Suzuki: ರೂ.87,000, 45 Km ಮೈಲೇಜ್.. ಸುಜುಕಿ ಆಕ್ಸೆಸ್ 125ಗೆ ಮುಗಿಬಿದ್ದ ಗ್ರಾಹಕರು.. ರೆಕಾರ್ಡ್ ಸಂಖ್ಯೆಯಲ್ಲಿ ಸೇಲ್ಸ್!
ಸುಜುಕಿ ಆಕ್ಸೆಸ್ 125 (Suzuki Access 125) ಪ್ರಖ್ಯಾತ ಸ್ಕೂಟರ್ ಆಗಿದ್ದು, ವಿಶ್ವಾಸಾರ್ಹತೆ ಹಾಗೂ ಉತ್ತಮವಾದ ಕಾರ್ಯಕ್ಷಮತೆಯಿಂದ ಎಲ್ಲೆಡೆ ಮನೆ ಮಾತಾಗಿದೆ. ಈ ಸ್ಕೂಟರ್ ದಿನಬಳಕೆಗೂ ಹೆಚ್ಚು ಸೂಕ್ತವಾಗಿದೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಸ್ಕೂಟರ್‌ಗಳ ಪಟ್ಟಿ ಪ್ರಕಟಗೊಂಡಿದೆ. ಅದರಲ್ಲಿ 'ಆಕ್ಸೆಸ್ 125' ಮೂರನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಹೋಂಡಾ ಆಕ್ಟಿವಾ ಇದ್ದರೆ, ಎರಡನೇ ಸ್ಥಾನವನ್ನು ಟಿವಿಎಸ್ ಜೂಪಿಟರ್ ಭದ್ರಪಡಿಸಿಕೊಂಡಿದೆ.
ಕಳೆದ ತಿಂಗಳು (ಮೇ-2025) ಸುಜುಕಿಯು ಒಟ್ಟು 75,778 ಯುನಿಟ್ 'ಆಕ್ಸೆಸ್ 125' ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 64,812 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 16.92% ಪ್ರಗತಿಯಾಗಿದೆ.

ಸುಜುಕಿ ಆಕ್ಸೆಸ್ 125 ವಿಶೇಷತೆಗಳೇನು:
ಈ ಸ್ಕೂಟರ್ ರೂ.87,000 ರಿಂದ 98,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ ಎಡಿಷನ್, ಸ್ಪೆಷಲ್ ಎಡಿಷನ್ - ಡಿಸ್ಕ್ ಬ್ರೇಕ್, ರೈಡ್ - ಕನೆಕ್ಟ್ ಎಡಿಷನ್ ಹಾಗೂ ರೈಡ್ - ಕನೆಕ್ಟ್ ಟಿಎಫ್‌ಟಿ ಎಡಿಷನ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ನೂತನ ಆಕ್ಸೆಸ್ ಸ್ಕೂಟರ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಪರ್ಲ್ ಶೈನಿ ಬೀಜ್, ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಹಾಗೂ ಸಾಲಿಡ್ ಐಸ್ ಗ್ರೀನ್ ಬಣ್ಣಗಳೊಂದಿಗೂ ದೊರೆಯುತ್ತದೆ.

ಇದು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 125 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 8.3 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) & 10.2 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 5 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.
ಈ ಸ್ಕೂಟರ್ 1870 ಎಂಎಂ ಉದ್ದ, 690 ಎಂಎಂ ಅಗಲ ಹಾಗೂ 1160 ಎಂಎಂ ಎತ್ತರವು ಇದೆ. 160 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1265 ಎಂಎಂ ಉದ್ದದ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 106 ಕೆಜಿ ತೂಕವಿದೆ.

ಹೊಸ ಆಕ್ಸೆಸ್ ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 8.95 ಸೆಕೆಂಡುಗಳಲ್ಲಿ 0 ರಿಂದ 30 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಈ ಸ್ಕೂಟರ್ ಸವಾರರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಸಿಂಗಲ್ - ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಇದರೊಂದಿಗೆ ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಅತಿ ಶೀಘ್ರದಲ್ಲೇ ಸುಜುಕಿ ಇ ಆಕ್ಸೆಸ್ (Suzuki e Access) ಬಿಡುಗಡೆ:
ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ರೂ.1 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಈ ಸ್ಕೂಟರ್ 3.07 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 95 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಟಿಎಫ್‌ಟಿ ಡಿಸ್‌ಪ್ಲೇ ಹಾಗೂ ಸುಜುಕಿ ರೈಡ್ ಕನೆಕ್ಟ್ ಇ-ಆ್ಯಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications








