ರಾಖಿ ಹಬ್ಬ.. ನಿಮ್ಮ ಸಹೋದರಿಗೆ ಈ ಸ್ಕೂಟರ್‌ಗಳನ್ನು ಗಿಫ್ಟ್ ನೀಡಬಹುದು, ತುಂಬಾ ಚೆನ್ನಾಗಿವೆ.. ಬೆಲೆಯೂ ಕಮ್ಮಿ!
ನಾಳೆ ರಕ್ಷಾ ಬಂಧನ (Raksha Bandhan) ಹಬ್ಬ ಬಂದಿದ್ದು, ದೇಶಾದ್ಯಂತ ಸಂಭ್ರಮ - ಸಡಗರದಿಂದ ಆಚರಿಸಲಾಗುತ್ತದೆ. ಈ ದಿನ ಸಹೋದರರಿಗೆ ಸಹೋದರಿಯರು ರಾಖಿ ಕಟ್ಟುದ್ದಾರೆ. ಆ ಬಳಿಕ, ಪ್ರೀತಿಯ ಅಕ್ಕ ಅಥವಾ ತಂಗಿಗೆ ಗಿಫ್ಟ್ ಕೊಡುವುದು ವಾಡಿಕೆ. ನಿಮ್ಮ ಸಹೋದರಿಯ ಖುಷಿಯನ್ನು ಮತ್ತಷ್ಟು ಹಿಮ್ಮಡಿಗೊಳಿಸಲು ರಕ್ಷಾ ಬಂಧನದಂದು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಉಡುಗೊರೆಯಾಗಿ ನೀಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೋಂಡಾ ಕ್ಯೂಸಿ1, ಸುಜುಕಿ ಆಕ್ಸೆಸ್ 125, ಹೀರೋ ಜೂಮ್ 110, ಟಿವಿಎಸ್ ಜುಪಿಟರ್ 110 ಹಾಗೂ ಹೋಂಡಾ ಆಕ್ಟಿವಾ 110ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಹೋಂಡಾ ಕ್ಯೂಸಿ1 (Honda QC1):
ಇದು ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.90,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್, ಮ್ಯಾಟ್ ಫಾಗ್ಗಿ ಸಿಲ್ವರ್ ಮೆಟಾಲಿಕ್ ಹಾಗೂ ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಜೊತೆಗೆ 89.5 ಕೆಜಿ ತೂಕವಿದೆ.

ಈ ಸ್ಕೂಟರ್ 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 80 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 50 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಎಲ್‌ಸಿಡಿ ಡಿಸ್‌ಪ್ಲೇ, ಅನಲಾಗ್ ಕೀ ಹಾಗೂ ಸಿಂಗಲ್-ಪೀಸ್ ಗ್ರಾಬ್ ಹ್ಯಾಂಡಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಸುಜುಕಿ ಆಕ್ಸೆಸ್ 125 (Suzuki Access 125):
ಇದೊಂದು ಜನಪ್ರಿಯ ಸ್ಕೂಟರ್ ಆಗಿದೆ. ಕನಿಷ್ಠ ರೂ.83,800 ಹಾಗೂ ಗರಿಷ್ಠ ರೂ.1.01 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಹಾಗೂ ಪರ್ಲ್ ಶೈನಿ ಬೀಜ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಆಕ್ಸೆಸ್ 124 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 45 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೀರೋ ಜೂಮ್ 110 (Hero Xoom 110):
ಈ ಸ್ಕೂಟರ್ ರೂ.76,212 ರಿಂದ ರೂ.86,651 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. 110.9 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 53 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ಜುಪಿಟರ್ 110 (TVS Jupiter 110):
ಇದು ರೂ.78,631 ರಿಂದ ರೂ.91,781 (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ಲಭ್ಯವಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. 113 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 53 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ತನ್ನದಾಗಿಸಿಕೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಆಕ್ಟಿವಾ 110 (Honda activa 110):
ಈ ಸ್ಕೂಟರ್ ರೂ.81,000 ಬೆಲೆಯನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. 109.51 ಸಿಸಿ ಒಬಿಡಿ-2ಬಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 55 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್ ಇದೆ.


Click it and Unblock the Notifications