Suzuki: 47.5 Km ಮೈಲೇಜ್.. ರೂ.85,000 ಬೆಲೆ, ಸುಜುಕಿ ಆಕ್ಸೆಸ್ 125 ಸ್ಕೂಟರ್‌ಗಾಗಿ ಕ್ಯೂ ನಿಂತ ಗ್ರಾಹಕರು!

ಸುಜುಕಿ ಆಕ್ಸೆಸ್ 125 (Suzuki Access 125) ಜನಪ್ರಿಯ ಸ್ಕೂಟರ್ ಆಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುವುದರಿಂದ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ, ಈ ಫೆಬ್ರವರಿಯಲ್ಲಿ ದೇಶೀಯವಾಗಿ ಮಾರಾಟಗೊಂಡ ಟಾಪ್ 10 ದ್ವಿಚಕ್ರ ವಾಹನಗಳ (Two-Wheelers) ಪಟ್ಟಿ ಪ್ರಕಟಗೊಂಡಿದ್ದು, ಇದೇ 'ಸುಜುಕಿ ಆಕ್ಸೆಸ್ 125' ಸ್ಕೂಟರ್ 8ನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಹೀರೋ ಸ್ಪ್ಲೆಂಡರ್ ಹಾಗೂ ಎರಡನೇ ಸ್ಥಾನದಲ್ಲಿ ಹೋಂಡಾ ಆಕ್ಟಿವಾ ಮುಂದುವರಿದಿದೆ.

ಕಳೆದ ತಿಂಗಳು (ಫೆಬ್ರವರಿ-2025) 'ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ' ಬರೋಬ್ಬರಿ 59,039 ಯುನಿಟ್ 'ಆಕ್ಸೆಸ್' ಸ್ಕೂಟರ್‌ಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 56,473 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 4.54% ಪ್ರಗತಿಯಾಗಿದೆ. ಇದರೊಂದಿಗೆ ಈ ಸ್ಕೂಟರ್ ದಿನದಿಂದ ದಿನಕ್ಕೆ ಮಧ್ಯಮ ವರ್ಗದ ಜನರ ಆಯ್ಕೆಯ ದ್ವಿಚಕ್ರ ವಾಹನವಾಗಿ ಹೊರ ಹೊಮ್ಮುತ್ತಿದೆ.

Suzuki Access 125 Scooter February 2025 Sales Achieved Good Growth Details

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ ಸುಜುಕಿ ಆಕ್ಸೆಸ್ 125 ಸ್ಕೂಟರ್ ಕನಿಷ್ಠ ರೂ.85,283 ಹಾಗೂ ಗರಿಷ್ಠ ರೂ.96,881 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಜೊತೆಗೆ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಅದಕ್ಕೆ ತಕ್ಕಂತೆ ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್ ಹಾಗೂ ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಸುಜುಕಿ ಆಕ್ಸೆಸ್ 125 ಸ್ಕೂಟರ್ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 125 ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 47.5 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಇದು 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದ್ದು, 106 ಕೆಜಿ ತೂಕವು ಇದೆ.

Suzuki Access 125 Scooter February 2025 Sales Achieved Good Growth Details

ಈ ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಪಡೆದಿದೆ. ಜೊತೆಗೆ ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ ಡಿಸ್ಕ್ ಮತ್ತು ಡ್ರಮ್ ಬ್ರೇಕ್ ಆಯ್ಕೆಯನ್ನು ತನ್ನದಾಗಿಕೊಂಡಿದೆ.

ಅತಿ ಶೀಘ್ರದಲ್ಲೇ ಸುಜುಕಿ ಇ ಆಕ್ಸೆಸ್ (Suzuki e Access) ಸಹ ಬಿಡುಗಡೆ: ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಇದು ರೂ.1 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಈ ಸ್ಕೂಟರ್ 3.07 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 95 ಕಿ.ಮೀ ಓಡುತ್ತದೆ ಎಂಬ ವಿವರಗಳು ಕೂಡ ಲಭ್ಯವಾಗಿವೆ.

ಒಟ್ಟಾರೆ ಸುಜುಕಿ ಮೋಟಾರ್‌ಸೈಕಲ್ ಇಂಡಿಯಾದ ಮಾರಾಟ ಹೇಗಿದೆ: ಹೋದ ತಿಂಗಳು ಕಂಪನಿಯು 90,206 ಯುನಿಟ್‌ (ದೇಶೀಯ ಮಾರಾಟ & ರಫ್ತು) ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಿದೆ. 2024ರ ಫೆಬ್ರವರಿಯಲ್ಲಿ 97,435 ಯುನಿಟ್‌ಗಳನ್ನು ಮಾರಾಟಗೊಳಿಸಿತ್ತು. ಅದಕ್ಕೆ ಹೋಲಿಕೆ ಮಾಡಿದರೆ ವರ್ಷದಿಂದ ವರ್ಷಕ್ಕೆ ಮಾರಾಟ ಪ್ರಮಾಣ ಶೇಕಡ 7.4% ಕುಸಿತವಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, March 19, 2025, 15:28 [IST]
English summary
Suzuki access 125 scooter february 2025 sales achieved good growth details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+