2025ರಲ್ಲಿ ಮಾರುಕಟ್ಟೆ ಶೇಕ್ ಮಾಡಿದ 5 ಪ್ರಮುಖ ಬೈಕ್‌ಗಳಿವು.. ಬೆಲೆ ಇಷ್ಟೇನಾ, ಹೇಗಿವೆ?
ಭಾರತವು ಅತಿದೊಡ್ಡ ವಾಹನ ಮಾರುಕಟ್ಟೆಯನ್ನು ಹೊಂದಿದೆ. ಈ 2025 ದ್ವಿಚಕ್ರ ವಾಹನ ತಯಾರಕ ಕಂಪನಿಗಳಿಗೆ ಮಹತ್ವದ ವರ್ಷವಿದ್ದು, ಹಲವು ಬೈಕ್‌ಗಳು ಅದ್ದೂರಿಯಾಗಿ ಬಿಡುಗಡೆಗೊಂಡವು. ವಿಶೇಷವಾಗಿ ಹೋಂಡಾ ಶೈನ್ 100 ಡಿಎಕ್ಸ್, ಬಜಾಜ್ ಪಲ್ಸರ್ 150, ಹೋಂಡಾ ಸಿಸಿ125 ಹಾರ್ನೆಟ್, ಯಮಹಾ ಎಕ್ಸ್ಎಸ್ಆರ್ 155 ಹಾಗೂ ಹೀರೋ ಗ್ಲಾಮರ್ ಎಕ್ಸ್ 125ಗಳನ್ನು ಮಾರಾಟಕ್ಕೆ ತರಲಾಗಿತು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):
ಇದು ಜನಪ್ರಿಯ ಮೋಟಾರ್‌ಸೈಕಲ್ ಆಗಿ ಹೊರಹೊಮ್ಮಿದೆ. ಅಗ್ಗದ ದರದಲ್ಲೂ ಲಭ್ಯವಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ರೂ.70,505 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್ ಹಾಗೂ ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಶೈನ್ 100 ಡಿಎಕ್ಸ್' ದರಕ್ಕೆ ಅನುಗುಣವಾಗಿ ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 85 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಬಜಾಜ್ ಪಲ್ಸರ್ 150 (Bajaj Pulsar 150):
ಈ ಬೈಕ್ ನವೀಕರಿಸಿದ ರೂಪದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅದಕ್ಕೆ ತಕ್ಕಂತೆ ರೂ.1.08 ಲಕ್ಷದಿಂದ ರೂ.1.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಸ್ಪಾರ್ಕ್ಲಿ ಬ್ಲ್ಯಾಕ್ ರೆಡ್, ಸ್ಪಾರ್ಕ್ಲಿ ಬ್ಲ್ಯಾಕ್ ಬ್ಲೂ ಮತ್ತು ಸ್ಪಾರ್ಕ್ಲಿ ಬ್ಲ್ಯಾಕ್ ಸಿಲ್ವರ್ ಎಂಬ ಬಣ್ಣದೊಂದಿಗೂ ಲಭ್ಯವಿದೆ.

ಹೊಸ 'ಪಲ್ಸರ್ 150' ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 149.5-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 115 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೋಂಡಾ ಸಿಬಿ125 ಹಾರ್ನೆಟ್ (Honda CB125 Hornet):
ಇದು ಪ್ರೀಮಿಯಂ ಲುಕ್‌ನ್ನು ಒಳಗೊಂಡಿದ್ದು, ಯುವ ಗ್ರಾಹಕರ ಕಣ್ಮನ ಸೆಳೆಯುವಂತಿದೆ. ರೂ.1.03 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.94-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 48 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 4.2-ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಯಮಹಾ ಎಕ್ಸ್ಎಸ್ಆರ್ 155 (Yamaha XSR 155)
ಈ ಬೈಕ್‌ನ್ನು ಯುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಸಿದ್ದಪಡಿಸಲಾಗಿದ್ದು, ರೂ.1.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 155-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 48.58 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸ್ಮಾರ್ಟ್‌ಫೋನ್ ಬ್ಲ್ಯೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಹೀರೋ ಗ್ಲಾಮರ್ ಎಕ್ಸ್ 125 (Hero Glamour X 125):
ಇದು ಮಧ್ಯಮ ವರ್ಗದ ಗ್ರಾಹಕರಿಗೆ ಹೇಳಿ ಮಾಡಿಸಿದ ರೀತಿಯಲ್ಲಿದೆ. ರೂ.82,967 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5-ಇಂಚಿನ ಎಲ್‌ಸಿಡಿ ಕನ್ಸೋಲ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








