Suzuki Access 125: ಸದ್ದಿಲ್ಲದೇ ಹೊಸ 'ಸುಜುಕಿ ಆಕ್ಸೆಸ್ 125' ಸ್ಕೂಟರ್ ಬೆಲೆ ಏರಿಕೆ.. ಎಷ್ಟಾಗಿದೆ?
ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ದೇಶೀಯ ಮಾರುಕಟ್ಟೆಯಲ್ಲಿ 'ಆಕ್ಸೆಸ್ 125' ಸ್ಕೂಟರ್‌ನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಇದೇ ಸ್ಕೂಟರ್‌ನ ನವೀಕರಿಸಿದ ಮಾಡೆಲ್‌ನ್ನು ಬಿಡುಗಡೆಗೊಳಿಸಲಾಗಿತ್ತು. ಸದ್ಯ, ಈ ಸ್ಕೂಟರ್‌ನ ಬೆಲೆಯನ್ನು ಪರಿಷ್ಕರಿಸಲಾಗಿದ್ದು, ಕೊಂಚ ಮಟ್ಟಿಗೆ ದರವನ್ನು ಏರಿಕೆ ಮಾಡಲಾಗಿದೆ. ಬನ್ನಿ, ಆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ನೂತನ ಸುಜುಕಿ ಆಕ್ಸೆಸ್ 125 (Suzuki Access 125) ಸ್ಕೂಟರ್ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ ಸ್ಟ್ಯಾಂಡರ್ಡ್ ಎಡಿಷನ್ (Standard Edition) ರೂಪಾಂತರದ ಬೆಲೆಯನ್ನು ರೂ.900 ಏರಿಕೆ ಮಾಡಲಾಗಿದ್ದು, ರೂ.83,800 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಈ ಮೊದಲು ರೂ.82,900 ಬೆಲೆಯನ್ನು ಒಳಗೊಂಡಿತ್ತು.

ಅದೇ ರೀತಿಯಲ್ಲಿ ಸ್ಪೆಷಲ್ ಎಡಿಷನ್ - ಡಿಸ್ಕ್ ಬ್ರೇಕ್ (Special Edition - Disc Brake) ರೂಪಾಂತರದ ದರವನ್ನು ರೂ.1,100 ಹೆಚ್ಚಳ ಮಾಡಲಾಗಿದೆ. ರೂ.90,500 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಹಿಂದೆ, ರೂ.89,400 ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತಿತ್ತು.
ಹಾಗೆಯೇ ಸುಜುಕಿ ಆಕ್ಸೆಸ್ 125 ಸ್ಕೂಟರ್‌ನ ರೈಡ್ - ಕನೆಕ್ಟ್ ಎಡಿಷನ್ (Ride - Connect Edition) ರೂಪಾಂತರದ ಬೆಲೆಯನ್ನು ರೂ.600 ಏರಿಕೆ ಮಾಡಲಾಗಿದೆ. ಇದು ರೂ.95,100 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಮೊದಲು ರೂ.94,500 ಬೆಲೆಯಲ್ಲಿ ಗ್ರಾಹಕರಿಗೆ ಲಭ್ಯವಾಗುತ್ತಿತ್ತು.

ನೂತನ ಸುಜುಕಿ ಆಕ್ಸೆಸ್ 125 ಸ್ಕೂಟರ್ ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಇದು ಒಮ್ಮೆಲೇ ನೋಡುಗರನ್ನು ತನ್ನತ್ತ ಸೆಳೆದು ಬಿಡುತ್ತದೆ. ಈ ಸ್ಕೂಟರ್ ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಮತ್ತು ಸಾಲಿಡ್ ಐಸ್ ಗ್ರೀನ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ ಸ್ಕೂಟರ್ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 124 ಸಿಸಿ ಒಬಿಡಿ-2 ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 8.3 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.2 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. ಜೊತೆಗೆ 45 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಲ್ಲದು.

ಈ ಸುಜುಕಿ ಆಕ್ಸೆಸ್ 125 ಸ್ಕೂಟರ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯನ್ನು ಪಡೆದಿದೆ. ಇದು 106 ಕೆಜಿ ತೂಕವಿದ್ದು, 5.6 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ನೂತನ ಸುಜುಕಿ ಆಕ್ಸೆಸ್ 125 ಸ್ಕೂಟರ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರಿಗೆ ರಸ್ತೆಯ ಮೇಲೆ ಬಿಗಿಯಾದ ಹಿಡಿತವನ್ನು ಒದಗಿಸಲು ಮುಂದೆ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂದೆ (ರೇರ್) ಸಿಂಗಲ್ ಶಾಕ್-ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








