ಬೆಲೆ ಮೊದಲೇ ಕಮ್ಮಿ: ಈ ಪ್ರಖ್ಯಾತ ಸ್ಕೂಟರ್‌ಗಳು ವಿಲೇಜ್ & ಟೌನ್‌ಗೂ ಸೈ.. 48 ಕಿ.ಮೀಗೂ ಅಧಿಕ ಮೈಲೇಜ್!
ದೇಶದಲ್ಲಿ ಬಹುಪಾಲು ಮಧ್ಯಮ ವರ್ಗ ಹಾಗೂ ಕೆಳ ಮಧ್ಯಮ ವರ್ಗದ ಜನರು ವಾಸಿಸುತ್ತಿದ್ದಾರೆ. ಅವರಿಗೆ ದಿನನಿತ್ಯದ ಬಳಕೆಗಾಗಿ ಟೂ-ವೀಲರ್‌ಗಳು ತುಂಬಾ ಅಗತ್ಯವಾಗಿವೆ. ವಿಶೇಷವಾಗಿ ಸ್ಕೂಟರ್ ಎಂಬುದು ಮಹಿಳೆ ಹಾಗೂ ಪುರುಷರಿಬ್ಬರಿಗೂ ಹೆಚ್ಚು ಸೂಕ್ತವಾಗಲಿದೆ. ಇದರ ಸಹಾಯದಿಂದ ಪ್ರತಿನಿತ್ಯ ಆಫೀಸ್‌ಗೆ ಹೋಗಬಹುದು.. ಮಕ್ಕಳನ್ನು ಸುಲಭವಾಗಿ ಶಾಲೆಗೆ ಬಿಟ್ಟು ಬರುವುದು ಹಾಗೂ ಮಾರ್ಕೆಟ್ ಅಥವಾ ಕಿರಾಣಿ ಅಂಗಡಿಗೆ ತೆರಳಿ ದಿನಸಿ ತರಲು ಸಾಧ್ಯವಾಗಲಿದೆ. ನೀವು ಹೊಸ ಸ್ಕೂಟರ್‌ವೊಂದನ್ನು ಖರೀದಿ ಮಾಡುವ ಆಲೋಚನೆಯಲ್ಲಿ ಇದ್ದೀರಾ.. ನಾವಿಲ್ಲಿ ಗರಿಷ್ಠ ಮೈಲೇಜ್‌ನೊಂದಿಗೆ ಅತಿ ಕಡಿಮೆ ಬೆಲೆಗೆ ಸಿಗುವ ಪ್ರಮುಖ 10 ಸ್ಕೂಟರ್‌ಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಹೀರೋ ಪ್ಲೆಷರ್ ಪ್ಲಸ್ (Hero Pleasure Plus) ಸ್ಕೂಟರ್ ಕುರಿತಂತೆ ಮಾತನಾಡೋಣ. ಇದು ಕನಿಷ್ಠ ರೂ.72,713 ಲಕ್ಷ ಹಾಗೂ ಗರಿಷ್ಠ ರೂ.84,843 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ಸ್ಕೂಟರ್ 110 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 8.1 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 50 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ನೂತನ ಹೀರೋ ಪ್ಲೆಷರ್ ಪ್ಲಸ್ ಸ್ಕೂಟರ್ ಪರ್ಲ್ ಸಿಲ್ವರ್ ವೈಟ್, ಬ್ಲೂಯಿಶ್ ಟೀಲ್, ಅಬ್ರಾಕ್ಸ್ ಆರೆಂಜ್ ಬ್ಲೂ ಹಾಗೂ ಮ್ಯಾಟ್ ವರ್ನಿಯರ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಹಾಗೂ ಎಲ್‌ಸಿಡಿ ಸ್ಕ್ರೀನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಸರಿ ಸುಮಾರು 104 ಕೆಜಿ ತೂಕವಿದ್ದು, 4.8 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.
