Suzuki: ಸುಜುಕಿ ಆಕ್ಸೆಸ್ 125 ಸ್ಕೂಟರ್‌ನ ಹೊಸ ಮಾಡೆಲ್ ಬಿಡುಗಡೆ.. ಬೆಲೆ ಎಷ್ಟು, ಯಾವೆಲ್ಲ ವೈಶಿಷ್ಟ್ಯಗಳಿವೆ?

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ಪ್ರಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ಆಕ್ಸೆಸ್ 125 (Access 125) ಗೇಮ್ ಚೇಂಜರ್ ಸ್ಕೂಟರ್‌ ಆಗಿ ಹೊರಹೊಮ್ಮಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ಇದೇ ಸ್ಕೂಟರ್‌ನ ಹೊಚ್ಚ ಹೊಸ ಮಾಡೆಲ್‌ನ್ನು ಬಿಡುಗಡೆಗಳಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಸುಜುಕಿ ಆಕ್ಸೆಸ್ 125 ಸ್ಕೂಟರ್‌ನ ನೂತನ ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ (Ride Connect TFT Edition) ಮಾಡೆಲ್‌ನ್ನು ಮಾರಾಟಕ್ಕೆ ತರಲಾಗಿದೆ. ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ರೂ.1.02 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ.

Suzuki Access 125 Ride Connect TFT Edition Launched Rs 1 02 Lakh Price Details

ಈ ಹೊಸ ಮಾಡೆಲ್, ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ 4.2-ಇಂಚಿನ ಟಿಎಫ್‌ಟಿ ಡಿಸ್​ಪ್ಲೇಯನ್ನು ಹೊಂದಿದೆ. ಇದರಲ್ಲಿ ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಡೇ & ನೈಟ್ ಮೋಡ್‌ಗಳು, ವೆದರ್ ಅಪ್ಡೇಟ್ಸ್, ಮೊಬೈಲ್ ಚಾರ್ಜರ್ ಲೆವೆಲ್ ಇಂಡಿಕೇಟರ್ ಮತ್ತು ಫ್ಯುಯೆಲ್ ಲೆವೆಲ್ ಇಂಡಿಕೇಟರ್‌ನಂತಹ ಹಲವು ವೈಶಿಷ್ಟ್ಯಗಳಿವೆ.

ನೂತನ ಸುಜುಕಿ ಆಕ್ಸೆಸ್ 125 ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಮಾಡೆಲ್, ಎಲ್ಇಡಿ ಹೆಡ್‌ಲೈಟ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಜೊತೆಗೆ ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಸಾಲಿಡ್ ಐಸ್ ಗ್ರೀನ್ ಹಾಗೂ ಪರ್ಲ್ ಮ್ಯಾಟ್ ಆಕ್ವಾ ಸಿಲ್ವರ್ ಎಂಬ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ.

Suzuki Access 125 Ride Connect TFT Edition Launched Rs 1 02 Lakh Price Details

ಹೊಸ ಆಕ್ಸೆಸ್ 125 ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಮಾಡೆಲ್‌ನ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು 125 ಸಿಸಿ ಸಿಂಗಲ್ - ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6,500 ಆರ್‌ಪಿಎಂನಲ್ಲಿ 8.3 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 5,000 ಆರ್‌ಪಿಎಂನಲ್ಲಿ 10.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ. 45 + ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸಿಂಗಲ್ ಶಾಕ್-ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ. ಇದು ಬರೋಬ್ಬರಿ 106 ಕೆಜಿ ತೂಕವಿದ್ದು, 5.6 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಇನ್ನು, ಸುಜುಕಿ ಆಕ್ಸೆಸ್ 125ನ ಸ್ಕೂಟರ್‌ನ ನೂತನ ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಮಾಡೆಲ್ ಮಾರಾಟಕ್ಕೆ ಬಂದಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಮುಂಬರುವ ದಿನಗಳಲ್ಲಿ ಹೊಸ ಮಾಡೆಲ್‌ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, May 17, 2025, 21:26 [IST]
English summary
Suzuki access 125 ride connect tft edition launched rs 1 02 lakh price details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+