ಈ ಪ್ರಖ್ಯಾತ Suzuki ಸ್ಕೂಟರ್‌ಗೆ ಫುಲ್ ಡಿಮ್ಯಾಂಡ್.. ಸೇಲ್ಸ್ ಬಲುಜೋರು, 64 Km ಮೈಲೇಜ್‌.. 80,000 ರೂಪಾಯಿಗೆ ಸಿಗುತ್ತೆ!

ಸುಜುಕಿ ಆಕ್ಸೆಸ್ 125 (Suzuki Access 125) ಜಗದ್ವಿಖ್ಯಾತ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಇದಕ್ಕೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ನವೆಂಬರ್ ತಿಂಗಳಲ್ಲೂ 'ಆಕ್ಸೆಸ್ 125' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 67,477 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 54,118 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 24.68% ಪ್ರಗತಿಯಾಗಿದೆ.

ಇದೇ ನವೆಂಬರ್‌ನಲ್ಲಿ 'ಸುಜುಕಿ ಆಕ್ಸೆಸ್ 125' ಮಾರಾಟವು ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಇದು ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. ನೋಡಲು ಚೆನ್ನಾಗಿದ್ದು, ಮಹಿಳೆ ಹಾಗೂ ಪುರುಷರು ಸುಲಭವಾಗಿ ಬಳಕೆ ಮಾಡಬಹುದು. ಹೀಗಾಗಿ 'ಆಕ್ಸೆಸ್ 125' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Suzuki Access 125 November Sales 2025 Details

ಈ ಸ್ಕೂಟರ್ ಬಜೆಟ್ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.80,891 ಹಾಗೂ ಗರಿಷ್ಠ ರೂ.97,084 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಸ್ಟ್ಯಾಂಡರ್ಡ್ ಎಡಿಷನ್, ಸ್ಪೆಷಲ್ ಎಡಿಷನ್ ಡಿಸ್ಕ್ ಬ್ರೇಕ್, ರೈಡ್ ಕನೆಕ್ಟ್ ಎಡಿಷನ್ ಮತ್ತು ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

ನೂತನ 'ಸುಜುಕಿ ಆಕ್ಸೆಸ್ 125' ಸ್ಕೂಟರ್, ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್, 'ಯು' ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಗ್ರೇಸ್ ವೈಟ್, ಪರ್ಲ್ ಶೈನಿ ಬೀಜ್ ಮತ್ತು ಪರ್ಲ್ ಮ್ಯಾಟ್ ಆಕ್ವಾ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

Suzuki Access 125 November Sales 2025 Details

ಇದು ಸಾಕಷ್ಟು ವಿಶಾಲವಾಗಿದೆ. 1,835 ಮಿ.ಮೀ ಉದ್ದ, 690 ಮಿ.ಮೀ ಅಗಲ ಮತ್ತು 1,155 ಮಿ.ಮೀ ಎತ್ತರವಿದೆ. 160 ಮಿ.ಮೀ ಗ್ರೌಂಡ್ ಕ್ಲಿಯರೆನ್ ಹಾಗೂ 1,260 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 106 ಕೆಜಿ ತೂಕವಿದೆ.

ಈ ಸ್ಕೂಟರ್ ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 124-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 8.3 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.2 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. ಸರಿ ಸುಮಾರು 45 ರಿಂದ 64 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5-ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

Suzuki Access 125 November Sales 2025 Details

ಹೊಸ 'ಆಕ್ಸೆಸ್ 125' ಸ್ಕೂಟರ್, 4.2-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. ಬರೀ 6.93 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ರಸ್ತೆಯ ಬಿಗಿಯಾದ ಹಿಡಿತ ಒದಗಿಸಲು 12-ಇಂಚಿನ ಅಲಾಯ್ ವೀಲ್‌ಗಳು ಮತ್ತು ಉತ್ತಮವಾದ ಟೈರ್​ಗಳನ್ನು ತನ್ನದಾಗಿಸಿಕೊಂಡಿದೆ. ಸೀಟ್ ಎತ್ತರವು 773 ಮಿ.ಮೀ ಇದೆ.

ಇದು ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸಬಲ್ಲದು. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸಿಂಗಲ್ - ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಬಿಎಸ್ (ಕಾಂಬಿ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Wednesday, December 24, 2025, 21:26 [IST]
English summary
Suzuki access 125 november sales 2025 details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+