ಕಾಲೇಜು ವಿದ್ಯಾರ್ಥಿಗಳಿಗೆ ಈ 5 ಜನಪ್ರಿಯ ಬೈಕ್‌ಗಳು ತುಂಬಾ ಉತ್ತಮ.. ಹೆಚ್ಚು ಮೈಲೇಜ್, ಬೆಲೆಯೂ ಕಡಿಮೆ!

ಕಾಲೇಜು ಎಂಬುದು ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ಘಟ್ಟವಾಗಿದೆ. ಅದರಲ್ಲೂ ಡಿಗ್ರಿ ಮೆಟ್ಟಿಲು ಹತ್ತುವ ವಿದ್ಯಾರ್ಥಿಗಳಿಗೆ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದ‌ನ್ನು ಖರೀದಿ ಮಾಡಬೇಕು ಎಂಬ ಬಹುದೊಡ್ಡ ಆಸೆಯಿರುತ್ತದೆ. ಆದರೆ, ಯಾವ ಬೈಕ್‌ನ್ನು ತೆಗೆದುಕೊಳ್ಳಬೇಕು ಎಂಬ ಗೊಂದಲದಲ್ಲಿರುತ್ತಾರೆ. ನಾವಿಲ್ಲಿ ಗರಿಷ್ಠ ಮೈಲೇಜ್ ಹಾಗೂ ಕಡಿಮೆ ಬೆಲೆಯಲ್ಲಿ ಸಿಗುವ 5 ಜನಪ್ರಿಯ ಮೋಟಾರ್‌ಸೈಕಲ್‌ಗಳ ಬೆಲೆ ಹಾಗೂ ವಿಶೇಷತೆ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಟಿವಿಎಸ್ ರೈಡರ್ 125 (TVS Raider 125)..

ಇದು ಪ್ರೀಮಿಯಂ ಬೈಕ್‌ ಆಗಿದ್ದು, ಬಜೆಟ್ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಈ ಮೋಟಾರ್‌ಸೈಕಲ್‌ ರೂ.1 ಲಕ್ಷದಿಂದ ರೂ.1.02 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 71 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Top 5 Famous And Affordable Bikes with Best Mileage For College Students Raider Pulsar to Xtreme

ನೂತನ ರೈಡರ್ ಮೋಟಾರ್‌ಸೈಕಲ್‌ ವಿಕೆಡ್ ಬ್ಲ್ಯಾಕ್, ಬ್ಲೇಜಿಂಗ್ ಬ್ಲೂ, ಫೋರ್ಜಾ ಬ್ಲೂ, ನಾರ್ಡೊ ಗ್ರೇ, ಬ್ಲ್ಯಾಕ್ ಪ್ಯಾಂಥರ್, ಐರನ್ ಮ್ಯಾನ್, ಫಿಯರಿ ಯೆಲ್ಲೋ ಮತ್ತು ಸ್ಟ್ರೈಕಿಂಗ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಐಡಲ್ ಸ್ಟಾಪ್/ಸ್ಟಾರ್ಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಬಜಾಜ್ ಪಲ್ಸರ್ ಎನ್ಎಸ್125 (Bajaj Pulsar NS125)..

ಈ ಬೈಕ್‌ನ್ನು ಯುವ ಗ್ರಾಹಕರು ಇಷ್ಟಪಟ್ಟು ಕೊಂಡುಕೊಳ್ಳುತ್ತಾರೆ. ಇದು ರೂ.1 ಲಕ್ಷದಿಂದ ರೂ.1.12 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124.45 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 64 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Top 5 Famous And Affordable Bikes with Best Mileage For College Students Raider Pulsar to Xtreme

ಹೊಸ ಪಲ್ಸರ್ ಮೋಟಾರ್‌ಸೈಕಲ್‌ ಆಕರ್ಷಕ ವಿನ್ಯಾಸವನ್ನು ಹೊಂದಿದೆ. ರೆಡ್, ಆರೆಂಜ್, ಬ್ಲೂ ಮತ್ತು ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಎಕ್ಸ್‌ಟ್ರೀಮ್ 125R (Hero Xtreme 125R)..

ಇದು ರೂ.1 ಲಕ್ಷದಿಂದ ರೂ.1.08 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 66 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಯಮಹಾ ಎಫ್‌ಝಡ್‌-ಎಸ್ ಎಫ್ಐ ಹೈಬ್ರಿಡ್ (Yamaha FZ-S Fi Hybrid)..

ಈ ಬೈಕ್‌ ರೂ.1.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 149 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಿಎಫ್‌ಟಿ ಇನ್ಸ್ಟ್ರುಮೆಂಟ್ ಸೆಟಪ್, ನ್ಯಾವಿಗೇಷನ್, ಮ್ಯೂಸಿಕ್ ಕಂಟ್ರೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

Top 5 Famous And Affordable Bikes with Best Mileage For College Students Raider Pulsar to Xtreme

ಹೋಂಡಾ ಹಾರ್ನೆಟ್ 2.0 (Honda Hornet 2.0)..

ಇದು ರೂ.1.57 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 184.40 ಸಿಸಿ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 57 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, June 9, 2025, 16:10 [IST]
English summary
Top 5 famous and affordable bikes with best mileage for college students raider pulsar to xtreme
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+