Royal Enfield: ಈ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಮುಗಿಬಿದ್ದ ಗ್ರಾಹಕರು, ಬಿಸಿ-ಬಿಸಿ ಜಿಲೇಬಿಯಂತೆ ಸೇಲ್ಸ್..!

ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350) ಪ್ರಮುಖ ಮೋಟಾರ್‌ಸೈಕಲ್‌ ಆಗಿದೆ. ಇದು ಹೆಚ್ಚಿನ ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿ ದೊರೆಯುತ್ತದೆ. ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿಗೆ ಮಾಡುತ್ತಿದ್ದಾರೆ. ಅದಕ್ಕೆ ಪುಷ್ಟಿ ನೀಡುವಂತೆ, ಈ ಏಪ್ರಿಲ್ ತಿಂಗಳು ಇದೇ 'ಹಂಟರ್ 350' ಬೈಕ್ ದಾಖಲೆ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಏಪ್ರಿಲ್‌ - 2025) ರಾಯಲ್ ಎನ್‌ಫೀಲ್ಡ್ ಕಂಪನಿಯು ಬರೋಬ್ಬರಿ 18,109 ಯುನಿಟ್ 'ಹಂಟರ್ 350' ಮೋಟಾರ್‌ಸೈಕಲ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ 16,186 ಯುನಿಟ್‌ಗಳನ್ನು ಮಾರಾಟ ಮಾಡಿತ್ತು. ಈ ಅಂಕಿಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 11.88% ಅಧಿಕಗೊಂಡಿದೆ.

Royal Enfield Hunter 350 Bike April 2025 Sales Details

ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ ಮಾರಾಟ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಲು ಹಲವು ಕಾರಣಗಳಿವೆ. ಈ ಮೋಟಾರ್‌ಸೈಕಲ್‌ ಅಷ್ಟೇನೂ ದುಬಾರಿ ಬೆಲೆಯನ್ನು ಹೊಂದಿಲ್ಲ. ಹೀಗಾಗಿ, ಯುವ ಖರೀದಿದಾರರ ಆಯ್ಕೆಯ ದ್ವಿಚಕ್ರ ವಾಹನವಾಗಿ ಹೊರಹೊಮ್ಮಿದೆ. ಜೊತೆಗೆ 'ಹಂಟರ್ 350' ನೋಡುಗರ ಕಣ್ಣು ಕುಕ್ಕುವಂತೆ ಇರುವುದರಿಂದ ಉತ್ತಮವಾಗಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ರಾಯಲ್ ಎನ್‌ಫೀಲ್ಡ್ ಹಂಟರ್ 350 ವಿಶೇಷತೆಗಳೇನು..

ಇತ್ತೀಚೆಗೆ ಈ ಬೈಕ್‌ನ 2025ರ ಮಾಡೆಲ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದು ರೂ.1.50 ಲಕ್ಷದಿಂದ ರೂ.1.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಜೊತೆಗೆ ಫ್ಯಾಕ್ಟರಿ ಬ್ಲ್ಯಾಕ್, ರಿಯೋ ವೈಟ್, ಡ್ಯಾಪರ್ ಗ್ರೇ, ಟೋಕಿಯೋ ಬ್ಲಾಕ್ & ರೆಬೆಲ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Royal Enfield Hunter 350 Bike April 2025 Sales Details

ನೂತನ ಮೋಟಾರ್‌ಸೈಕಲ್‌ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 349 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 20 ಬಿ‌ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) & 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 36 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಹಂಟರ್ 350 ಬೈಕ್ ಡಿಜಿಟಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಟೈಪ್-ಸಿ ಯುಎಸ್‌ಬಿ ಫಾಸ್ಟ್ ಚಾರ್ಜರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,370 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 13-ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

Royal Enfield Hunter 350 Bike April 2025 Sales Details

ಇನ್ನು, ಒಂದೆಡೆ ಘಟಾನುಘಟಿ ಕಂಪನಿಗಳ ಮೋಟಾರ್‌ಸೈಕಲ್‌ಗಳ ಮಾರಾಟ ಸಂಖ್ಯೆ ಕುಸಿತವಾಗುತ್ತಿದೆ. ಅದರ ಹೊರತಾಗಿ 'ರಾಯಲ್ ಎನ್‌ಫೀಲ್ಡ್ ಹಂಟರ್ 350' ಬೈಕ್ ಮಾರಾಟ ಪ್ರಮಾಣ ಅಧಿಕಗೊಂಡಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. 2025ರ ಹೊಸ ಮಾಡೆಲ್‌ನ್ನು ಸಹ ಬಿಡುಗಡೆಗೊಳಿಸಲಾಗಿದ್ದು, ಈ 'ಮೇ'ನಲ್ಲೂ ಹಂಟರ್ 350 ಮೋಟಾರ್‌ಸೈಕಲ್‌ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿರುವ ನಿರೀಕ್ಷೆಯಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, May 27, 2025, 16:49 [IST]
English summary
Royal enfield hunter 350 bike april 2025 sales details
Read more on royal enfield india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+