌ನ್ನು ರಸ್ತೆಯಲ್ಲಿ ಕಂಡರೂ ಜನರು ತಿರುಗಿ ನೋಡುತ್ತಾರೆ. ಅದಕ್ಕೆ ತಕ್ಕಂತೆ ದೊಡ್ಡ ಮೊತ್ತವನ್ನೇ ನೀಡಿ ಗ್ರಾಹಕರು ಖರೀದಿ ಮಾಡಬೇಕು. ಇದು ರೂ.9 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 649 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸವಾರರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

People Will Turn Around And Look If You Have This 5 Bikes Suzuki Hayabusa Himalayan 450 to Duke 390

ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 (Royal Enfield Himalayan 450):

ಇದು ಜನಪ್ರಿಯ ಮೋಟಾರ್‌ಸೈಕಲ್‌ ಆಗಿದ್ದು, ಎಂತಹವರನ್ನು ಬೇಕಾದರೂ ಆಕರ್ಷಿಸುತ್ತದೆ. ಈ ಬೈಕ್ ರೂ.3.64 ಲಕ್ಷದಿಂದ ರೂ.3.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 452 ಸಿಸಿ ಪೆಟ್ರೋಲ್ ಎಂಜಿನ್‌ ಹಾಗೂ 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 30 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ಹಿಮಾಲಯನ್ 450 ಬೈಕ್ ಸರ್ಕ್ಯುಲರ್ ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಈ ಬೈಕ್ 196 ಕೆಜಿ ತೂಕವಿದ್ದು, 17 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

People Will Turn Around And Look If You Have This 5 Bikes Suzuki Hayabusa Himalayan 450 to Duke 390

ಕೆಟಿಎಂ 390 ಡ್ಯೂಕ್ (KTM Duke 390):

ಈ ಮೋಟಾರ್‌ಸೈಕಲ್‌ ತುಂಬಾ ಅತ್ಯಾಧುನಿಕವಾಗಿದೆ. ಅದಕ್ಕೆ ತಕ್ಕಂತೆ ರೂ.3.78 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 398 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 28 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಹಲವು ವೈಶಿಷ್ಟ್ಯಗಳನ್ನು ಹೊಂದಿದ್ದು, ಸವಾರರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಸಿಬಿ350 ಆರ್‌ಎಸ್ (Honda CB350 RS)

ಇದು ಜನಪ್ರಿಯ ಬೈಕ್ ಆಗಿದ್ದು, ಎಲ್ಲರನ್ನು ಆಕರ್ಷಿಸುವಂತಿದೆ. ಈ ಮೋಟಾರ್‌ಸೈಕಲ್‌ ರೂ.2.71 ಲಕ್ಷದಿಂದ ರೂ.2.75 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 348 ಸಿಸಿ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 35 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

Article Published On: Wednesday, June 18, 2025, 17:05 [IST]
English summary
People will turn around and look if you have this 5 bikes suzuki hayabusa himalayan 450 to duke 390
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+