Honda Activa e ಪ್ರತಿಸ್ಪರ್ಧಿ: ಹೊಸ Suzuki e Access ಬಿಡುಗಡೆಗೆ ದಿನಗಣನೆ, ಲಕ್ಷುರಿ ಫೀಚರ್ಸ್.. ಬೆಲೆ ತುಂಬಾ ಅಗ್ಗ?

ಬಹುನಿರೀಕ್ಷಿತ ಹೊಚ್ಚ ಹೊಸ ಸುಜುಕಿ ಇ ಆಕ್ಸೆಸ್ (Suzuki e Access) ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಇದೇ ಸೆಪ್ಟೆಂಬರ್‌ನಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬನ್ನಿ, ನೂತನ ಇ-ಸ್ಕೂಟರ್‌ನ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹೊಸ 'ಸುಜುಕಿ ಇ ಆಕ್ಸೆಸ್' ಎಲೆಕ್ಟ್ರಿಕ್ ಸ್ಕೂಟರ್, ಅಗ್ಗದ ದರದಲ್ಲಿ ಖರೀದಿಗೆ ಲಭ್ಯವಾಗಬಹುದು ಎಂದು ಅಂದಾಜಿಸಲಾಗಿದೆ. ಇದು ಕನಿಷ್ಠ ರೂ.1 ಲಕ್ಷ ಹಾಗೂ ಗರಿಷ್ಠ ರೂ.1.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. ಇದಕ್ಕೆ ಹೋಂಡಾ ಆಕ್ಟಿವಾ ಇ (Honda Activa e) ಪ್ರಬಲವಾದ ಪ್ರತಿಸ್ಪರ್ಧಿಯಾಗಲಿದೆ.

Suzuki e Access Launch Soon Price Design Range And Features Details

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಇಂಡಿಕೇಟರ್‌ಗಳು ಹಾಗೂ ಟೇಲ್‌ಲೈಟ್‌ನ್ನು ಹೊಂದಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಗ್ರೇಸ್ ವೈಟ್, ಮೆಟಾಲಿಕ್ ಮ್ಯಾಟ್ ಫೈಬ್ರಾಯಿನ್ ಗ್ರೇ, ಪರ್ಲ್ ಜೇಡ್ ಗ್ರೀನ್ ಮತ್ತು ಮೆಟಾಲಿಕ್ ಮ್ಯಾಟ್ ಫೈಬ್ರಾಯಿನ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಎಲೆಕ್ಟ್ರಿಕ್ ಸ್ಕೂಟರ್ ವಿಶಾಲ ಗಾತ್ರದಲ್ಲಿದೆ. 1,860 ಎಂಎಂ ಉದ್ದ, 715 ಎಂಎಂ ಅಗಲ ಮತ್ತು 1,135 ಎಂಎಂ ಎತ್ತರ ಕೂಡ ಇದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,305 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 122 ಕೆಜಿ ತೂಕವಿದೆ.

Suzuki e Access Launch Soon Price Design Range And Features Details

ನೂತನ ಸುಜುಕಿ ಆಕ್ಸೆಸ್ ಇ-ಸ್ಕೂಟರ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 3.07 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.9 ಸೆಕೆಂಡುಗಳಲ್ಲಿ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 4.1 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 15 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಈ ಸ್ಕೂಟರ್‌ನ ಬ್ಯಾಟರಿ ಪ್ಯಾಕ್ ಸ್ಟ್ಯಾಂಡರ್ಡ್ ಚಾರ್ಜರ್ ಬಳಕೆಯಲ್ಲಿ 4 ಗಂಟೆ 30 ನಿಮಿಷಗಳಲ್ಲಿ ಶೇಕಡ 0 ರಿಂದ 80% ಚಾರ್ಜ್ ಆಗುತ್ತದೆ. ಡಿಸಿ ಫಾಸ್ಟ್ ಚಾರ್ಜರ್ ಉಪಯೋಗದಲ್ಲಿ ಇಷ್ಟೇ ಚಾರ್ಜ್ ಆಗಲು 1 ಗಂಟೆ 12 ನಿಮಿಷ ತೆಗೆದುಕೊಳ್ಳತ್ತದೆ.

ಹೊಸ ಸುಜುಕಿ ಇ ಆಕ್ಸೆಸ್ 4.2-ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ, ಸುಜುಕಿ ರೈಡ್ ಕನೆಕ್ಟ್ ಅಪ್ಲಿಕೇಶನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ರಿಮೋಟ್ ಸ್ಟಾರ್ಟ್ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಇಕೋ, ರೈಡ್ ಎ ಮತ್ತು ರೈಡ್ ಬಿ ಎಂಬ ಎರಡು ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ.

ಈ ಸ್ಕೂಟರ್ ಸವಾರರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಕಾಯಿಲ್ - ಸ್ಪ್ರಿಂಗ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಇದರೊಂದಿಗೆ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಪೆಟ್ರೋಲ್ ಚಾಲಿತ 'ಸುಜುಕಿ ಆಕ್ಸೆಸ್ 125' ವಿಶೇಷತೆಗಳೇನು:

ಇದು ರೂ.86,000 ರಿಂದ ರೂ.1.04 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 47 ಕಿ.ಮೀ ವರೆಗೂ ಮೈಲೇಜ್ ಕೊಡುತ್ತದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಶೈನಿ ಬೀಜ್ ಮತ್ತು ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಎಂಬ ಬಣ್ಣಗಳನ್ನು ಒಳಗೊಂಡಿದೆ. 4.2-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Sunday, August 31, 2025, 11:06 [IST]
English summary
Suzuki e access launch soon price design range and features details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+