48 ಕಿ.ಮೀವರೆಗೆ ಮೈಲೇಜ್: 1.09 ಲಕ್ಷದಿಂದ ಶುರು.. ಗಜ ಗಾತ್ರದ 3 ಜನಪ್ರಿಯ 150 ಸಿಸಿ ಸ್ಕೂಟರ್‌ಗಳಿವು!

ಭಾರತದಲ್ಲಿ ದ್ವಿಚಕ್ರ ವಾಹನಗಳಿಗೆ ವಿಪರೀತ ಬೇಡಿಕೆಯಿದೆ. ಅದರಲ್ಲೂ 110 ಹಾಗೂ 125 ಸಿಸಿ ಸ್ಕೂಟರ್‌ಗಳು ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಸದ್ಯ 150 ಸಿಸಿ ಸ್ಕೂಟರ್‌ಗಳ ಅಬ್ಬರ ಶುರುವಾಗಿದೆ. ಇವು ದೊಡ್ಡ ಗಾತ್ರದಲ್ಲಿದ್ದು, ಖರೀದಿದಾರರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ನೀವು ಹೊಚ್ಚ ಹೊಸ 150 ಸಿಸಿ ಸ್ಕೂಟರ್‌ವೊಂದನ್ನು ಮನೆಗೆ ತರಲು ಆಲೋಚಿಸಿದ್ದೀರಾ.. ಹಾಗದರೆ, ಟಿವಿಎಸ್ ಎನ್‌ಟಾರ್ಕ್ 150, ಹೀರೋ ಜೂಮ್ 160 ಹಾಗೂ ಯಮಹಾ ಏರೋಕ್ಸ್ 155ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಈ ಸ್ಕೂಟರ್‌ಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಿವಿಎಸ್ ಎನ್‌ಟಾರ್ಕ್ 150 (TVS Ntorq 150):

ಇದು ಜನಪ್ರಿಯ ಸ್ಕೂಟರ್ ಆಗಿದೆ. ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.1.09 ಲಕ್ಷದಿಂದ ರೂ.1.18 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಸ್ಟೆಲ್ತ್ ಸಿಲ್ವರ್, ರೇಸಿಂಗ್ ರೆಡ್, ಟರ್ಬೊ ಬ್ಲೂ ಹಾಗೂ ನೈಟ್ರೋ ಗ್ರೀನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1285 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Top 3 Best 150 CC Scooters In India TVS Ntorq 150 Hero Xoom 160 And Yamaha Aerox 155

ನೂತನ 'ಎನ್‌ಟಾರ್ಕ್ 150' ಸಾಕಷ್ಟು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 149.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 40 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 104 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಸ್ಕೂಟರ್ ಫುಲ್ ಟಿಎಫ್‌ಟಿ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಟ್ರಾಕ್ಷನ್ ಕಂಟ್ರೋಲ್‌ನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್‌ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

Top 3 Best 150 CC Scooters In India TVS Ntorq 150 Hero Xoom 160 And Yamaha Aerox 155

ಹೀರೋ ಜೂಮ್ 160 (Hero Xoom 160):

ಇದೊಂದು ಪ್ರಖ್ಯಾತ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ರೂ.1.37 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಕ್ಯಾಸ್ಟ್ ವೋಲ್ಕಾನಿಕ್ ಗ್ರೇ, ಕ್ಯಾಸ್ಟ್ ಪರ್ಲ್ ಸಮ್ಮಿಟ್ ವೈಟ್ ಮತ್ತು ಕ್ಯಾಸ್ಟ್ ಕ್ಯಾನ್ಯನ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,348 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಜೂಮ್ 160' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 156 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 40 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್‌, ಸೈಲೆಂಟ್ ಸ್ಟಾರ್ಟರ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Top 3 Best 150 CC Scooters In India TVS Ntorq 150 Hero Xoom 160 And Yamaha Aerox 155

ಯಮಹಾ ಏರೋಕ್ಸ್ 155 (Yamaha Aerox 155):

ಇದು ವಿಶ್ವಾಸಾರ್ಹ ಸ್ಕೂಟರ್ ಆಗಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ದೊರೆಯುತ್ತದೆ. ರೂ.1.38 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಮೆಟಾಲಿಕ್ ಬ್ಲ್ಯಾಕ್, ಗ್ರೇ ವರ್ಮಿಲಿಯನ್, ಐಸ್ ಫ್ಲೂ ವರ್ಮಿಲಿಯನ್, ರೇಸಿಂಗ್ ಬ್ಲೂ ಹಾಗೂ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 145 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1,350 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಏರೋಕ್ಸ್ 155' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 155 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 48.62 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಮಾರ್ಟ್ ಕೀ ಸಿಸ್ಟಮ್ ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Tuesday, December 9, 2025, 17:18 [IST]
English summary
Top 3 best 150 cc scooters in india tvs ntorq 150 hero xoom 160 and yamaha aerox 155
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+