50 Km ಮೈಲೇಜ್.. 70,000 ಬೆಲೆ, ಜನಪ್ರಿಯ 'ಟಿವಿಎಸ್ ಜೆಸ್ಟ್'ಗೆ 3 ಪರ್ಯಾಯ ಸ್ಕೂಟರ್‌ಗಳು.. ಬೆಲೆ ಎಷ್ಟು, ವಿಶೇಷತೆಗಳೇನು?

ಟಿವಿಎಸ್ ಜೆಸ್ಟ್ 110 (TVS Zest 110) ಪ್ರಮುಖ ಸ್ಕೂಟರ್ ಆಗಿದ್ದು, ಮಹಿಳೆಯರಿಗೆ ಹೆಚ್ಚು ಸೂಕ್ತವಾಗಿದೆ. ಇದು ರೂ.70,600 ರಿಂದ ರೂ.75,500 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಬೋಲ್ಡ್ ಬ್ಲ್ಯಾಕ್, ಮ್ಯಾಟ್ ಬ್ಲ್ಯಾಕ್, ಪರ್ಲ್ ವೈಟ್ ಹಾಗೂ ಟರ್ಕೋಯಿಸ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 109.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 45 ರಿಂದ 50 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌, ಲಗೇಜ್ ಹುಕ್‌, ಕಿಕ್ & ಸೆಲ್ಫ್ ಸ್ಟಾರ್ಟ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ನೀವು 'ಟಿವಿಎಸ್ ಜೆಸ್ಟ್ 110'ಗೆ ಬದಲಾಗಿ ಈ 3 ಜನಪ್ರಿಯ ಸ್ಕೂಟರ್‌ಗಳಾದ ಹೀರೋ ಪ್ಲೆಷರ್ ಪ್ಲಸ್, ಹೋಂಡಾ ಆಕ್ಟಿವಾ 110 ಹಾಗೂ ಹೀರೋ ಜೂಮ್ 110ಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

Top 3 Alternative Scooters For TVS Zest 110 Hero Pleasure Plus Honda Activa 110 And Hero Xoom 110

ಹೀರೋ ಪ್ಲೆಷರ್ ಪ್ಲಸ್ (Hero Pleasure Plus):

ಇದು ಪ್ರಖ್ಯಾತ ಸ್ಕೂಟರ್ ಆಗಿದ್ದು, 'ಟಿವಿಎಸ್ ಜೆಸ್ಟ್ 110'ಗೆ ಅತ್ಯುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.69,766 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಸ್ಪೋರ್ಟ್ ರೆಡ್, ಮ್ಯಾಟ್ ವರ್ನಿಯರ್ ಗ್ರೇ, ಪೋಲ್‌ಸ್ಟಾರ್ ಬ್ಲೂ, ಪರ್ಲ್ ಸಿಲ್ವರ್ ವೈಟ್, ಬ್ಲೂಯಿಷ್ ಟೀಲ್, ಮ್ಯಾಟ್ ಬ್ಲ್ಯಾಕ್, ಮ್ಯಾಟ್ ಮೆಟ್ ರೆಡ್, ಕಾಪರ್ ಬ್ರೌನ್, ಜ್ಯುಬಿಲೆಂಟ್ ಯೆಲ್ಲೋ ಹಾಗೂ ಮ್ಯಾಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಪ್ಲೆಷರ್ ಪ್ಲಸ್' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 110.9 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 50 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೆಲ್ಫ್-ಸ್ಟಾರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Top 3 Alternative Scooters For TVS Zest 110 Hero Pleasure Plus Honda Activa 110 And Hero Xoom 110

ಹೋಂಡಾ ಆಕ್ಟಿವಾ 110 (Honda Activa 110):

ಈ ಸ್ಕೂಟರ್‌ನ್ನು 'ಟಿವಿಎಸ್ ಜೆಸ್ಟ್ 110'ಗೆ ಬದಲಾಗಿ ಕೊಂಡುಕೊಳ್ಳಬಹುದಾಗಿದೆ. ರೂ. 74,619 ರಿಂದ ರೂ.87,944 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಸ್ಟೀಲ್ ಬ್ಲ್ಯಾಕ್ ಮೆಟಾಲಿಕ್, ಪರ್ಲ್ ಪ್ರೆಷಿಯಸ್ ವೈಟ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ, ಡೀಸೆಂಟ್ ಬ್ಲೂ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ ಹಾಗೂ ಫಾಲ್ಕನ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಹೊಸ 'ಆಕ್ಟಿವಾ' ಸ್ಕೂಟರ್ ಪವರ್‌ಟ್ರೇನ್‌ನ್ನು ಹೊಂದಿದೆ. 109.51 ಸಿಸಿ ಏರ್-ಕೋಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 47 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 4.2 ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್, ಹೋಂಡಾ ರೋಡ್‌ಸಿಂಕ್ ಫೋನ್ ಅಪ್ಲಿಕೇಶನ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ಹಿತದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Top 3 Alternative Scooters For TVS Zest 110 Hero Pleasure Plus Honda Activa 110 And Hero Xoom 110

ಹೀರೋ ಜೂಮ್ 110 (Hero Xoom 110):

ಇದನ್ನು ಕೂಡ 'ಟಿವಿಎಸ್ ಜೆಸ್ಟ್ 110'ಗೆ ಪರ್ಯಾಯವಾಗಿ ಮನೆಗೆ ತರಬಹುದಾಗಿದೆ. ರೂ.72,351 ರಿಂದ ರೂ.77,836 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಬ್ಲ್ಯಾಕ್, ಮ್ಯಾಟ್ ಅಬ್ರಾಕ್ಸ್ ಆರೆಂಜ್, ಪರ್ಲ್ ಸಿಲ್ವರ್ ವೈಟ್, ಸ್ಪೋರ್ಟ್ ರೆಡ್, ಮ್ಯಾಟ್ ಶ್ಯಾಡೋ ಗ್ರೇ ಮತ್ತು ಪೋಲ್‌ಸ್ಟಾರ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Top 3 Alternative Scooters For TVS Zest 110 Hero Pleasure Plus Honda Activa 110 And Hero Xoom 110

ನೂತನ 'ಜೂಮ್' 110.9 ಸಿಸಿ ಏರ್-ಕೋಲ್ಡ್, 4-ಸ್ಟ್ರೋಕ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 53 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬೂಟ್‌ಲೈಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Thursday, November 20, 2025, 5:29 [IST]
English summary
Top 3 alternative scooters for tvs zest 110 hero pleasure plus honda activa 110 and hero xoom 110
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+