ಪ್ರತಿನಿತ್ಯದ ಬಳಕೆಗೆ ಈ ಸ್ಕೂಟರ್‌ಗಳು ಬೆಸ್ಟ್.. 57.27 ಕಿ.ಮೀ ಮೈಲೇಜ್, ಅತಿ ಕಡಿಮೆ ಬೆಲೆ!
ಆಫೀಸ್‌ಗೆ ಹೋಗಲು.. ಮಕ್ಕಳನ್ನು ಶಾಲೆಗೆ ಬಿಡಲು ಸೇರಿದಂತೆ ದಿನನಿತ್ಯದ ಕೆಲಸಗಳಿಗೆ ದ್ವಿಚಕ್ರ ವಾಹನಗಳು ಹೆಚ್ಚು ಸೂಕ್ತವಾಗಲಿವೆ. ಅದರಲ್ಲೂ ಸ್ಕೂಟರ್‌ಗಳು ಮಹಿಳೆಯರು ಹಾಗೂ ಪುರುಷರು ಮಾತ್ರವಲ್ಲದೆ ಎಲ್ಲ ವಯೋಮಾನದವರಿಗೂ ಮೆಚ್ಚಿನ ವಾಹನವಾಗಿದೆ. ನೀವು ದಿನನಿತ್ಯದ ಬಳಕೆಗೆ ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಟಿವಿಎಸ್ ಎನ್‌ಟಾರ್ಕ್ 125, ಸುಜುಕಿ ಆಕ್ಸೆಸ್ 125, ಟಿವಿಎಸ್ ಜುಪಿಟರ್ 125, ಹೋಂಡಾ ಆಕ್ಟಿವಾ 125 ಹಾಗೂ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ ಮಾಡೆಲ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ.
ಟಿವಿಎಸ್ ಎನ್‌ಟಾರ್ಕ್ 125 (TVS NTORQ 125): ಇದು ಜನಪ್ರಿಯ ಸ್ಕೂಟರ್ ಆಗಿದ್ದು, ರೂ.93,126 ರಿಂದ ರೂ.1.09 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 9.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.6 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಟಿವಿಎಸ್ ಎನ್‌ಟಾರ್ಕ್ 125 ಸ್ಕೂಟರ್ ಅಮೇಜಿಂಗ್ ರೆಡ್, ಲೈಟ್ನಿಂಗ್ ಗ್ರೇ, ಕಾಂಬ್ಯಾಟ್ ಬ್ಲೂ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಟಿಎಫ್‌ಟಿ ಡಿಸ್ಪ್ಲೇ, ಟರ್ನ್-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಸುಜುಕಿ ಆಕ್ಸೆಸ್ 125 (Suzuki Access 125): ಈ ಸ್ಕೂಟರ್ ರೂ.81,700 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 125 ಸಿಸಿ ಸಿಂಗಲ್- ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 45 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ ಎಂದು ಹೇಳಲಾಗಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.

ಟಿವಿಎಸ್ ಜುಪಿಟರ್ 125 (TVS Jupiter 125): ಇದೊಂದು ಪ್ರಮುಖ ಸ್ಕೂಟರ್ ಆಗಿದೆ. ರೂ.89,396 ರಿಂದ ರೂ.99,805 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 57.27 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಪ್ರಯಾಣಿಕರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೋಂಡಾ ಆಕ್ಟಿವಾ 125 (Honda Activa 125): ಈ ಸ್ಕೂಟರ್ ರೂ.98,969 ರಿಂದ ರೂ.1.03 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 123.92 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 47 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುಜುಕಿ ಬರ್ಗ್‌ಮನ್ ಸ್ಟ್ರೀಟ್ (Suzuki Burgman Street): ಇದು ರೂ.97,582 ರಿಂದ ರೂ.1.18 ಲಕ್ಷ ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ. 124 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 48 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications