ರೂ.80,000.. 47 ಕಿ.ಮೀ ಮೈಲೇಜ್, ಅಗ್ಗದ ಸುಜುಕಿ ಆಕ್ಸೆಸ್ 125ನ ಹೊಸ ಆನ್-ರೋಡ್ ದರವೆಷ್ಟು.. ಇಎಂಐ ಏನು?

ಸುಜುಕಿ ಆಕ್ಸೆಸ್ 125 (Suzuki Access 125) ಪ್ರಮುಖ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಸ್ಕೂಟರ್ ಬೆಲೆ ರೂ.8,523 ಇಳಿಕೆಯಾಗಿದೆ. ಕನಿಷ್ಠ ರೂ.80,000 ರಿಂದ ಗರಿಷ್ಠ ರೂ.97,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಮನೆಗೆ ತರಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ 'ಆಕ್ಸೆಸ್ 125' ಅತ್ಯುತ್ತಮ ಆಯ್ಕೆಯಾಗಿದೆ. ನಾವಿಲ್ಲಿ ಇದೇ ಸ್ಕೂಟರ್‌ನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಕುರಿತಂತೆ ಒಂದಷ್ಟು ವಿವರಗಳನ್ನು ವಿವರಿಸಿದ್ದೇವೆ.

ಈ ಸ್ಕೂಟರ್ ವಿವಿಧ ರೂಪದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಸ್ಟ್ಯಾಂಡರ್ಡ್ ಎಡಿಷನ್ ಡ್ರಮ್ ಬ್ರೇಕ್ (Standard Edition Drum Brake) ರೂಪಾಂತರ ರೂ.97,000 ವರೆಗೆ ಆನ್-ರೋಡ್ ದರವನ್ನು ಒಳಗೊಂಡಿದೆ. ರೂ.20,000 ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ ರೂ.77,000 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷದ ಅವಧಿಗೆ ಮಾಸಿಕ ರೂ.2,500 ವರೆಗೆ ಇಎಂಐ ಕಟ್ಟಬೇಕು.

Suzuki Access 125 Scooter New On Road Price And Emi Details

ಇನ್ನೊಂದು ಸ್ಪೆಷನ್ ಎಡಿಷನ್ (Special Edition) ರೂಪಾಂತರ ರೂ.1.04 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರೂ.20,000 ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಳ್ಳಬಹುದು. ಆಗ 84,000 ವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 3 ವರ್ಷಕ್ಕೆ ತಿಂಗಳಿಗೆ ರೂ.2,600 ವರೆಗೆ ಇಎಂಐ ಪಾವತಿ ಮಾಡಬೇಕು.

ಮತ್ತೊಂದು ರೈಡ್ ಕನೆಕ್ಟ್ ಎಡಿಷನ್ (Ride Connect Edition) ರೂಪಾಂತರ, ರೂ.1.10 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿದೆ. ರೂ.20,000 ಡೌನ್-ಪೇಮೆಂಟ್ ಪಾವತಿಸಿ ಖರೀದಿಸಿದರೆ ರೂ.90,000 ವರೆಗೆ ಸಾಲವಿರುತ್ತದೆ. ಶೇಕಡ 8% ಬಡ್ಡಿ ದರದಲ್ಲಿ 3 ವರ್ಷಗಳಿಗೆ ಮಾಸಿಕ ರೂ.2,800 ವರೆಗೆ ಇಎಂಐ ಕಟ್ಟಬೇಕು.

Suzuki Access 125 Scooter New On Road Price And Emi Details

ಇದೇ ಸ್ಕೂಟರ್‌ನ ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ (Ride Connect TFT Edition) ರೂಪಾಂತರ, ರೂ.1.17 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಒಳಗೊಂಡಿದೆ. ರೂ.20,000 ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, ರೂ.97,000 ವರೆಗೆ ಸಾಲ ಬಾಕಿಯಿರುತ್ತದೆ. ಶೇಕಡ 8% ಬಡ್ಡಿ ಹಾಕಿ, 3 ವರ್ಷಕ್ಕೆ ತಿಂಗಳಿಗೆ ರೂ.3,000 ವರೆಗೆ ಇಎಂಐ ಪಾವತಿಸಬೇಕು.

ಸುಜುಕಿ ಆಕ್ಸೆಸ್ 125 ವಿಶೇಷತೆಗಳೇನು:

ಈ ಸ್ಕೂಟರ್ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಗ್ರೇಸ್ ವೈಟ್, ಪರ್ಲ್ ಶೈನಿ ಬೀಜ್ & ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 124 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 47 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 6.93 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ನೂತನ 'ಆಕ್ಸೆಸ್ 125' ಸ್ಕೂಟರ್ 106 ಕೆಜಿ ತೂಕವಿದೆ. 4.2 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಮುಂದೆ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂದೆ (ರೇರ್) ಸಿಂಗಲ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. 12 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.

ನಿಮ್ಮ ಗಮನಕ್ಕೆ.. ಈ ಸ್ಕೂಟರ್‌ನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದೆ. ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

More from DriveSpark

Article Published On: Sunday, September 28, 2025, 13:00 [IST]
English summary
Suzuki access 125 scooter new on road price and emi details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+