Suzuki Access 125: ಅಗ್ಗದ 'ಸುಜುಕಿ ಆಕ್ಸೆಸ್ 125' ಸ್ಕೂಟರ್‌ಗೆ ಮುಗಿಬಿದ್ದ ಗ್ರಾಹಕರು.. ಇದೇ ನಂ.3 ಗುರು!
ಸುಜುಕಿ ಆಕ್ಸೆಸ್ 125 (Suzuki Access 125) ಪ್ರಮುಖ ಸ್ಕೂಟರ್ ಆಗಿದೆ. ಗ್ರಾಹಕರು ಸಹ ನಾಮುಂದು - ತಾಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಅದಕ್ಕೆ ತಕ್ಕಂತೆ ಈ ಏಪ್ರಿಲ್ ತಿಂಗಳಲ್ಲೂ ಇದೇ 'ಆಕ್ಸೆಸ್' ಸ್ಕೂಟರ್ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಇದರೊಂದಿಗೆ ದೇಶೀಯವಾಗಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ ಪ್ರಮುಖ 10 ಸ್ಕೂಟರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ತೀವ್ರ ಮಾರಾಟದ ಕುಸಿತದ ಬಳಿಕವು 'ಹೋಂಡಾ ಆಕ್ಟಿವಾ' ಮೊದಲ ಸ್ಥಾನದಲಿದ್ದು, 'ಟಿವಿಎಸ್ ಜೂಪಿಟರ್' ಎರಡನೇ ಸ್ಥಾನದಲ್ಲಿದೆ.
ಹೋದ ತಿಂಗಳು (ಏಪ್ರಿಲ್ - 2025) 'ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ' ಸರಿ ಸುಮಾರು 65,107 ಯುನಿಟ್ 'ಆಕ್ಸೆಸ್' ಸ್ಕೂಟರ್‌ಗಳನ್ನು ಮಾರಾಟ ಮಾಡಿದೆ. 2024ರ ಏಪ್ರಿಲ್‌ನಲ್ಲಿ 61,960 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 5.08% ಬೆಳವಣಿಗೆಯಾಗಿದೆ.

ಸುಜುಕಿ ಆಕ್ಸೆಸ್ 125 ಸ್ಕೂಟರ್ ಮಾರಾಟ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಈ ಸ್ಕೂಟರ್ ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಬಜೆಟ್ ಬೆಲೆಯಲ್ಲಿಯೂ ಲಭ್ಯವಿದೆ. ಹೀಗಾಗಿ, ಖರೀದಿದಾರರು ಕೂಡ ಇಷ್ಟಪಟ್ಟು ತೆಗೆದುಕೊಳ್ಳುತ್ತಿದ್ದಾರೆ. ಜೊತೆಗೆ ಹೆಚ್ಚಿನ ಮೈಲೇಜ್ ನೀಡುವುದರಿಂದ ಉತ್ತಮವಾಗಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಸುಜುಕಿ ಆಕ್ಸೆಸ್ 125 ವಿಶೇಷತೆಗಳೇನು..
ಇದು ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ರೂ.87,000 ರಿಂದ 98,000 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಈ ಸ್ಕೂಟರ್ ನೋಡಲು ತುಂಬಾ ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್ & ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಆಕ್ಸೆಸ್ 125 ಸ್ಕೂಟರ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 125 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಸ್ಕೂಟರ್, ಸವಾರರ ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಡಿಸ್ಕ್ ಮತ್ತು ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. ಇದು 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೋಬ್ಬರಿ 106 ಕೆಜಿ ತೂಕವಿದ್ದು, ದೂರದ ಊರುಗಳಿಗೆ ಸುಲಭವಾಗಿ ಪ್ರಯಾಣ ಮಾಡಲು ಸಾಧ್ಯವಾಗುವಂತೆ 5.6 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಸುಜುಕಿ ಇ ಆಕ್ಸೆಸ್ ಕೂಡ ಶೀಘ್ರ ಬಿಡುಗಡೆ..
ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಜೂನ್‌ನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈಗಾಗಲೇ, ಕಂಪನಿಯು ಆಯ್ದ ಶೋರೂಂಗಳಿಗೆ ನೂತನ 'ಸುಜುಕಿ ಇ ಆಕ್ಸೆಸ್' ಸ್ಕೂಟರ್‌ನ್ನು ರವಾನಿಸುವುದಕ್ಕೆ ಶುರು ಮಾಡಿದೆ. ಈ ಸ್ಕೂಟರ್ ರೂ.1 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಇದು 3.07 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 95 ಕಿಲೋಮೀಟರ್ ಓಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








