ಬ್ರೋ.. ಸುಜುಕಿ ಟೂ-ವೀಲರ್‌ಗಳಿಗೆ ಎಲ್ಲಿಲ್ಲದ ಬೇಡಿಕೆ: ಬಿಸಿ-ಬಿಸಿ ಜಿಲೇಬಿಯಂತೆ ಮಾರಾಟ, ಆಕ್ಸೆಸ್ 125 ಇಸ್ ಕಿಂಗ್!

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ಪ್ರಮುಖ ದ್ವಿಚಕ್ರ ವಾಹನ (Two Wheeler) ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕ್ಸೆಸ್ 125, ಅವೆನಿಸ್ 125 ಮತ್ತು ಬರ್ಗ್‌ಮನ್ ಸ್ಟ್ರೀಟ್ 125 ಸೇರಿದಂತೆ ಹಲವು ಸ್ಕೂಟರ್ ಹಾಗೂ ಬೈಕ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಕಳೆದ ತಿಂಗಳು (ಜೂನ್-2025) ಸಹ ಕಂಪನಿಯ ದ್ವಿಚಕ್ರ ವಾಹನಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿವೆ. ಬರೋಬ್ಬರಿ 95,244 ಯುನಿಟ್‌ಗಳನ್ನು ಗ್ರಾಹಕರು ಖರೀದಿ ಮಾಡಿದ್ದಾರೆ. 2024ರ ಇದೇ ಅವಧಿಯಲ್ಲಿ 88,287 ಯುನಿಟ್‌ಗಳು ಮಾರಾಟ ಮಾಡಲಾಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 8% ಪ್ರಗತಿಯಾಗಿದೆ.

ಸುಜುಕಿ ಮೋಟಾರ್‌ಸೈಕಲ್‌ನ ಒಟ್ಟಾರೆ ಮಾರಾಟದ ಅಂಕಿಸಂಖ್ಯೆಯಲ್ಲಿ ಇದೇ ಜೂನ್‌ನಲ್ಲಿ ದೇಶೀಯವಾಗಿ 73,934 ಯುನಿಟ್‌ ದ್ವಿಚಕ್ರ ವಾಹನಗಳನ್ನು ಮಾರಲಾಗಿದೆ. ಅದೇ ರೀತಿಯಲ್ಲಿ ವಿದೇಶಗಳಿಗೆ 21,310 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಕಂಪನಿಯು ದ್ವಿಚಕ್ರ ವಾಹನ ಮಾರಾಟದಲ್ಲಿ ಈ ಮಟ್ಟಿಗೆ ಧನಾತ್ಮಕವಾಗಿರಲು 'ಆಕ್ಸೆಸ್ 125' ಸ್ಕೂಟರ್ ಬಹುಮುಖ್ಯ ಕಾರಣವಾಗಿದ್ದು, ಖರೀದಿದಾರರು ಮುಗಿಬಿದ್ದು ಕೊಂಡುಕೊಳುತ್ತಿದ್ದಾರೆ.

Suzuki Motorcycle India June 2025 Sales Details

ಸುಜುಕಿ ಆಕ್ಸೆಸ್ 125 (Suzuki Access 125) ವಿಶೇಷತೆಗಳೇನು:

ಇದೊಂದು ಜನಪ್ರಿಯ ಪ್ರಯಾಣಿಕ ಸ್ಕೂಟರ್ ಆಗಿದೆ. ಕನಿಷ್ಠ ರೂ.87,000 ಹಾಗೂ ಗರಿಷ್ಠ ರೂ.98,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ ಎಡಿಷನ್, ಸ್ಪೆಷಲ್ ಎಡಿಷನ್-ಡಿಸ್ಕ್ ಬ್ರೇಕ್, ರೈಡ್-ಕನೆಕ್ಟ್ ಎಡಿಷನ್ ಮತ್ತು ರೈಡ್-ಕನೆಕ್ಟ್ ಟಿಎಫ್‌ಟಿ ಎಡಿಷನ್ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ಸಿಗುತ್ತದೆ.

ಈ ಸ್ಕೂಟರ್ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್ & ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಪರ್ಲ್ ಶೈನಿ ಬೀಜ್, ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್ ಹಾಗೂ ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳನ್ನು ಒಳಗೊಂಡಿದೆ. 125 ಸಿಸಿ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 45 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

Suzuki Motorcycle India June 2025 Sales Details

ಇದು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ & ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 5 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

ಶೀಘ್ರ ಸುಜುಕಿ ಇ ಆಕ್ಸೆಸ್ (Suzuki e Access) ಬಿಡುಗಡೆ:

ಕೆಲವೇ ದಿನಗಳಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಯಾಗಲಿದೆ. ಅತಿ ಕಡಿಮೆ ಬೆಲೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಲು ಸಾಧ್ಯವಾಗಲಿದೆ. ಅದಕ್ಕೆ ತಕ್ಕಂತೆ ರೂ.1 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ನೂತನ ಎಲೆಕ್ಟ್ರಿಕ್ ಸ್ಕೂಟರ್ 3.07 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 95 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇಕೋ, ರೈಡ್ ಎ ಮತ್ತು ರೈಡ್ ಬಿ ಎಂಬ ರೈಡಿಂಗ್ ಮೋಡ್‌ಗಳನ್ನು ಪಡೆದಿದೆ.

ಈ ಸ್ಕೂಟರ್ ಟಿಎಫ್‌ಟಿ ಡಿಸ್‌ಪ್ಲೇ, ಸುಜುಕಿ ರೈಡ್ ಕನೆಕ್ಟ್ ಇ-ಆ್ಯಪ್, ನ್ಯಾವಿಗೇಷನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇದರಲ್ಲಿರುವ ಬ್ಯಾಟರಿಯು 6 ಗಂಟೆ 42 ನಿಮಿಷಗಳಲ್ಲಿ 0 ರಿಂದ 100% ಚಾರ್ಜ್ ಆಗಿ ಬಿಡುತ್ತದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Thursday, July 3, 2025, 11:00 [IST]
English summary
Suzuki motorcycle india june 2025 sales details
Read more on suzuki motorcycle india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+