Suzuki: ಅಗ್ಗದ ಸುಜುಕಿ ಆಕ್ಸೆಸ್ 125 ಸ್ಕೂಟರ್‌ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಸುಜುಕಿ ಆಕ್ಸೆಸ್ 125 (Suzuki Access 125) ವಿಶ್ವಾಸಾರ್ಹ ಸ್ಕೂಟರ್ ಆಗಿದೆ. ಹೆಚ್ಚು ಅತ್ಯಾಧುನಿಕ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಸಿಗಲಿದ್ದು, ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ನೀವು ಹೊಚ್ಚ ಹೊಸ 'ಆಕ್ಸೆಸ್ 125'ನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ನಾವಿಲ್ಲಿ, ಈ ಸ್ಕೂಟರ್‌ನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ದೇಶದ ವಿವಿಧ ನಗರಗಳಲ್ಲಿ ನೂತನ 'ಸುಜುಕಿ ಆಕ್ಸೆಸ್ 125' ಸ್ಕೂಟರ್ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಇದರ ಸ್ಟ್ಯಾಂಡರ್ಡ್ ಎಡಿಷನ್ (Standard Edition) ರೂಪಾಂತರ, ರೂ.96,000 ವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.20,000 ಡೌನ್-ಪೇಮೆಂಟ್ ಪಾವತಿ ಮಾಡಿ ಮನೆಗೆ ತಂದರೆ, ರೂ.76,000 ವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ಮಾಸಿಕ ರೂ.2,400 ವರೆಗೆ ಇಎಂಐ ಕಟ್ಟಬೇಕು.

Suzuki Access 125 On Road Price And Emi Details

ಇದೇ ಸ್ಕೂಟರ್‌ನ ಸ್ಪೆಷಲ್ ಎಡಿಷನ್ (Special Edition) ರೂಪಾಂತರ, ರೂ.1.04 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.20,000 ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, ರೂ.84,000 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 3 ವರ್ಷಕ್ಕೆ ತಿಂಗಳಿಗೆ ರೂ.2,600 ವರೆಗೆ ಇಎಂಐ ಪಾವತಿ ಮಾಡಬೇಕು.

ಮತ್ತೊಂದು ರೈಡ್ ಕನೆಕ್ಟ್ ಎಡಿಷನ್ (Ride Connect Edition) ರೂಪಾಂತರ, ರೂ.1.09 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ಇದನ್ನು ರೂ.20,000 ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, ರೂ.89,000 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ಮಾಸಿಕ ರೂ.2,700 ವರೆಗೆ ಇಎಂಐ ಕಟ್ಟಬೇಕು.

Suzuki Access 125 On Road Price And Emi Details

ಇನ್ನೊಂದು ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ (Ride Connect TFT Edition) ರೂಪಾಂತರ, ರೂ 1.16 ಲಕ್ಷವರೆಗೆ ಆನ್-ರೋಡ್ ದರವನ್ನು ಹೊಂದಿದೆ. ರೂ.20,000 ಡೌನ್-ಪೇಮೆಂಟ್ ಕಟ್ಟಿ ಖರೀದಿ ಮಾಡಿದರೆ, ರೂ.96,000 ವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 3 ವರ್ಷಕ್ಕೆ ತಿಂಗಳಿಗೆ ರೂ.3,000 ವರೆಗೆ ಇಎಂಐ ಪಾವತಿಸಬೇಕು.

ಈ ಸ್ಕೂಟರ್ ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್ & ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಮತ್ತು ಸಾಲಿಡ್ ಐಸ್ ಗ್ರೀನ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಬರೋಬ್ಬರಿ 106 ಕೆಜಿ ತೂಕವು ಇದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 124 ಸಿಸಿ ಸಿಂಗಲ್ - ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8.3 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.2 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. 45 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5.6 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.

ಹೊಸ ಆಕ್ಸೆಸ್ ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಸಿಂಗಲ್ ಶಾಕ್-ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ನಿಮ್ಮ ಗಮನಕ್ಕೆ.. ಈ ಸುಜುಕಿ ಆಕ್ಸೆಸ್ 125 ಸ್ಕೂಟರ್‌ನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Saturday, July 19, 2025, 16:41 [IST]
English summary
Suzuki access 125 on road price and emi details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+