Royal Enfield: ಬೆಲೆ ಇಳಿಕೆ.. ರಾಯಲ್ ಎನ್‌ಫೀಲ್ಡ್ ಬೈಕ್‌ಗಳಿಗೆ ಫುಲ್ ಡಿಮ್ಯಾಂಡ್, ಜನ ಮುಗಿಬಿದ್ದು ಖರೀದಿ!
ರಾಯಲ್ ಎನ್‌ಫೀಲ್ಡ್ (Royal Enfield) ಜಗಮೆಚ್ಚಿದ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಜಿಎಸ್‌ಟಿ ಪರಿಷ್ಕರಣೆ ಬಳಿಕ, ಕಂಪನಿಯ ಮೋಟಾರ್‌ಸೈಕಲ್‌ಗಳ ಬೆಲೆ ಇಳಿಕೆಯಾಗದೆ. ಇದು ವರವಾಗಿದ್ದು, ಈ ಸೆಪ್ಟೆಂಬರ್ ತಿಂಗಳು 'ರಾಯಲ್ ಎನ್‌ಫೀಲ್ಡ್' ಬೈಕ್‌ಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಒಟ್ಟು 1,13,573 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 79,326 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 43% ಪ್ರಗತಿಯಾಗಿದೆ.
ರಾಯಲ್ ಎನ್‌ಫೀಲ್ಡ್ ಕ್ಲಾಸಿಕ್ 350:
ಇದು ಜನಪ್ರಿಯ ಮೋಟಾರ್‌ಸೈಕಲ್ ಆಗಿದೆ. ಈ ಸೆಪ್ಟೆಂಬರ್‌ನಲ್ಲಿ ಬರೋಬ್ಬರಿ 40,449 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಸೆಪ್ಟೆಂಬರ್ ತಿಂಗಳಲ್ಲಿ 33,065 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಅಂಶಗಳನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 22.33 ಬೆಳವಣಿಗೆಯಾಗಿದೆ. ನೂತನ ಕ್ಲಾಸಿಕ್ 350 ರೂ.1.81 ಲಕ್ಷದಿಂದ ರೂ.2.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ರಾಯಲ್ ಎನ್‌ಫೀಲ್ಡ್ ಬುಲೆಟ್ 350:
ಈ ಬೈಕ್‌ನ್ನು ಯುವಕರು ಮೆಚ್ಚಿದ್ದಾರೆ. ಇದೇ ಸೆಪ್ಟೆಂಬರ್ ತಿಂಗಳಲ್ಲಿ ಸರಿ ಸುಮಾರು 25,915 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಸೆಪ್ಟೆಂಬರ್‌ನಲ್ಲಿ 12,901 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಮೂಲಕ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 100.88% ಅಭಿವೃದ್ಧಿಯಾಗಿದೆ. ಹೊಸ 'ಬುಲೆಟ್ 350' ರೂ.1.62 ಲಕ್ಷದಿಂದ ರೂ.2.02 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.
ರಾಯಲ್ ಎನ್‌ಫೀಲ್ಡ್ ಹಂಟರ್ 350:
ಇದೊಂದು ಪ್ರಖ್ಯಾತ ಮೋಟಾರ್‌ಸೈಕಲ್ ಎಂದೇ ಹೆಸರುವಾಸಿಯಾಗಿದೆ. ಈ ಸೆಪ್ಟೆಂಬರ್‌ನಲ್ಲಿ ಒಟ್ಟು 21,801 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 17,406 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ವರ್ಷದಿಂದ ವರ್ಷಕ್ಕೆ ಶೇಕಡ 25.25% ಪ್ರಗತಿಯಾಗಿದೆ. ನೂತನ 'ಹಂಟರ್ 350' ರೂ.1.38 ಲಕ್ಷದಿಂದ ರೂ.1.67 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ರಾಯಲ್ ಎನ್‌ಫೀಲ್ಡ್ ಮೆಟಿಯೋರ್ 350:
ಈ ಬೈಕ್ ವಿಶ್ವಾಸಾರ್ಹತೆಗೂ ಹೆಸರುವಾಸಿಯಾಗಿದೆ. ಇದೇ ಸೆಪ್ಟೆಂಬರ್ ತಿಂಗಳಲ್ಲಿ ಬರೋಬ್ಬರಿ 14,435 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಸೆಪ್ಟೆಂಬರ್‌ನಲ್ಲಿ 8,665 ಯುನಿಟ್‌ಗಳನ್ನು ಮಾರಲಾಗಿತ್ತು. ಇದನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 66.59% ಬೆಳವಣಿಗೆಯಾಗಿದೆ. ಹೊಸ 'ಮೆಟಿಯೋರ್ 350' ರೂ.1.95 ಲಕ್ಷದಿಂದ ರೂ.2.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.
ರಾಯಲ್ ಎನ್‌ಫೀಲ್ಡ್ ಹಿಮಾಲಯನ್:
ಇದು ಪ್ರಮುಖ ಮೋಟಾರ್‌ಸೈಕಲ್ ಆಗಿದೆ. ಈ ಸೆಪ್ಟೆಂಬರ್‌ನಲ್ಲಿ ಸರಿ ಸುಮಾರು 3,939 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಸೆಪ್ಟೆಂಬರ್ ತಿಂಗಳಲ್ಲಿ 1,814 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಮೂಲಕ ವರ್ಷದಿಂದ ವರ್ಷಕ್ಕೆ ಶೇಕಡ 117.14% ಅಭಿವೃದ್ಧಿ ಸಾಧಿಸಲಾಗಿದೆ. ನೂತನ 'ಹಿಮಾಲಯನ್' ರೂ.3.05 ಲಕ್ಷದಿಂದ ರೂ.3.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ.

ರಾಯಲ್ ಎನ್‌ಫೀಲ್ಡ್ ಟ್ವಿನ್ಸ್ 650 ಸೀರೀಸ್:
ಈ ಬೈಕ್‌ಗಳನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಇದೇ ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 14,435 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 2,869 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ವರ್ಷದಿಂದ ವರ್ಷಕ್ಕೆ ಮಾರಾಟ ಪ್ರಮಾಣವು ಶೇಕಡ 34.40% ಪ್ರಗತಿಯಾಗಿದೆ. ಹೊಸ 'ಟ್ವಿನ್ಸ್ 650' ಮಾಡೆಲ್‌ಗಳು ರೂ.3.32 ಲಕ್ಷದಿಂದ ರೂ.4.08 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿವೆ.
ಇನ್ನುಳಿದಂತೆ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಮೋಟಾರ್‌ಸೈಕಲ್‌ನ 1,798 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಮೂಲಕ ರ್ಷದಿಂದ ವರ್ಷಕ್ಕೆ ಶೇಕಡ 8.51% ಬೆಳವಣಿಗೆಯಾಗಿದೆ. ರಾಯಲ್ ಎನ್‌ಫೀಲ್ಡ್ ಸೂಪರ್ ಮೀಟಿಯರ್ 650 (1,101 ಯುನಿಟ್‌ಗಳು) ಹಾಗೂ ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 (279 ಯುನಿಟ್‌ಗಳು) ಬೈಕ್‌ಗಳು ಕೂಡ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿವೆ.


Click it and Unblock the Notifications








