1 ಲೀಟರ್ ಪೆಟ್ರೋಲ್‌ಗೆ 90 ಕಿ.ಮೀಗೂ ಅಧಿಕ ಮೈಲೇಜ್! ಅಗ್ಗದ ಬಡವರ ಗಾಡಿಗಳಿವು!

Top 3 Mileage Bikes: ದಿನನಿತ್ಯದ ಬಳಕೆಗಾಗಿ ಬಡ ಹಾಗೂ ಮಧ್ಯಮ ವರ್ಗದ ಜನರು ಹೊಚ್ಚ ಹೊಸ ಬೈಕ್‌ವೊಂದನ್ನು ಕೊಂಡುಕೊಳ್ಳಬೇಕು ಎಂಬ ಆಸೆಯನ್ನು ಹೊಂದಿರುತ್ತಾರೆ. ಆದರೆ, ಯಾವ ಮೋಟಾರ್‌ಸೈಕಲ್ ಹೆಚ್ಚು ಮೈಲೇಜ್ ನೀಡುತ್ತದೆ.. ಜೊತೆಗೆ ಸುಧೀರ್ಘ ಬಾಳಿಕೆ ಬರುತ್ತದೆಯೇ ಎಂಬ ಹಲವು ಗೊಂದಲಗಳಿರುತ್ತವೆ. ಅಂತಹವರಿಗೆ ಬಜಾಜ್ ಪ್ಲಾಟಿನಾ 100, ಟಿವಿಎಸ್ ರೇಡಿಯನ್ ಹಾಗೂ ಹೀರೋ ಎಚ್ಎಫ್ 100 ಬೈಕ್‌ಗಳು ಉತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಈ ಮೋಟಾರ್‌ಸೈಕಲ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಬಜಾಜ್ ಪ್ಲಾಟಿನಾ 100 (Bajaj Platina 100):

ಇದು ಬಲು ಜನಪ್ರಿಯ ಬೈಕ್ ಆಗಿದ್ದು, ಎಲ್ಲಾ ವರ್ಗದ ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುತ್ತದೆ. ನಗರ ಹಾಗೂ ಗ್ರಾಮೀಣ ಭಾಗಕ್ಕೆ ತುಂಬಾನೇ ಸೂಕ್ತವಾಗಿದ್ದು, ನಿರ್ವಹಣಾ ವೆಚ್ಚವು ಕಡಿಮೆಯಿದೆ. ಅದಕ್ಕೆ ತಕ್ಕಂತೆ ಕಡಿಮೆ ಬೆಲೆಯಲ್ಲಿಯೂ ಲಭ್ಯವಿದ್ದು, ರೂ.70,611 ದರವನ್ನು ಹೊಂದಿದೆ. ಬ್ಲ್ಯಾಕ್-ಬ್ಲೂ, ಬ್ಲ್ಯಾಕ್-ಗೋಲ್ಡ್, ಬ್ಲ್ಯಾಕ್ -ಸಿಲ್ವರ್ ಹಾಗೂ ಬ್ಲ್ಯಾಕ್-ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Top 3 Mileage King Bikes In India 2025 Bajaj Platina 100 Tvs Radeon And Hero HF 100

ಈ ಮೋಟಾರ್‌ಸೈಕಲ್ 102 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 7500 ಆರ್‌ಪಿಎಂನಲ್ಲಿ 7.9 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5500 ಆರ್‌ಪಿಎಂನಲ್ಲಿ 8.34 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 75 ರಿಂದ 90 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಪ್ಲಾಟಿನಾ 100 ಬೈಕ್ 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಇದರೊಂದಿಗೆ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Top 3 Mileage King Bikes In India 2025 Bajaj Platina 100 Tvs Radeon And Hero HF 100

ಟಿವಿಎಸ್ ರೇಡಿಯನ್ (Tvs Radeon):

ಇದನ್ನು ಕೂಡ ವಿಶ್ವಾಸಾರ್ಹ ಮೋಟಾರ್‌ಸೈಕಲ್ ಎಂದು ಪರಿಗಣಿಸಬಹುದಾಗಿದ್ದು, ಹಲವು ವರ್ಷಗಳ ಕಾಲ ಸುಲಭವಾಗಿ ಬಳಕೆ ಮಾಡಬಹುದು. ಈ ಹೊಸ ಬ್ಯಾಕ್ ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ಕನಿಷ್ಠ ರೂ.59,880 ಹಾಗೂ ಗರಿಷ್ಠ ರೂ.84,534 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಆಲ್ ಬ್ಲ್ಯಾಕ್, ಟೈಟಾನಿಯಂ ಗ್ರೇ ಹಾಗೂ ರಾಯಲ್ ಪರ್ಪಲ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ.

ಹೊಸ ರೇಡಿಯನ್ 109.7 ಸಿಸಿ ಪೆಟ್ರೋಲ್ ಎಂಜಿನ್‌ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 73 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಎಲೆಕ್ಟ್ರಿಕ್ ಸೆಲ್ಫ್ ಸ್ಟಾರ್ಟ್ ಹಾಗೂ ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಟ್ವಿನ್-ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Top 3 Mileage King Bikes In India 2025 Bajaj Platina 100 Tvs Radeon And Hero HF 100

ಹೀರೋ ಎಚ್ಎಫ್ 100 (Hero HF 100):

ಇದು ಸಹ ಪ್ರಮುಖ ಬೈಕ್ ಆಗಿದ್ದು, ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ರೂ.60,118 (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಳ್ಳಬಹುದು. ಸರಳವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರನ್ನು ಸೆಳೆಯುವಂತಿದೆ. ರೆಡ್-ಬ್ಲ್ಯಾಕ್ ಮತ್ತು ಬ್ಲ್ಯೂ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಮೋಟಾರ್‌ಸೈಕಲ್ 97.2 ಸಿಸಿ ಪೆಟ್ರೋಲ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಕಿಕ್ ಸ್ಟಾರ್ಟರ್ ಹಾಗೂ ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಟೂ-ಸ್ಟೆಪ್ ಅಡ್ಜಸ್ಟಬಲ್ ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Article Published On: Friday, August 29, 2025, 17:15 [IST]
English summary
Top 3 mileage king bikes in india 2025 bajaj platina 100 tvs radeon and hero hf 100
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+