Honda Bikes: ದುಡಿಯುವ ಜನರು ತೆಗೆದುಕೊಳ್ಳಬಹುದಾದ 5 ಹೋಂಡಾ ಬೈಕ್‌ಗಳಿವು.. ಬೆಲೆ ಎಷ್ಟು, ಹೇಗಿವೆ?
ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ (Honda Motorcycle & Scooter India) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯವಾಗಿ ವಿವಿಧ ಬೈಕ್‌ಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ನೀವು ದುಡಿಯುವ ವರ್ಗದವರಾಗಿದ್ದು, ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ ಹೋಂಡಾ ಶೈನ್ 100, ಹೋಂಡಾ ಶೈನ್ 125, ಹೋಂಡಾ ಶೈನ್ 100 ಡಿಎಕ್ಸ್, ಹೋಂಡಾ ಎಸ್‌ಪಿ 125 ಹಾಗೂ ಹೋಂಡಾ ಯುನಿಕಾರ್ನ್ ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹೋಂಡಾ ಶೈನ್ 100 (Honda Shine 100):
ಇದು ಎಂಟ್ರಿ-ಲೆವೆಲ್ ಬೈಕ್ ಆಗಿದೆ. ಅತಿ ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.65,561 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಆರೆಂಜ್ ವಿತ್ ಬ್ಲ್ಯಾಕ್, ಗ್ರೀನ್ ವಿತ್ ಬ್ಲ್ಯಾಕ್, ಗ್ರೇ ವಿತ್ ಬ್ಲ್ಯಾಕ್, ಬ್ಲ್ಯೂ ವಿತ್ ಬ್ಲ್ಯಾಕ್ ಮತ್ತು ರೆಡ್ ವಿತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 168 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,245 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಶೈನ್ 100' ದರಕ್ಕೆ ಅನುಗುಣವಾಗಿ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಸೆನ್ಸರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಶೈನ್ 125 (Honda Shine 125):
ಈ ಮೋಟಾರ್‌ಸೈಕಲ್‌ನ್ನು ಗ್ರಾಹಕರು ಇಷ್ಟಪಟ್ಟಿದ್ದಾರೆ. ರೂ.80,542 ರಿಂದ ರೂ.84,902 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕ ವಿನ್ಯಾಸವನ್ನು ಪಡೆದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ರೆಬೆಲ್ ರೆಡ್ ಮೆಟಾಲಿಕ್, ಜೀನಿ ಗ್ರೇ ಮೆಟಾಲಿಕ್, ಪರ್ಲ್ ಸೈರನ್ ಬ್ಲೂ ಹಾಗೂ ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಬಣ್ಣಗಳೊಂದಿಗೂ ಲಭ್ಯವಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಶೈನ್ 125' ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ತನ್ನದಾಗಿಸಿಕೊಂಡಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 50 ರಿಂದ 60 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಲೆಂಟ್ ಸ್ಟಾರ್ಟ್ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):
ಇದನ್ನು ಯುವ ಗ್ರಾಹಕರಿಗಾಗಿ ಸಿದ್ದಪಡಿಸಲಾಗಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.70,505 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 98.98-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 65 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸೈಲೆಂಟ್ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಎಸ್‌ಪಿ 125 (Honda SP 125):
ಈ ಬೈಕ್‌ನ್ನು ಖರೀದಿದಾರರು ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ರೂ.87,653 ಮತ್ತು ರೂ.92,571 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.94-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 60 ರಿಂದ 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಫಂಕ್ಷನ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡ್ರಮ್ ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೋಂಡಾ ಯುನಿಕಾರ್ನ್ (Honda Unicorn):
ಇದು ಪ್ರೀಮಿಯಂ ಬೈಕ್ ಆಗಿ ಹೊರಹೊಮ್ಮಿದೆ. ರೂ.1.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 162.71-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 50 ರಿಂದ 60 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








