Royal Enfield: ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಹಿಂದೆ ಬಿದ್ದ ಹೈಕ್ಳು.. ಇದೇ ವರವಾಯ್ತು, ಸೇಲ್ಸ್‌ ಬಲುಜೋರು!

ರಾಯಲ್ ಎನ್‌ಫೀಲ್ಡ್ (Royal Enfield), ಪ್ರಖ್ಯಾತ ಮೋಟಾರ್‌ಸೈಕಲ್ ತಯಾರಕ ಕಂಪನಿಯಾಗಿ ಎಲ್ಲೆಡೆ ಮನೆ ಮಾತಾಗಿದೆ. ದೇಶೀಯವಾಗಿ ಕಂಪನಿಯು ಮಾರಾಟಗೊಳಿಸುವ ಬೈಕ್‌ಗಳನ್ನು ಯುವ ಗ್ರಾಹಕರು ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಏಪ್ರಿಲ್ ತಿಂಗಳಲ್ಲೂ ಕಂಪನಿಯ ಮೋಟಾರ್‌ಸೈಕಲ್‌ಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದ್ದು, ನಿರೀಕ್ಷಿತ ಮಟ್ಟಕ್ಕಿಂತ ಉತ್ತಮವಾದ ಪ್ರಗತಿಯನ್ನೇ ಸಾಧಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಏಪ್ರಿಲ್ - 2025) 'ರಾಯಲ್ ಎನ್‌ಫೀಲ್ಡ್' ಕಂಪನಿಯು ಸರಿ ಸುಮಾರು 86,559 ಯುನಿಟ್ ಬೈಕ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 82,043 ಯುನಿಟ್‌ಗಳನ್ನು ಮಾತ್ರ ಮಾರಾಟಗೊಳಿಸಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ 6% ಬೆಳವಣಿಗೆಯಾಗಿದೆ.

Royal Enfield April 2025 Sales Report

ಒಟ್ಟಾರೆ ಮಾರಾಟದಲ್ಲಿ ದೇಶೀಯ ಗ್ರಾಹಕರು 76,002 ಯುನಿಟ್ ಮೋಟಾರ್‌ಸೈಕಲ್‌ಗಳನ್ನು ಕೊಂಡುಕೊಂಡಿದ್ದಾರೆ. ಅದೇ ರೀತಿಯಲ್ಲಿ ವಿದೇಶಗಳಿಗೆ 10,557 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ರಾಯಲ್ ಎನ್‌ಫೀಲ್ಡ್ ಮಾರಾಟಗೊಳಿಸುವ ಬೈಕ್‌ಗಳು ಹೆಚ್ಚು ಪ್ರೀಮಿಯಂ ಆಗಿರುವುದರಿಂದ ಅತಿ ಹೆಚ್ಚಿನ ಮಾರಾಟವಾಗುತ್ತಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ.

ಸದ್ಯ ರಾಯಲ್ ಎನ್‌ಫೀಲ್ಡ್ ಮಾರಾಟಗೊಳಿಸುವ ಪ್ರಮುಖ ಮೋಟಾರ್‌ಸೈಕಲ್‌ಗಳ ಕುರಿತ ಸಂಕ್ಷಿಪ್ತ ವಿವರ..

ರಾಯಲ್ ಎನ್‌ಫೀಲ್ಡ್ ಬುಲೆಟ್ 350: ಇದು ಜನಪ್ರಿಯ ಬೈಕ್ ಎಂದೇ ಹೆಸರುವಾಸಿಯಾಗಿದ್ದು, ಮಧ್ಯಮ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಖರೀದಿ ಮಾಡಬಹುದು. ಅಷ್ಟರ ಮಟ್ಟಿಗೆ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಕನಿಷ್ಠ ರೂ.1.74 ಲಕ್ಷ ಹಾಗೂ ಗರಿಷ್ಠ ರೂ.2.16 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.

Royal Enfield April 2025 Sales Report

ಈ ಮೋಟಾರ್‌ಸೈಕಲ್‌ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 349 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 20.4 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 37 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬೈಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬಲ್ಬ್ ಟೈಪ್ ಇಂಡಿಕೇಟರ್‌ಗಳನ್ನು ಒಳಗೊಂಡಿದೆ. ಇದು 195 ಕೆಜಿ ತೂಕವಿದ್ದು, ಗರಿಷ್ಠ ದೂರ ಕ್ರಮಿಸಲು 13 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Royal Enfield April 2025 Sales Report

