ಬ್ರೋ.. Royal Enfield Bikes ಬೇಕೆಂದು ಹಠ ಹಿಡಿದ ಗ್ರಾಹಕರು.. ರೆಕಾರ್ಡ್ ಸಂಖ್ಯೆಯಲ್ಲಿ ಸೇಲ್ಸ್!
ರಾಯಲ್ ಎನ್‌ಫೀಲ್ಡ್ (Royal Enfield) ಪ್ರಮುಖ ಮೋಟಾರ್‌ಸೈಕಲ್ ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ಪ್ರೀಮಿಯಂ ಬೈಕ್‌ಗಳನ್ನು ಮಹಿಳಾ ಹಾಗೂ ಪುರುಷ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, 'ರಾಯಲ್ ಎನ್‌ಫೀಲ್ಡ್' ಇದೇ ಮೇ ತಿಂಗಳ ಒಟ್ಟು ಮೋಟಾರ್‌ಸೈಕಲ್‌ಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಕೂಡ ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿಯನ್ನು ಸಾಧಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹೋದ ತಿಂಗಳು (ಮೇ - 2025) ರಾಯಲ್ ಎನ್‌ಫೀಲ್ಡ್ ಕಂಪನಿಯು ಬರೋಬ್ಬರಿ 89,429 ಬೈಕ್‌ಗಳನ್ನು ಮಾರಾಟಗೊಳಿಸಿದೆ. 2024ರ ಮೇನಲ್ಲಿ 71,010 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 26% ಬೆಳವಣಿಗೆಯಾಗಿದೆ.

ರಾಯಲ್ ಎನ್‌ಫೀಲ್ಡ್ ಮೋಟಾರ್‌ಸೈಕಲ್‌ಗಳ ಮಾರಾಟ ಸಂಖ್ಯೆ ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಕ್ಲಾಸಿಕ್ 350, ಹಂಟರ್ 350, ಬುಲೆಟ್ 350, ಹಾಗೂ ಮೀಟಿಯರ್ 350 ಬೈಕ್‌ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಇದರಿಂದಾಗಿಯೇ ಮಾರಾಟ ಸಂಖ್ಯೆ ಅಧಿಕಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಈ ಮೋಟಾರ್‌ಸೈಕಲ್‌ಗಳು ಹೆಚ್ಚು ಅತ್ಯಾಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಸಹ ಹೊಂದಿವೆ.
ರಾಯಲ್ ಎನ್‌ಫೀಲ್ಡ್ ಕಂಪನಿ ಮಾರಾಟಗಳಿಸುವ ಬೈಕ್‌ಗಳ ವಿಶೇಷತೆಯೇನು..
ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350: ಇದು ರೂ.1.95 ಲಕ್ಷದಿಂದ ರೂ.2.33 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 349.34 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಹೊಂದಿದ್ದು, 41 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸೆಮಿ-ಡಿಜಿಟಲ್ ಕನ್ಸೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ರಾಯಲ್ ಎನ್‌ಫೀಲ್ಡ್ ಮೀಟಿಯರ್ 350: ಈ ಮೋಟಾರ್‌ಸೈಕಲ್ ರೂ.2.08 ರಿಂದ ರೂ.2.33 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 349 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 41 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450: ಇದು ರೂ.2.39 ಲಕ್ಷದಿಂದ ರೂ.2.54 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 452 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 29 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಟರ್ನ್-ಬೈ- ನ್ಯಾವಿಗೇಷನ್ ಹಾಗೂ ಮ್ಯಾಸಿಕ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ರಾಯಲ್ ಎನ್‌ಫೀಲ್ಡ್ ಸೂಪರ್ ಮೀಟಿಯರ್ 650: ಈ ಬೈಕ್ ರೂ.2.08 ಲಕ್ಷದಿಂದ ರೂ.2.33 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 349 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 41 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








