ರೂ.87,000.. 47 Km ಮೈಲೇಜ್.. ಆದ್ರೂ ಸುಜುಕಿ ಆಕ್ಸೆಸ್ 125 ಸ್ಕೂಟರ್‌ಗೆ ಯಾರು ನಿರೀಕ್ಷಿಸದ ಟ್ವಿಸ್ಟ್!
ಸುಜುಕಿ ಆಕ್ಸೆಸ್ 125 (Suzuki Access 125) ಜನ ಮೆಚ್ಚಿದ ಸ್ಕೂಟರ್ ಆಗಿದ್ದು, ಭಾರತ ದ್ವಿಚಕ್ರ ವಾಹನ (Two Wheeler) ಮಾರುಕಟ್ಟೆಯಲ್ಲಿ ತನ್ನದೇಯಾದ ಛಾಪನ್ನು ಮೂಡಿಸಿದೆ. ಗ್ರಾಹಕರು ಕೂಡ ತಾ ಮುಂದು - ನಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಆದರೂ ಈ ಜುಲೈ ತಿಂಗಳು ಇದೇ 'ಆಕ್ಸೆಸ್' ಸ್ಕೂಟರ್ ಮಾರಾಟ ಪ್ರಮಾಣವು ಸ್ವಲ್ಪ ಮಟ್ಟಿಗೆ ಕುಸಿತವಾಗಿದೆ. 68,172 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. ಇದರೊಂದಿಗೆ ಮಾರಾಟ ಸಂಖ್ಯೆಯು ವರ್ಷದಿಂದ ವರ್ಷಕ್ಕೆ ಶೇಕಡ -4.32% ಇಳಿಕೆಯಾಗಿದೆ. 2024ರ ಇದೇ ಅವಧಿಯಲ್ಲಿ 71,247 ಯುನಿಟ್‌ಗಳನ್ನು ಮಾರಲಾಗಿದೆ.
ಸದ್ಯ ದೇಶೀಯವಾಗಿ ಈ ಜುಲೈನಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ ಸ್ಕೂಟರ್‌ಗಳ ಪಟ್ಟಿಯೂ ಪ್ರಕಟಗೊಂಡಿದೆ. ಅದರಲ್ಲೂ 'ಸುಜುಕಿ ಆಕ್ಸೆಸ್ 125' ಕೂಡ ಇದ್ದು, ಮೂರನೇ ಸ್ಥಾನದಲ್ಲಿದೆ. ಎಂದಿನಂತೆ ಮೊದಲ ಸ್ಥಾನವನ್ನು ಹೋಂಡಾ ಆಕ್ಟಿವಾ (2,37,413 ಯುನಿಟ್) ಹಾಗೂ ಎರಡನೇ ಸ್ಥಾನವನ್ನು ಟಿವಿಎಸ್ ಜುಪಿಟರ್ (1,24,876 ಯುನಿಟ್) ಭದ್ರಪಡಿಸಿಕೊಂಡಿದೆ.

ಇವೆಲ್ಲದರ ನಡುವೆಯೂ ಸುಜುಕಿ ಆಕ್ಸೆಸ್ 125 ಸ್ಕೂಟರ್ ಮಾರಾಟ ಪ್ರಮಾಣವು ಸ್ವಲ್ಪ ಮಟ್ಟಿಗೆ ಇಳಿಮುಖವಾಗಿರುವುದಕ್ಕೆ ಹಲವು ಕಾರಣಗಳಿವೆ. ಬಹುಮುಖ್ಯವಾಗಿ ದೇಶಾದ್ಯಂತ ಸ್ಕೂಟರ್ ಮಾರುಕಟ್ಟೆ ವಿಶಾಲವಾಗಿ ವ್ಯಾಪಿಸಿಕೊಳ್ಳುತ್ತಿದೆ. ಬಹುತೇಕರು ಎಲೆಕ್ಟ್ರಿಕ್ ಚಾಲಿತ ಸ್ಕೂಟರ್‌ಗಳನ್ನು ಕೊಳ್ಳುವುದಕ್ಕೂ ಆಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ 'ಆಕ್ಸೆಸ್' ಮಾರಾಟ ಸಂಖ್ಯೆಯು ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ಸುಜುಕಿ ಆಕ್ಸೆಸ್ 125 ವಿಶೇಷತೆಗಳೇನು:
ಈ ಸ್ಕೂಟರ್ ರೂ.86,000 ರಿಂದ ರೂ.1.04 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಗ್ರೇಸ್ ವೈಟ್, ಪರ್ಲ್ ಶೈನಿ ಬೀಜ್ ಹಾಗೂ ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 124 ಸಿಸಿ ಸಿಂಗಲ್ ಸಿಲಿಂಡರ್, ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 6500 ಆರ್‌ಪಿಎಂನಲ್ಲಿ 6.2 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5000 ಆರ್‌ಪಿಎಂನಲ್ಲಿ 10.2 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. 47 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ನೂತನ ಆಕ್ಸೆಸ್ ಸ್ಕೂಟರ್ 106 ಕೆಜಿ ತೂಕವು ಇದೆ. 5 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 6.93 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ ಹಾಗೂ 1,260 ಎಂಎಂ ವೀಲ್‌ಬೇಸ್‌ನ್ನು ತನ್ನದಾಗಿಸಿಕೊಂಡಿದೆ.

ಈ ಸ್ಕೂಟರ್ 4.2-ಇಂಚಿರುವ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಸಿಂಗಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. 12-ಇಂಚಿರುವ ಅಲಾಯ್ ವೀಲ್‌ಗಳು, 90/90-12 ಹಾಗೂ ಹಿಂದೆ 90/100-10 ಅಳತೆಯ ಉತ್ತಮವಾದ ಟೈರ್ಗಳನ್ನು ಪಡೆದಿದೆ.
ಶೀಘ್ರ ಸುಜುಕಿ ಇ ಆಕ್ಸೆಸ್ (Suzuki e Access) ಕೂಡ ಬಿಡುಗಡೆಯಾಗಲಿದೆ:
ಇದು ರೂ.1.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ 3.07 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 4.2-ಇಂಚಿರುವ ಟಿಎಫ್‌ಟಿ ಡಿಸ್‌ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications








