ಅಣ್ತಮ್ಮಸ್.. Suzuki ಟೂ-ವೀಲರ್‌ಗಳಿಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಜನ!
ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ನಂಬಿಕಾರ್ಹ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದೆ. ಭಾರತದಲ್ಲಿ ವಿವಿಧ ಮೋಟಾರ್‌ಸೈಕಲ್ & ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿಗೆ ಮಾಡುತ್ತಿದ್ದಾರೆ. ಸದ್ಯ, ಈ ಆಗಸ್ಟ್ ತಿಂಗಳು ಕಂಪನಿಯ ದ್ವಿಚಕ್ರ ವಾಹನಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಸರಿ ಸುಮಾರು 1,13,936 ಯುನಿಟ್‌ಗಳನ್ನು ವಿತರಣೆ ಮಾಡಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 9% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 1,04,800 ಯುನಿಟ್‌ಗಳನ್ನು ಮಾರಲಾಗಿತ್ತು.
ಒಟ್ಟಾರೆ ಮಾರಾಟದಲ್ಲಿ ದೇಶೀಯವಾಗಿ ಇದೇ ಆಗಸ್ಟ್‌ನಲ್ಲಿ 91,629 ಯುನಿಟ್ ದ್ವಿಚಕ್ರ ವಾಹನಗಳನ್ನು ಮಾರಾಟ ಮಾಡಲಾಗಿದೆ. 2024ರಲ್ಲಿ 87,480 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಮೂಲಕ ಮಾರಾಟ ಸಂಖ್ಯೆಯು ಶೇಕಡ 5% ಪ್ರಗತಿಯಾಗಿದೆ. ವಿದೇಶಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ರಫ್ತು ಮಾಡಲಾಗಿದೆ. ಬರೋಬ್ಬರಿ 22,307 ಯುನಿಟ್‌ಗಳನ್ನು ರವಾನಿಸಲಾಗಿದ್ದು, ಶೇಕಡ 29% ಅಧಿವೃದ್ದಿಯಾಗಿದೆ.

'ಸುಜುಕಿ ಮೋಟಾರ್‌ಸೈಕಲ್' ದ್ವಿಚಕ್ರ ವಾಹನ ಮಾರಾಟದಲ್ಲಿ ಉತ್ತಮವಾದ ಪ್ರಗತಿ ಸಾಧಿಸಲು ಆಕ್ಸೆಸ್ 125, ಬರ್ಗ್‌ಮನ್ ಸ್ಟ್ರೀಟ್ 125, ಅವೆನಿಸ್ 125, ಜಿಕ್ಸರ್ ಹಾಗೂ ವಿ-ಸ್ಟ್ರೋಮ್ ಎಸ್‌ಎಕ್ಸ್ ಮಾಡೆಲ್‌ಗಳು ಪ್ರಮುಖ ಕಾರಣವಾಗಿವೆ. ಇವುಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದು, ಖರೀದಿದಾರರು ಸಹ ಮುಗಿಬಿದ್ದು ಕೊಂಡುಕೊಳುತ್ತಿದ್ದಾರೆ.
ಸುಜುಕಿ ಆಕ್ಸೆಸ್ 125 (Suzuki Access 125):
ಇದು ಜನಪ್ರಿಯ ಸ್ಕೂಟರ್ ಆಗಿದ್ದು, ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ಆರಾಮದಾಯಕವಾದ ಪ್ರಯಾಣವನ್ನು ಒದಗಿಸಬಲ್ಲದು. ಕನಿಷ್ಠ ರೂ.86,000 ಹಾಗೂ ಗರಿಷ್ಠ ರೂ.1.04 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್, ಪರ್ಲ್ ಶೈನಿ ಬೀಜ್ & ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಸ್ಕೂಟರ್ 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 47 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 4.2-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಸುಜುಕಿ ಬರ್ಗ್‌ಮನ್ ಸ್ಟ್ರೀಟ್ 125 (Suzuki Burgman Street 125):
ಇದೊಂದು ವಿಶ್ವಾಸಾರ್ಹ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ರೂ.99,984 ರಿಂದ ರೂ.1.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಟ್ ಬ್ಲಾಕ್, ಪರ್ಲ್ ಮಿರಾಜ್ ವೈಟ್ ಮತ್ತು ಮೆಟಾಲಿಕ್ ಮ್ಯಾಟ್ ಟೈಟಾನಿಯಂ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 124 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 48 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಸುಜುಕಿ ಅವೆನಿಸ್ 125 (Suzuki Avenis 125):
ಈ ಸ್ಕೂಟರ್ ರೂ.94,983 ರಿಂದ ರೂ.97,583 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. 124 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 55 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಸುಜುಕಿ ಜಿಕ್ಸರ್ (Suzuki Gixxer):
ಇದು ಬೈಕ್ ಆಗಿದೆ. ರೂ.1.41 ಲಕ್ಷದಿಂದ ರೂ.1.42 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 155 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 38 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಲಷ್ ಗ್ರೀನ್, ಪರ್ಲ್ ಗ್ಲೇಸಿಯರ್ ವೈಟ್ ಮತ್ತು ಗ್ಲಾಸ್ ಸ್ಪಾರ್ಕಲ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಸುಜುಕಿ ವಿ-ಸ್ಟ್ರೋಮ್ ಎಸ್‌ಎಕ್ಸ್ (Suzuki V-Strom SX):
ಈ ಮೋಟಾರ್‌ಸೈಕಲ್ ರೂ.2.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 249 ಸಿಸಿ 4-ವಾಲ್ವ್ ಆಯಿಲ್-ಕೂಲ್ಡ್ ಸಿಂಗಲ್-ಸಿಲಿಂಡರ್ ಎಂಜಿನ್ ಪಡೆದಿದ್ದು, 32 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಸೈಲೆಂಟ್ ಸ್ಟಾರ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








