Royal Enfield: 150 Km ರೇಂಜ್.. ಬೆಲೆಯೂ ಅಗ್ಗ! ರಾಯಲ್ ಎನ್‌ಫೀಲ್ಡ್‌ನ ಹೊಸ ಎಲೆಕ್ಟ್ರಿಕ್ ಬೈಕ್ ಅನಾವರಣ, ಯಾವುದು?

ಗೋವಾದಲ್ಲಿ ನಡೆಯುತ್ತಿರುವ ಮೋಟೋವರ್ಸ್-2025 (MotoVerse-2025) ಸಮಾರಂಭದಲ್ಲಿ, ಹೊಚ್ಚ ಹೊಸ ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲಿಯಾ ಎಸ್6 (Royal Enfield Flying Flea S6) ಬೈಕ್‌ನ್ನು ಅನಾವರಣಗೊಳಿಸಲಾಗಿದೆ. ಇದೊಂದು ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ ಆಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬನ್ನಿ, ಈ ನೂತನ ಬೈಕ್‌ನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹೊಸ 'ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲಿಯಾ ಎಸ್6' ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌, ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.2.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಲಿದೆ. 2027ರ ಶುರುವಿನಲ್ಲಿ ಅದ್ದೂರಿಯಾಗಿಯೂ ಮಾರಾಟಕ್ಕೆ ಬರುವ ಎಲ್ಲ ಸಾಧ್ಯತೆಯಿದೆ.

Royal Enfield Flying Flea S6 Electic Bike Unvieled In India Details

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. 'ಸ್ಕ್ರ್ಯಾಂಬ್ಲರ್' ಬೈಕ್‌ಗೂ ಹೋಲಿಕೆಯಾಗುತ್ತದೆ. ಸ್ಲಿಮ್ ಬಾಡಿ ಪ್ರೊಫೈಲ್ ಹೊಂದಿದ್ದು, ಎಲ್ಇಡಿ ಹೆಡ್‌ಲೈಟ್, ಟಿಯರ್ ಡ್ರಾಪ್ ಆಕಾರದಲ್ಲಿರುವ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. ಫಾರ್ವರ್ಡ್ ಹಾಗೂ ರಿವರ್ಸ್ ಕ್ರಾಲ್ ಸೇರಿದಂತೆ 6 ರೈಡಿಂಗ್ ಮೋಡ್‌ಗಳನ್ನು ಪಡೆದಿದೆ.

ಈ ಬೈಕ್ ವಿಶಾಲ ಗಾತ್ರದಲ್ಲಿರಲಿದೆ. ಮೂಲಗಳ ಪ್ರಕಾರ, 2,060 ಮಿ.ಮೀ ಉದ್ದ, 867 ಮಿ.ಮೀ ಅಗಲ ಹಾಗೂ 1,220 ಮಿ.ಮೀ ಎತ್ತರವಿರಲಿದೆ. 197 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,450 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ.

Royal Enfield Flying Flea S6 Electic Bike Unvieled In India Details

ನೂತನ 'ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲಿಯಾ ಎಸ್6' ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌, ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿರುವ ನಿರೀಕ್ಷೆಯಿದೆ. 4.4 ಕಿಲೋ ವ್ಯಾಟ್ (ಕೆಡಬ್ಲ್ಯೂಡಬ್ಲ್ಯೂ) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸಂಪೂರ್ಣ ಚಾರ್ಜ್‌ನಲ್ಲಿ 150 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎನ್ನಲಾಗಿದೆ.

ಇದು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌ನಿಂದ ಬೆಂಬಲಿಸಬಲ್ಲ ರೌಂಡ್ ಟಿಎಫ್‌ಟಿ ಸ್ಕ್ರೀನ್, ಬ್ಲೂಟೂತ್ ಕನೆಕ್ಟಿವಿಟಿ, ವೈ-ಫೈ ಕನೆಕ್ಟಿವಿಟಿ, ವಾಯ್ಸ್ ಅಸಿಸ್ಟ್, ಇನ್-ಹೌಸ್ ವಿಸಿಯು (ವೆಹಿಕಲ್ ಕಂಟ್ರೋಲ್ ಯುನಿಟ್) ಹಾಗೂ ಎನ್ಎಕ್ಸ್‌ಪಿ ಮೈಕ್ರೋ ಕಂಟ್ರೋಲರ್‌ನ್ನು ಪಡೆದಿದೆ.

Royal Enfield Flying Flea S6 Electic Bike Unvieled In India Details

ಈ ಎಲೆಕ್ಟ್ರಿಕ್ ಬೈಕ್ ಸವಾರರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಇನ್ವೆರ್ಟೆಡ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 18 ಇಂಚಿನ ಅಲ್ಯೂಮಿನಿಯಂ ಸ್ಪೋಕ್ ವೀಲ್‌ಗಳು & ಬ್ಲ್ಯಾಕ್ ಪ್ಯಾಟರ್ನ್ ಟೈರ್‌ಗಳನ್ನು ಹೊಂದಿದೆ.

ನೂತನ ರಾಯಲ್ ಎನ್‌ಫೀಲ್ಡ್ ಬುಲೆಟ್ 650 (Royal Enfield Bullet 650) ಮೋಟಾರ್‌ಸೈಕಲ್‌ ಕೂಡ ಪರಿಚಯ:

ಇದು ರೂ.2.80 ಲಕ್ಷದಿಂದ ರೂ.2.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಕ್ಯಾನನ್ ಬ್ಲ್ಯಾಕ್ ಮತ್ತು ಬ್ಯಾಟಲ್‌ಶಿಪ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 154 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,475 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಬೈಕ್ 648 ಸಿಸಿ ಏರ್/ಆಯಿಲ್ ಕೂಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಚಾರ್ಜಿಂಗ್ ಪೋರ್ಟ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ದ್ವಿಚಕ್ರ ವಾಹನ ಸವಾರರ ರಕ್ಷಣೆಗಾಗಿ ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Saturday, November 22, 2025, 11:37 [IST]
English summary
Royal enfield flying flea s6 electic bike unvieled in india details
Read more on royal enfield india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+