41 ಕಿ.ಮೀ ಮೈಲೇಜ್.. 2.49 ಲಕ್ಷ, ಈ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಮುಗುಬಿದ್ದ ಗ್ರಾಹಕರು.. ಭಾರೀ ಸಂಖ್ಯೆಯಲ್ಲಿ ಮಾರಾಟ!
ರಾಯಲ್ ಎನ್‌ಫೀಲ್ಡ್ (Royal Enfield) ನಂಬಿಕಾರ್ಹ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಮೋಟಾರ್‌ಸೈಕಲ್‌ಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟು ಖರೀದಿ ಮಾಡುತ್ತಿದ್ದಾರೆ. ಈ ಜೂನ್ ತಿಂಗಳು ಕಂಪನಿಯು ಕ್ಲಾಸಿಕ್ 350 (Classic 350) ಬೈಕ್‌ನ್ನು ಭಾರೀ ಸಂಖ್ಯೆಯಲ್ಲಿ ಮಾರಾಟ ಮಾಡಿದೆ. ಒಟ್ಟು 29,172 ಯುನಿಟ್‌ಗಳನ್ನು ಖರೀದಿದಾರರು ಕೊಂಡುಕೊಂಡಿದ್ದಾರೆ. 2024ರ ಇದೇ ಅವಧಿಯಲ್ಲಿ 24,803 ಯುನಿಟ್‌ಗಳನ್ನು ಮಾರಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 17.61% ಪ್ರಗತಿಯಾಗಿದೆ.
ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 (Royal Enfield Classic 350), ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಗರಿಷ್ಠ ಮೈಲೇಜ್ ನೀಡಬಲ್ಲದು. ಹೀಗಾಗಿ, ಈ ಮೋಟಾರ್‌ಸೈಕಲ್ ಉತ್ತಮವಾಗಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ವಿಶೇಷತೆಗಳೇನು:
ಇದು ಜನಪ್ರಿಯ ಬೈಕ್ ಆಗಿದ್ದು, ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ರೂ.2.49 ಲಕ್ಷದಿಂದ ರೂ. 2.95 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು.
ಈ ಮೋಟಾರ್‌ಸೈಕಲ್ ಕಣ್ಮನ ಸೆಳೆಯುವ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಟೈಲ್‌ಲೈಟ್ ಹಾಗೂ ಎಲ್ಇಡಿ ಇಂಡಿಕೇಟರ್‌ಗಳನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಗನ್ ಗ್ರೇ, ಕಮಾಂಡೋ ಸ್ಯಾಂಡ್, ಮದ್ರಾಸ್ ರೆಡ್, ಜೋಧ್‌ಪುರ್ ಬ್ಲೂ, ರೆಡ್ಡಿಚ್ ರೆಡ್, ರೆಡ್ಡಿಚ್ ಗ್ರೇ, ಹಾಲ್ಸಿಯಾನ್ ಗ್ರೀನ್ ಹಾಗೂ ಹಾಲ್ಸಿಯಾನ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಕ್ಲಾಸಿಕ್ 350 ಬೈಕ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 349 ಸಿಸಿ ಸಿಂಗಲ್-ಸಿಲಿಂಡರ್, 4-ಸ್ಟ್ರೋಕ್, ಏರ್-ಆಯಿಲ್ ಕೂಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6100 ಆರ್‌ಪಿಎಂನಲ್ಲಿ 20.2 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4000 ಆರ್‌ಪಿಎಂನಲ್ಲಿ 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 41.55 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಹೊಸ ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350 ಮೋಟಾರ್‌ಸೈಕಲ್ 2145 ಎಂಎಂ ಉದ್ದ, 785 ಎಂಎಂ ಅಗಲ ಹಾಗೂ 1090 ಎಂಎಂ ಎತ್ತರವು ಇದೆ. ಜೊತೆಗೆ 805 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1390 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಬೈಕ್ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್‍ನ್ನು ಪಡೆದಿದೆ. ಇದು ರಾಯಲ್ ಎನ್‌ಫೀಲ್ಡ್ ಅಪ್ಲಿಕೇಶನ್, ನ್ಯಾವಿಗೇಷನ್ ಸಿಸ್ಟಮ್ ಹಾಗೂ ಗೂಗಲ್ ಮ್ಯಾಪ್ ಅನ್ನು ಬೆಂಬಲಿಸುತ್ತದೆ. ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಆಯ್ಕೆಯನ್ನು ಪಡೆದಿದೆ. ಹಾಗೆಯೇ ಸೀಟ್ ಹೈಟ್ 805 ಎಂಎಂ ಇದ್ದು, ಬರೋಬ್ಬರಿ 195 ಕೆಜಿ ತೂಕವಿದೆ. 13 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.
ಈ ಮೋಟಾರ್‌ಸೈಕಲ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ - ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ಟ್ಯೂಬ್ಡ್ ಸ್ಪೋಕ್ ವೀಲ್‌ಗಳನ್ನು ಪಡೆದಿದೆ. ಟೈರ್‌ಗಳು ಸಹ ಅತ್ಯುತ್ತಮವಾಗಿವೆ.


Click it and Unblock the Notifications








