Suzuki: ಸುಜುಕಿ ಟೂ-ವೀಲರ್‌ಗಳಿಗೆ ಐ ಲೈಕ್ ಇಟ್ ಎಂದ ಗ್ರಾಹಕರು.. ಆಕ್ಸೆಸ್ 125 ಸ್ಕೂಟರ್‌ನದ್ದೇ ಸಿಂಹಪಾಲು!
ಜಪಾನ್ ಮೂಲದ ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Suzuki Motorcycle India Pvt. Ltd), ಪ್ರಮುಖ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಅದಕ್ಕೆ ತಕ್ಕಂತೆ ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಕಂಪನಿಯು ಈ 'ಮೇ' ತಿಂಗಳ ಮಾರಾಟದ ಅಂಕಿಅಂಶಗಳ ವರದಿ ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿ ಸಾಧಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಕಳೆದ ತಿಂಗಳು (ಮೇ - 2025) ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ, ಒಟ್ಟು 1,28,896 ಯುನಿಟ್ ದ್ವಿಚಕ್ರ ವಾಹನಗಳನ್ನು (Two Wheeler) ಮಾರಾಟಗೊಳಿಸಿದೆ. 2024ರ 'ಮೇ'ನಲ್ಲಿ 1,11,512 ಯುನಿಟ್‌ಗಳನ್ನು ಮಾರಿತ್ತು. ಈ ಅಂಕಿ - ಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 16% ಬೆಳವಣಿಗೆಯಾಗಿದೆ.

ಸುಜುಕಿ ಕಂಪನಿಯು ಈ ಪರಿ ಪ್ರಮಾಣದಲ್ಲಿ ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಅಧಿವೃದ್ದಿ ಸಾಧಿಸಲು 'ಆಕ್ಸೆಸ್ 125' ಸ್ಕೂಟರ್ ಪ್ರಮುಖ ಕಾರಣವಾಗಿದೆ. ಇದು ಗೇಮ್ ಚೇಂಜರ್ ಆಗಿಯೂ ಹೊರಹೊಮ್ಮಿದೆ. ಬಹುದೊಡ್ಡ ಸಂಖ್ಯೆಯಲ್ಲಿ ಮಾರಾಟ ಕಂಡಿದ್ದು, ಸಿಂಹಪಾಲನ್ನು ಹೊಂದಿದೆ. ಜೊತೆಗೆ ಇತರೆ ಬೈಕ್ ಹಾಗೂ ಸ್ಕೂಟರ್‌ಗಳು ಕೂಡ ಉತ್ತಮ ಸಂಖ್ಯೆಯಲ್ಲಿಯೇ ಮಾರಾಟಗೊಂಡಿವೆ.
ಸುಜುಕಿ ಆಕ್ಸೆಸ್ 125 (Suzuki Access 125) ವಿಶೇಷತೆಗಳೇನು..
ಇದು ಅತಿ ಕಡಿಮೆ ಬೆಲೆಗೆ ದೊರೆಯುವ ಸ್ಕೂಟರ್ ಆಗಿದ್ದು, ಕನಿಷ್ಠ ರೂ.87,000 ಹಾಗೂ ಗರಿಷ್ಠ ರೂ.98,000 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 125 ಸಿಸಿ ಸಾಮರ್ಥ್ಯದ ಸಿಂಗಲ್ - ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಸ್ಕೂಟರ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು ಬರೋಬ್ಬರಿ 106 ಕೆಜಿ ತೂಕವಿದ್ದು, 5.6 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಶೀಘ್ರ ಸುಜುಕಿ ಇ ಆಕ್ಸೆಸ್ (Suzuki e Access) ಬಿಡುಗಡೆ.. ಮಾರಾಟ ಸಂಖ್ಯೆ ಅಧಿಕಗೊಳ್ಳುವ ನಿರೀಕ್ಷೆ..
ಬಹುತೇಕ ಇದೇ ತಿಂಗಳು ಈ ನೂತನ ಎಲೆಕ್ಟ್ರಿಕ್ ಸ್ಕೂಟರ್ ಅದ್ದೂರಿಯಾಗಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಕಂಪನಿಯು ಗುರುಗ್ರಾಮದಲ್ಲಿರುವ ಉತ್ಪಾದನಾ ಘಟಕದಲ್ಲಿ ಹೊಸ ಇ-ಸ್ಕೂಟರ್ ತಯಾರಿಕೆಯನ್ನು ಶುರು ಮಾಡಿದೆ. ಇದು ರೂ.1 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.
ಈ ಎಲೆಕ್ಟ್ರಿಕ್ ಸ್ಕೂಟರ್ 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 95 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಟಿಎಫ್‌ಟಿ ಡಿಸ್‌ಪ್ಲೇ, ಸುಜುಕಿ ರೈಡ್ ಕನೆಕ್ಟ್ ಇ - ಆ್ಯಪ್, ನ್ಯಾವಿಗೇಷನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








