ಜೆನ್‌ಜಿಗಳು ಖರೀದಿಸಬಹುದಾದ 5 ಜನಪ್ರಿಯ ಬೈಕ್‌ಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?
ಪ್ರಸ್ತುತ ಜೆನ್‌ಜಿ (Gen Z) ಯುವ ಪೀಳಿಗೆಯಾಗಿದೆ. ಅವರಿಗೆ ಮೋಟಾರ್‌ಸೈಕಲ್‌ಗಳ ಮೇಲೆ ವಿಶೇಷ ಪ್ರೀತಿಯಿದೆ. ನೀವು ಜೆನ್‌ಜಿ ಯುವಕರಾಗಿದ್ದು, ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ರಾಯಲ್ ಎನ್‌ಫೀಲ್ಡ್ ಹಂಟರ್ 350, ಬಜಾಜ್ ಪಲ್ಸರ್ 150, ಕೆಟಿಎಂ 200 ಡ್ಯೂಕ್, ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಹಾಗೂ ಹೀರೋ ಎಕ್ಸ್‌ಟ್ರೀಮ್ 125ಆರ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಇಲ್ಲಿ ಈ ಮೋಟಾರ್‌ಸೈಕಲ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350):
ಇದು ಜನಪ್ರಿಯ ಬೈಕ್ ಆಗಿದ್ದು, ಜೆನ್‌ಜಿಗಳು ಕೂಡ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ ರೂ.1.37 ಲಕ್ಷದಿಂದ ರೂ.1.66 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 349-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 20.2 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 36.2 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

ನೂತನ 'ಹಂಟರ್ 350' ಮೋಟಾರ್‌ಸೈಕಲ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಫ್ಯಾಕ್ಟರಿ ಬ್ಲ್ಯಾಕ್, ರಿಯೊ ವೈಟ್, ಡ್ಯಾಪರ್ ಗ್ರೇ, ಟೋಕಿಯೊ ಬ್ಲ್ಯಾಕ್, ಲಂಡನ್ ರೆಡ್, ರೆಬೆಲ್ ಬ್ಲೂ, ಗ್ರ್ಯಾಫೈಟ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಸುರಕ್ಷತೆಗಾಗಿ ಡಿಜಿಟಲ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಟೈಪ್-ಸಿ ಯುಎಸ್‌ಬಿ ಫಾಸ್ಟ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಬಜಾಜ್ ಪಲ್ಸರ್ 150 (Bajaj Pulsar 150):
ಈ ಬೈಕ್ ರೂ.1.05 ಲಕ್ಷದಿಂದ ರೂ.1.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 149.5 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 14 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 13.25 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರ ಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 47.5 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

ಹೊಸ 'ಪಲ್ಸರ್ 150' ಮೋಟಾರ್‌ಸೈಕಲ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸ್ಪಾರ್ಕಲ್ ಬ್ಲ್ಯಾಕ್ ರೆಡ್, ಸ್ಪಾರ್ಕಲ್ ಬ್ಲ್ಯಾಕ್ ಸಿಲ್ವರ್, ಸ್ಯಾಫೈರ್ ಬ್ಲ್ಯಾಕ್ ಬ್ಲೂ ಹಾಗೂ ಸ್ಪಾರ್ಕಲ್ ಬ್ಲ್ಯಾಕ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಕೆಟಿಎಂ 200 ಡ್ಯೂಕ್ (KTM 200 Duke):
ಇದೊಂದು ಪ್ರೀಮಿಯಂ ಬೈಕ್ ಆಗಿದೆ. ರೂ.2.03 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 199.5 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 35 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಎಲೆಕ್ಟ್ರಾನಿಕ್ ಆರೆಂಜ್, ಡಾರ್ಕ್ ಗಾಲ್ವಾನೋ, ಸಿಲ್ವರ್ ಮೆಟಾಲಿಕ್ ಹಾಗೂ ಎಲೆಕ್ಟ್ರಿಕ್ ಆರೆಂಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ರಾಯಲ್ ಎನ್‌ಫೀಲ್ಡ್ ಬುಲೆಟ್ 350 (Royal Enfield Bullet 350):
ಈ ಮೋಟಾರ್‌ಸೈಕಲ್ ರೂ.1.60 ಲಕ್ಷದಿಂದ ರೂ.1.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 349 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 37 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಸ್ಟ್ಯಾಂಡರ್ಡ್ ಮರೂನ್, ಬೆಟಾಲಿಯನ್ ಬ್ಲ್ಯಾಕ್, ಸ್ಟ್ಯಾಂಡರ್ಡ್ ಬ್ಲ್ಯಾಕ್ & ಮಿಲಿಟರಿ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R):
ಇದು ರೂ.91,000 ರಿಂದ ರೂ.1.06 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 66 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಅಬ್ರಾಕ್ಸ್ ಆರೆಂಜ್, ಸ್ಟಾಲಿಯನ್ ಬ್ಲ್ಯಾಕ್, ಫೈರ್‌ಸ್ಟಾರ್ಮ್ ರೆಡ್ ಹಾಗೂ ಕೋಬಾಲ್ಟ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








