Suzuki: ಬಹುನಿರೀಕ್ಷಿತ ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಶೀಘ್ರ ಬಿಡುಗಡೆ, ರೇಂಜ್ ಎಷ್ಟು.. ಬೆಲೆ ಇಷ್ಟೇನಾ?
ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಯಶಸ್ವಿಯಾಗಿ ಮಾರಾಟಗೊಳಿಸುವ 'ಆಕ್ಸೆಸ್ 125' ಗೇಮ್ ಚೇಂಜರ್ ಸ್ಕೂಟರ್ ಆಗಿ ಹೊರಹೊಮ್ಮಿದೆ. ಇದನ್ನು ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಆಕ್ಸೆಸ್ ಸ್ಕೂಟರ್‌ಗಿರುವ ಬೇಡಿಕೆಯನ್ನು ಕಂಪನಿಯು ಮನಗಂಡಿದ್ದು, ಇದೇ ಸ್ಕೂಟರ್‌ನ್ನು ಎಲೆಕ್ಟ್ರಿಕ್ ಅವತಾರದಲ್ಲಿ ಬಿಡುಗಡೆಗೊಳಿಸಲು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಈ ಸ್ಕೂಟರ್ ಅತಿ ಶೀಘ್ರದಲ್ಲೇ ಮಾರಾಟಕ್ಕೂ ಬರಲಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಕಳೆದ ಜನವರಿಯಲ್ಲಿ ಆದ್ದೂರಿಯಾಗಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ನೂತನ ಸುಜುಕಿ ಇ ಆಕ್ಸೆಸ್ (Suzuki e Access) ಸ್ಕೂಟರ್‌ನ್ನು ಪ್ರದರ್ಶನ ಮಾಡಲಾಗಿತ್ತು. ಇದು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಮನ ಸೆಳೆಯುತ್ತದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ.

ಹೊಚ್ಚ ಹೊಸ ಸುಜುಕಿ ಇ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್, 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಿಂಗಲ್ ಚಾರ್ಜ್‌ನಲ್ಲಿ 95 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 4.1 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) & 15 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಈ ಸುಜುಕಿ ಇ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಎಲ್‌ಇಡಿ ಲೈಟಿಂಗ್ ಸೆಟಪ್, ಟಿಎಫ್‌ಟಿ ಡಿಸ್‌ಪ್ಲೇ, ಸುಜುಕಿ ರೈಡ್ ಕನೆಕ್ಟ್ ಇ-ಆ್ಯಪ್, ನ್ಯಾವಿಗೇಷನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಇದರ ಬ್ಯಾಟರಿ ಪ್ಯಾಕ್, ಪೋರ್ಟಬಲ್ ಚಾರ್ಜರ್ ಉಪಯೋಗಿಸಿದಾಗ 6 ಗಂಟೆ 42 ನಿಮಿಷಗಳಲ್ಲಿ 0 ರಿಂದ 100% ಚಾರ್ಜ್ ಆಗುತ್ತದೆ.

ನೂತನ ಸುಜುಕಿ ಆಕ್ಸೆಸ್ ಇ-ಸ್ಕೂಟರ್ ಇಕೋ, ರೈಡ್ ಎ & ರೈಡ್ ಬಿ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಸವಾರರ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಹೊಸ ಸುಜುಕಿ ಇ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್, ದೇಶೀಯ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಈ ಸ್ಕೂಟರ್ ರೂ.1 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ದರದಲ್ಲೂ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಇದಕ್ಕೆ 'ಹೋಂಡಾ ಆಕ್ಟಿವಾ ಇ' ಪ್ರಬಲವಾದ ಪ್ರತಿಸ್ಪರ್ಧಿಯಾಗಲಿದೆ.
ನೂತನ ಸುಜುಕಿ ಇ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಶೀಘ್ರದಲ್ಲೇ ಬಿಡುಗಡೆಯಲಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಗ್ರಾಹಕರ ಖರೀದಿಗೆ ದೊರೆಯಬಹುದು ಎನ್ನಲಾಗಿದೆ. ಇದು ಹೆಚ್ಚು ಆಕರ್ಷಕವಾಗಿರುವ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಹಿನ್ನೆಲೆ, ಮುಂಬರುವ ದಿನಗಳಲ್ಲಿ ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಂಡರೂ ಅಚ್ಚರಿಯಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








