ಸ್ಪ್ಲೆಂಡರ್, ಶೈನ್ & ಹೆಚ್ಎಫ್ ಡಿಲಕ್ಸ್ ಬೈಕ್ ಖರೀದಿಗೆ ನೂಕುನುಗ್ಗಲು.. ಬಿಸಿ 'ತಟ್ಟೆ ಇಡ್ಲಿ'ಯಂತೆ ಸೇಲ್ಸ್!
ಭಾರತವು ವಿಶ್ವದಲ್ಲೇ ಅತಿದೊಡ್ಡ ದ್ವಿಚಕ್ರ ವಾಹನ (Two Wheeler) ಮಾರುಕಟ್ಟೆಯನ್ನು ಹೊಂದಿದೆ. ಇದೇ ಮಾರ್ಚ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ಬೈಕ್‌ಗಳು ಮಾರಾಟಗೊಂಡಿವೆ. ಅದರಲ್ಲೂ ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus), ಹೋಂಡಾ ಶೈನ್ 125 (Honda Shine 125) ಹಾಗೂ ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe) ಮೋಟಾರ್‌ಸೈಕಲ್‌ಗಳನ್ನು ಗ್ರಾಹಕರು ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಕಳೆದ ತಿಂಗಳು (ಮಾರ್ಚ್-2025) ಹೀರೋ ಮೋಟೊಕಾರ್ಪ್, ಸರಿ ಸುಮಾರು 3,01,584 ಯುನಿಟ್ 'ಸ್ಪ್ಲೆಂಡರ್ ಪ್ಲಸ್' ಬೈಕ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. ಈ ಮೂಲಕ ಅತಿ ಸಂಖ್ಯೆಯಲ್ಲಿ ಮಾರಾಟಗೊಂಡ ಮೋಟಾರ್‌ಸೈಕಲ್‌ಗಳ ಪಟ್ಟಿಯಲ್ಲಿ ಸ್ಪ್ಲೆಂಡರ್ ಅಗ್ರ ಸ್ಥಾನದಲ್ಲಿದೆ. 2024ರ ಇದೇ ಅವಧಿಯಲ್ಲಿ 2,72,194 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಆ ಅಂಕಿ-ಸಂಖ್ಯೆಗೆ ಹೋಲಿಸಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 10.79% ಬೆಳವಣಿಗೆಯಾಗಿದೆ.

ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಹೊಚ್ಚ ಹೊಸ 'ಹೀರೋ ಸ್ಪ್ಲೆಂಡರ್ ಪ್ಲಸ್' ಮೋಟಾರ್‌ಸೈಕಲ್, ರೂ.79,000 ರಿಂದ ರೂ.85,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಎರಡನೇ ಸ್ಥಾನದಲ್ಲಿ ಹೋಂಡಾ ಶೈನ್ 125 ಬೈಕ್ ಇದೆ. ಹೋದ ತಿಂಗಳು 1,35,383 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2024ರ ಮಾರ್ಚ್ ತಿಂಗಳಲ್ಲಿ ಮಾರಲ್ಪಟ್ಟ 1,20,080 ಯುನಿಟ್ ಶೈನ್ 125 ಮೋಟಾರ್‌ಸೈಕಲ್‌ಗಳಿಗೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ 12.77% ಪ್ರಗತಿಯಾಗಿದೆ.

ನೂತನ ಹೋಂಡಾ ಶೈನ್ 125 ಬೈಕ್ ಅತ್ಯಂತ ಕೈಗೆಟುಳುವ ಬೆಲೆಯಲ್ಲಿ ಸಿಗಲಿದ್ದು, ರೂ.84,500 ರಿಂದ ರೂ.91,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.94 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್-ಇನ್ಸ್ಟ್ರುಮೆಂಟ್ ಕನ್ಸೋಲ್, ಐಡಲ್ ಸ್ಟಾರ್ಟ್-ಸ್ಟಾಪ್ ಸಿಸ್ಟಮ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಹೀರೋ ಹೆಚ್ಎಫ್ ಡಿಲಕ್ಸ್ ಬೈಕ್ ಮೂರನೇ ಸ್ಥಾನದಲ್ಲಿದೆ. ಈ ಮಾರ್ಚ್‌ನಲ್ಲಿ 91,821 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 83,947 ಯುನಿಟ್ ಹೆಚ್ಎಫ್ ಡಿಲಕ್ಸ್ ಮೋಟಾರ್‌ಸೈಕಲ್‌ಗಳನ್ನು ಮಾರಲಾಗಿದೆ. ಅದಕ್ಕೆ ಹೋಲಿಸಿದರೆ, ಮಾರಾಟ ಪ್ರಮಾಣ, ವರ್ಷದಿಂದ ವರ್ಷಕ್ಕೆ (YoY) ಶೇಕಡ 9.37% ಬೆಳವಣಿಗೆಯಾಗಿದೆ.

ಹೊಸ ಹೀರೋ ಹೆಚ್ಎಫ್ ಡಿಲಕ್ಸ್ ಬೈಕ್, ಸ್ಪ್ಲೆಂಡರ್ ಪ್ಲಸ್ ರೀತಿಯಲ್ಲಿಯೇ ಕೈಗೆಟುಕುವ ದರದಲ್ಲಿ ಲಭ್ಯವಾಗುತ್ತದೆ. ರೂ.62,500 ರಿಂದ 70,500 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದು 97.2 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications