Suzuki: 64 ಕಿ.ಮೀ ಮೈಲೇಜ್.. 80,000 ರೂಪಾಯಿ, ಸುಜುಕಿ ಆಕ್ಸೆಸ್ 125ಗೆ ಫುಲ್ ಡಿಮ್ಯಾಂಡ್.. ಮನಸೋತ ಗ್ರಾಹಕರು!

ಸುಜುಕಿ ಆಕ್ಸೆಸ್ 125 (Suzuki Access 125) ವಿಶ್ವಾಸಾರ್ಹ ಸ್ಕೂಟರ್ ಆಗಿದೆ. ಇದು ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸ ಹೊಂದಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಆಕ್ಸೆಸ್ 125' ಸ್ಕೂಟರ್ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 72,238 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 53,715 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಅಂಶವನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 34.48% ಪ್ರಗತಿಯಾಗಿದೆ.

ಇದೇ ಆಗಸ್ಟ್‌ನಲ್ಲೂ ಬರೋಬ್ಬರಿ 60,807 ಯುನಿಟ್‌ 'ಸುಜುಕಿ ಆಕ್ಸೆಸ್ 125' ಸ್ಕೂಟರ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ, ಮಾಸಿಕ ಮಾರಾಟವು ಶೇಕಡ 18.79% ಬೆಳವಣಿಗೆಯಾಗಿದೆ. ಜಿಎಸ್‌ಟಿ ಪರಿಷ್ಕರಣೆ ಬಳಿಕ, ಹೆಚ್ಚಿನ ಗ್ರಾಹಕರು 'ಆಕ್ಸೆಸ್ 125' ಖರೀದಿಯತ್ತ ಮನಸ್ಸು ಮಾಡಿದ್ದಾರೆ. ಹೀಗಾಗಿ, ಮಾರಾಟದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ.

Suzuki Access 125 September 2025 Sales Report

'ಸುಜುಕಿ ಆಕ್ಸೆಸ್ 125' ವಿಶೇಷತೆಗಳೇನು:

ಈ ಸ್ಕೂಟರ್ ಅತಿ ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಕನಿಷ್ಠ ರೂ.80,572 ಹಾಗೂ ಗರಿಷ್ಠ ರೂ.97,166 (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ ಎಡಿಷನ್, ಸ್ಪೆಷಲ್ ಎಡಿಷನ್ ಡಿಸ್ಕ್ ಬ್ರೇಕ್, ರೈಡ್ ಕನೆಕ್ಟ್ ಎಡಿಷನ್ & ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಎಂಬ 4 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಎಲ್ಲ ವಯೋಮಾನದವರಿಗೂ ಇಷ್ಟವಾಗುತ್ತದೆ. ಉತ್ತಮವಾದ ಬಾಡಿ ಪ್ಯಾನೆಲ್‌ನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಗ್ರೇಸ್ ವೈಟ್, ಪರ್ಲ್ ಶೈನಿ ಬೀಜ್ ಮತ್ತು ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Suzuki Access 125 September 2025 Sales Report

ನೂತನ 'ಸುಜುಕಿ ಆಕ್ಸೆಸ್ 125' ಕೊಂಚ ಮಟ್ಟಿಗೆ ದೊಡ್ಡ ಗಾತ್ರದಲ್ಲಿದೆ. 1,835 ಮಿ.ಮೀ ಉದ್ದ, 690 ಮಿ.ಮೀ ಅಗಲ ಹಾಗೂ 1,155 ಮಿ.ಮೀ ಎತ್ತರವಿದೆ. ಜೊತೆಗಿದು 160 ಮಿ.ಮೀ ಗ್ರೌಂಡ್ ಕ್ಲಿಯರೆನ್ ಮತ್ತು 1,260 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಸ್ಕೂಟರ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 124 ಸಿಸಿ ಸಿಂಗಲ್-ಸಿಲಿಂಡರ್, 4-ಸ್ಟ್ರೋಕ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 8.3 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.2 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಇದು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 45 ರಿಂದ 64 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 90 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.93 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಹೊಸ 'ಆಕ್ಸೆಸ್ 125' ಹತ್ತಾರು ಅತ್ಯಾಧುನಿಕವಾದ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ (4.2 ಇಂಚು), ಟರ್ನ್-ಬೈ-ಟರ್ನ್ ನ್ಯಾವಿಗೇಷನ್ & ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನ್ನು ಪಡೆದಿದೆ. ಸೀಟ್ ಎತ್ತರ 773 ಮಿ.ಮೀ ಇದೆ. ಹಾಗೆಯೇ 106 ಕೆಜಿ ತೂಕವನ್ನು ಹೊಂದಿದೆ.

ಈ ಸ್ಕೂಟರ್ ಸವಾರರಿಗೆ ಗರಿಷ್ಠ ಸುರಕ್ಷತೆಯನ್ನು ಒದಗಿಸುತ್ತದೆ. ಅದಕ್ಕಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮಾತ್ತು ಹಿಂಭಾಗ (ರೇರ್) ಸಿಂಗಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. 12 ಇಂಚಿನ ಅಲಾಯ್ ವೀಲ್‌ಗಳು & ಅತ್ಯುತ್ತಮವಾದ ಟೈರ್​ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Thursday, October 23, 2025, 13:24 [IST]
English summary
Suzuki access 125 september 2025 sales report
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+