ಸುಜುಕಿ ಅವೆನಿಸ್ 125 (Suzuki Avenis 125) ಬಗ್ಗೆ ಹೇಳುವುದಾದರೆ, ಈ ಸ್ಕೂಟರ್ ರೂ.95,581 ಲಕ್ಷದಿಂದ ರೂ.96,383 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 124.3 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 8. 7 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 55 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಈ ಸುಜುಕಿ ಅವೆನಿಸ್ 125 ಸ್ಕೂಟರ್ ಎಲ್ಇಡಿ ಹೆಡ್‌ಲೈಟ್, ಟೈಲ್‌ಲೈಟ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಫುಲ್ ಡಿಜಿಟಲ್ ಎಲ್‌ಸಿಡಿ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ನೂತನ ಸ್ಕೂಟರ್ ಬರೋಬ್ಬರಿ 106 ತೂಕವಿದ್ದು, 5.2 ಲೀಟರ್‌ನ ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್ ಕುರಿತಂತೆ ತಿಳಿಸುವುದಾದರೆ, ಇದು ಕನಿಷ್ಠ ರೂ.78,391 ಮತ್ತು ಗರಿಷ್ಠ ರೂ.92,366 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 113 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 48 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇಂಟಲಿಜೆಂಟ್ ಸ್ಟಾರ್ಟ್/ ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ನ್ಯಾವಿಗೇಷನ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಆಕ್ಟಿವಾ 110 (Honda Activa 110) ಕೂಡ ಜನಪ್ರಿಯ ಸ್ಕೂಟರ್ ಆಗಿದೆ. ಇದು ರೂ.81,625 ರಿಂದ ರೂ. 86,625 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದೆ. 59.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಸುಜುಕಿ ಆಕ್ಸೆಸ್ 125 (Suzuki Access 125) ಬಗ್ಗೆ ಮಾತನಾಡುವುದಾದರೆ, ಈ ಸ್ಕೂಟರ್ ಕನಿಷ್ಠ ರೂ.85,283 ಹಾಗೂ ಗರಿಷ್ಠ ರೂ.96,881 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 125 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 47.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ ಹಾಗೂ ಪರ್ಲ್ ಗ್ರೇಸ್ ವೈಟ್ ಬಣ್ಣಗಳೊಂದಿಗೂ ಸಿಗುತ್ತದೆ.

ಯಮಹಾ ಫ್ಯಾಸಿನೊ (Yamaha Fascino 125) 125 ಸ್ಕೂಟರ್ ಕುರಿತಂತೆ ಹೇಳುವುದಾದರೆ, ಇದು ರೂ.83,860 ರಿಂದ ರೂ.96,900 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 125 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 68.75 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದ್ದು, 5.2 ಲೀಟರ್‌ನ ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.
ಹೀರೋ ಜೂಮ್ 125 (Hero Xoom 125) ಬಗ್ಗೆ ತಿಳಿಸುವುದಾದರೆ, ಈ ಸ್ಕೂಟರ್ ರೂ.86,900 ರಿಂದ 92,900 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 124.6 ಸಿಸಿ ಏರ್ ಕೋಲ್ಡ್ ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 45 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಹೀರೋ ಜೂಮ್ 125 ಸ್ಕೂಟರ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಮ್ಯಾಟ್ ಸ್ಟಾರ್ಮ್ ಗ್ರೇ ಮತ್ತು ಮೆಟಾಲಿಕ್ ಟರ್ಬೊ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬೈಕ್‌ಗಳನ್ನು ಒಳಗೊಂಡಿದೆ. ಇದು 120 ಕೆಜಿ ತೂಕವಿದೆ.
ಟಿವಿಎಸ್ ಸ್ಕೂಟಿ ಜೆಸ್ಟ್ (TVS Scooty Zest) ಕುರಿತಂತೆ ಮಾತನಾಡುವುದಾದರೆ, ಈ ಸ್ಕೂಟರ್ ರೂ.68,249 ರಿಂದ ರೂ.71,052 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 7.81 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಹೋಂಡಾ ಡಿಯೋ 110 (Honda Dio 110) ಸಹ ಪ್ರಮುಖ ಸ್ಕೂಟರ್ ಆಗಿದೆ. ಇದು ರೂ.79,348 ರಿಂದ ರೂ.90,066 (ಎಕ್ಸ್-ಶೋರೂಂ) ಬೆಲೆಯಲ್ಲಿ ದೊರೆಯುತ್ತದೆ. 109.51 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 7.95 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.03 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಕಡೆಯದಾಗಿ ಹೀರೋ ಜೂಮ್ 110 (Hero Xoom 110) ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ಕನಿಷ್ಠ ರೂ.76,561 ಹಾಗೂ ಗರಿಷ್ಠ ರೂ.87,050 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 110.9 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 53.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications