64 Km ಮೈಲೇಜ್, ರೂ.80,000 ಬೆಲೆ.. ಆದ್ರೂ ಆಕ್ಟಿವಾ & ಜುಪಿಟರ್ ಎದುರಿಗೆ ಮಂಕಾದ ಸುಜುಕಿ ಆಕ್ಸೆಸ್ ಸ್ಕೂಟರ್!
ಸುಜುಕಿ ಆಕ್ಸೆಸ್ 125 (Suzuki Access 125) ಜಗಮೆಚ್ಚಿದ ಸ್ಕೂಟರ್ ಆಗಿದೆ. ದಿನಬಳಕೆಗೂ ಹೆಚ್ಚು ಸೂಕ್ತವಾಗಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಆದರೂ ಈ ಅಕ್ಟೋಬರ್ ತಿಂಗಳಲ್ಲಿ 'ಆಕ್ಸೆಸ್' ಮಾರಾಟ ಸಂಖ್ಯೆ ಸ್ವಲ್ಪ ಮಟ್ಟಿಗೆ ಕುಸಿತವಾಗಿದೆ. 70,327 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 74,813 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ -6% ಕುಸಿತವಾಗಿದೆ.
ಅದರ ಹೊರತಾಗಿಯೂ ದೇಶೀಯ ಮಾರುಕಟ್ಟೆಯಲ್ಲಿ ಅತಿ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ ಸ್ಕೂಟರ್‌ಗಳ ಪಟ್ಟಿಯಲ್ಲಿ 'ಸುಜುಕಿ ಆಕ್ಸೆಸ್ 125' ಮೂರನೇ ಸ್ಥಾನದಲ್ಲಿದೆ. 'ಹೋಂಡಾ ಆಕ್ಟಿವಾ' ಮೊದಲ ಸ್ಥಾನದಲ್ಲಿದ್ದು, 3,26,551 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಎರಡನೇ ಸ್ಥಾನದಲ್ಲಿ ಟಿವಿಎಸ್ ಜುಪಿಟರ್ ಇದ್ದು, 1,18,888 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

ಇದೇ ಅಕ್ಟೋಬರ್‌ನಲ್ಲಿ ದೀಪಾವಳಿಯಂತಹ ದೊಡ್ಡ ಹಬ್ಬವಿದ್ದರೂ 'ಸುಜುಕಿ ಆಕ್ಸೆಸ್ 125' ಮಾರಾಟ ಸಂಖ್ಯೆಯು ಇಳಿಮುಖವಾಗಲು ಹಲವು ಕಾರಣಗಳಿವೆ. ಈ ಸ್ಕೂಟರ್‌ನ ಹೆಚ್ಚು - ಕಮ್ಮಿ ಬೆಲೆಗೆ ಇತರೆ ಕಂಪನಿಯ ದ್ವಿಚಕ್ರ ವಾಹನಗಳು (two wheelers) ಖರೀದಿಗೆ ಲಭ್ಯವಿವೆ. ಗ್ರಾಹಕರು ಅವುಗಳ ಖರೀದಿಯತ್ತ ಮುಖ ಮಾಡಿದ್ದಾರೆ. ಜೊತೆಗೆ, ನೂತನ 'ಆಕ್ಸೆಸ್' ವಿನ್ಯಾಸವು ಕೊಂಚ ಯುವ ಗ್ರಾಹಕರನ್ನು ಸೆಳೆಯುವಲ್ಲಿ ವಿಫಲವಾಗಿದೆ. ಹೀಗಾಗಿ, ಮಾರಾಟವು ಕಡಿಮೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.
'ಸುಜುಕಿ ಆಕ್ಸೆಸ್ 125' ವಿಶೇಷತೆಗಳೇನು:
ಈ ಸ್ಕೂಟರ್ ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ರೂ.80,572 ರಿಂದ ರೂ.97,166 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಸ್ಟ್ಯಾಂಡರ್ಡ್ ಎಡಿಷನ್, ಸ್ಪೆಷಲ್ ಎಡಿಷನ್ ಡಿಸ್ಕ್ ಬ್ರೇಕ್, ರೈಡ್ ಕನೆಕ್ಟ್ ಎಡಿಷನ್ ಮತ್ತು ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಎಂಬ ನಾಲ್ಕು ರೂಪಾಂತರಗಳೊಂದಿಗೂ ದೊರೆಯುತ್ತದೆ.

ಇದು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಗ್ರೇಸ್ ವೈಟ್, ಪರ್ಲ್ ಶೈನಿ ಬೀಜ್ ಹಾಗೂ ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 160 ಮಿ.ಮೀ ಗ್ರೌಂಡ್ ಕ್ಲಿಯರೆನ್ & 1,260 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಹೊಸ 'ಸುಜುಕಿ ಆಕ್ಸೆಸ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 124-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 45 ರಿಂದ 64 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5.3 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 90 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 6.93 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಸ್ಕೂಟರ್ 4.2 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಅತಿ ಶೀಘ್ರದಲ್ಲೇ ಸುಜುಕಿ ಇ ಆಕ್ಸೆಸ್ (Suzuki e Access) ಕೂಡ ಬಿಡುಗಡೆಯಾಗಲಿದೆ:
ಇದು ರೂ.1 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಗ್ರೇಸ್ ವೈಟ್ ಹಾಗೂ ಪರ್ಲ್ ಜೇಡ್ ಗ್ರೀನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 95 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 4.2 ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








