Suzuki: ಹೊಸ ಸುಜುಕಿ ಆಕ್ಸೆಸ್ 125 ಸ್ಕೂಟರ್ ಖರೀದಿಸಬೇಕೇ.. ಆನ್ ರೋಡ್ ಬೆಲೆ ಏನು.. ಅತಿ ಕಡಿಮೆ EMI?
ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಆಕ್ಸೆಸ್ 125' ಜನಪ್ರಿಯ ಸ್ಕೂಟರ್ ಆಗಿ ಹೊರಹೊಮ್ಮಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಯೋಚಿಸಿದ್ದೀರಾ.. ಹಾಗಾದರೆ, 'ಸುಜುಕಿ ಆಕ್ಸೆಸ್ 125' ಅತ್ಯುತ್ತಮ ಆಯ್ಕೆಯಾಗಲಿದೆ. ನಾವಿಲ್ಲಿ ಈ ನೂತನ ಸ್ಕೂಟರ್‌ನ ಆನ್ ರೋಡ್ ಬೆಲೆ (On Road Price), ಮೈಲೇಜ್ (Mileage) ಹಾಗೂ ಇಎಂಐ (EMI) ಆಯ್ಕೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ದೇಶೀಯ ಮಾರುಕಟ್ಟೆಯಲ್ಲಿ ಸುಜುಕಿ ಆಕ್ಸೆಸ್ 125 (Suzuki Access 125) ಸ್ಕೂಟರ್‌ನ ವಿವಿಧ ರೂಪಾಂತರಗಳು (ವೇರಿಯೆಂಟ್) ಖರೀದಿಗೆ ಲಭ್ಯವಿವೆ. ಇದರ ಡ್ರಮ್ (Drum) ರೂಪಾಂತರ, ರೂ.1.05 ಲಕ್ಷವರೆಗೆ ಆನ್ ರೋಡ್ ಬೆಲೆಯನ್ನು ಹೊಂದಿದೆ. ರೂ.30,000 ಡೌನ್ ಪೇಮೆಂಟ್ ಕಟ್ಟಿ ಈ ಸ್ಕೂಟರ್‌ನ್ನು ತೆಗೆದುಕೊಂಡರೆ, ರೂ.75,000 ವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 8% ಬಡ್ಡಿ ದರದಲ್ಲಿ 3 ವರ್ಷಕ್ಕೆ ತಿಂಗಳಿಗೆ ರೂ.2,400 ವರೆಗೆ ಇಎಂಐ ಪಾವತಿಸಬೇಕು.

ಸುಜುಕಿ ಆಕ್ಸೆಸ್ 125 ಸ್ಕೂಟರ್‌ನ ಡಿಸ್ಕ್ (Disc) ರೂಪಾಂತರ, ರೂ.1.11 ಲಕ್ಷವರೆಗೆ ಆನ್ ರೋಡ್ ದರವನ್ನು ಒಳಗೊಂಡಿದೆ. ಇದನ್ನು ರೂ.30,000 ಡೌನ್ ಪೇಮೆಂಟ್ ಪಾವತಿಸಿ ಖರೀದಿ ಮಾಡಿದರೆ, ರೂ.81,000 ವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ 3 ವರ್ಷಗಳಿಗೆ ಮಾಸಿಕ ರೂ.2,500 ವರೆಗೆ ಇಎಂಐ ಕಟ್ಟಬೇಕು.
ಹೊಸ ಸುಜುಕಿ ಆಕ್ಸೆಸ್ 125ನ ರೈಡ್ ಕನೆಕ್ಟ್ ಎಡಿಷನ್ (Ride Connect Edition) ರೂಪಾಂತರ, ರೂ.1.18 ಲಕ್ಷವರೆಗೆ ಆನ್ ರೋಡ್ ಬೆಲೆಯನ್ನು ಪಡೆದಿದೆ. ಈ ಸ್ಕೂಟರ್‌ನ್ನು ರೂ.30,000 ಡೌನ್ ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.88000 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷಕ್ಕೆ ತಿಂಗಳಿಗೆ ರೂ.2,700 ವರೆಗೆ ಇಎಂಐ ಪಾವತಿ ಮಾಡಬೇಕು.

ಈ ಸುಜುಕಿ ಆಕ್ಸೆಸ್ 125 ಸ್ಕೂಟರ್ ಶಕ್ತಿಯುತವಾದ 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 8.7 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯದ ಹೊಂದಿದೆ. 45 ಕೆಎಂಪಿಎಲ್‌ಗೂ ಅಧಿಕ ಮೈಲೇಜ್ ನೀಡುತ್ತದೆ.
ನೂತನ ಸುಜುಕಿ ಆಕ್ಸೆಸ್ 125 ಸ್ಕೂಟರ್ ಹಲವು ನವೀನ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಫುಲ್-ಡಿಜಿಟಲ್ ಇನ್ಫಾರ್ಮಶನ್ ಪ್ಯಾನೆಲ್ ಮತ್ತು ಸುಜುಕಿ ರೈಡ್ ಕನೆಕ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಸ್ಕೂಟರ್ ಬರೋಬ್ಬರಿ 103 ಕೆಜಿ ತೂಕವಿದ್ದು, 5 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಪಡೆದಿದೆ.
ಹೊಸ ಸುಜುಕಿ ಆಕ್ಸೆಸ್ 125 ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ. ಈ ಸ್ಕೂಟರ್‌ಗೆ ಹೋಂಡಾ ಆಕ್ಟಿವಾ 125 ಮತ್ತು ಟಿವಿಎಸ್ ಜುಪಿಟರ್ 125 ಸ್ಕೂಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