ರಾಯಲ್ ಎನ್‌ಫೀಲ್ಡ್ ಹಂಟರ್ 350: ಈಚೆಗೆ ಈ ಮೋಟಾರ್‌ಸೈಕಲ್‌ನ 2025ರ ಮಾಡೆಲ್‌ನ್ನು ಬಿಡುಗಡೆಗೊಳಿಸಲಾಗಿತ್ತು. ಇದು ಕೂಡ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗುತ್ತದೆ. ರೂ.1.50 ಲಕ್ಷದಿಂದ ರೂ.1,82 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 349 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಹಲವು ನವೀನ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಡಿಜಿಟಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಟೈಪ್ ಸಿ ಯುಎಸ್‌ಬಿ ಫಾಸ್ಟ್ ಚಾರ್ಜರ್‌ನ್ನು ಹೊಂದಿದೆ. ನೂತನ ಮೋಟಾರ್‌ಸೈಕಲ್‌ 181 ಕೆಜಿ ತೂಕವಿದ್ದು, 13-ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

Royal Enfield April 2025 Sales Report

ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350: ಇದು ರೂ.2.35 ಲಕ್ಷದಿಂದ ರೂ.2.38 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸಾಕಷ್ಟು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಉತ್ತಮವಾಗಿರುವ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್‌ಗಳು, ಹ್ಯಾಂಡಲ್‌ಬಾರ್‌ಗಳು, ಫ್ಲೋಟಿಂಗ್ ಸೀಟ್ ಹಾಗೂ ಫಾರ್ವರ್ಡ್-ಸೆಟ್ ಫುಟ್‌ಪೆಗ್‌ಗಳನ್ನು ಒಳಗೊಂಡಿದೆ.

ಈ ಗೋವಾನ್ ಕ್ಲಾಸಿಕ್ 350 ಮೋಟಾರ್‌ಸೈಕಲ್‌ 349 ಸಿಸಿ ಸಾಮರ್ಥ್ಯದ ಪೆಟ್ರೋಲ್ ಹೊಂದಿದ್ದು, 20.48 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 36.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಹೊಸ ರಾಯಲ್ ಎನ್‌ಫೀಲ್ಡ್ ಗೋವಾನ್ ಕ್ಲಾಸಿಕ್ 350 ಬೈಕ್ ಸೆಮಿ ಡಿಜಿಟಲ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು 197 ಕೆಜಿ ತೂಕವಿದ್ದು, 13 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450: ಇದನ್ನು ಯುವಕರ ನೆಚ್ಚಿನ ಬೈಕ್ ಎಂದು ಕರೆದರೂ ತಪ್ಪಾಗುವುದಿಲ್ಲ. ಈ ಮೋಟಾರ್‌ಸೈಕಲ್‌, ರೂ.2.85 ಲಕ್ಷದಿಂದ ರೂ.2.98 ಲಕ್ಷ ಎಕ್ಸ್-ಶೋರೂಂ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದ್ದು, ಕಾಜಾ ಬ್ರೌನ್, ಸ್ಲೇಟ್ ಪಾಪಿ ಬ್ಲೂ, ಸ್ಲೇಟ್ ಹಿಮಾಲಯನ್ ಸಾಲ್ಟ್, ಕಾಮಟ್ ವೈಟ್ ಹಾಗೂ ಹ್ಯಾನ್ಲೆ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಈ ರಾಯಲ್ ಎನ್‌ಫೀಲ್ಡ್ ಹಿಮಾಲಯನ್ 450 ಮೋಟಾರ್‌ಸೈಕಲ್, 452 ಸಿಸಿ ಲಿಕ್ವಿಡ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 40 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 40 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 30 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಹಿಮಾಲಯನ್ 450 ಬೈಕ್, 148 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 6.91 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಟಿಎಫ್‌ಟಿ ಸ್ಕ್ರೀನ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350: ಈ ಬೈಕ್ ರೂ.2.06 ಲಕ್ಷದಿಂದ ರೂ.2.30 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಇದು ನೋಡಲು ಹೆಚ್ಚು ಸುಂದರವಾಗಿದ್ದು, ಬ್ಲ್ಯಾಕ್, ಬ್ಲ್ಯೂ, ಮ್ಯಾಟ್ ಗ್ರೀನ್ ಮತ್ತು ರೆಡ್ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ.

ಈ ಮೆಟಿಯೋರ್ 350 ಮೋಟಾರ್‌ಸೈಕಲ್ 349 ಸಿ ಸಿ, ಸಿಂಗಲ್-ಸಿಲಿಂಡರ್, ಲಿಕ್ವಿಡ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 20.2 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 27 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. ಇದರೊಟ್ಟಿಗೆ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 41.88 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, May 2, 2025, 15:14 [IST]
English summary
Royal enfield april 2025 sales report
Read more on royal enfield india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+