ಬ್ರೋ: ಬೈಕ್ ಜಮಾನವಲ್ಲ.. ಇವೇ 5 ವಿಶ್ವಾಸಾರ್ಹ ಹೀರೋ ಸ್ಕೂಟರ್‌ಗಳು, 59 Km ಮೈಲೇಜ್.. 70,000ದಿಂದ ಶುರು!
ದೇಶದಲ್ಲಿ ವಯಸ್ಕರು ಹಾಗೂ ಯುವ ಜನರು ಬೈಕ್‌ಗಳ ಬದಲಿಗೆ ಸ್ಕೂಟರ್‌ಗಳನ್ನು ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ಇವುಗಳನ್ನು ಮಹಿಳೆಯರು ಹಾಗೂ ಪುರುಷರು ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ ಡೆಸ್ಟಿನಿ 110, ಜೂಮ್ 160, ಹೀರೋ ಪ್ಲೆಷರ್ ಪ್ಲಸ್, ಜೂಮ್ 110 ಹಾಗೂ ಜೂಮ್ 125ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹೀರೋ ಡೆಸ್ಟಿನಿ 110 (Hero Destini 110):
ಇದೊಂದು ಜನಪ್ರಿಯ ಸ್ಕೂಟರ್ ಆಗಿದ್ದು, ಎಲ್ಲ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು. ರೂ.72,000 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ನೆಕ್ಸಸ್ ಬ್ಲೂ, ಆಕ್ವಾ ಗ್ರೇ, ಗ್ರೂವಿ ರೆಡ್, ಮ್ಯಾಟ್ ಸ್ಟೀಲ್ ಗ್ರೇ ಹಾಗೂ ಎಟರ್ನಲ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 162 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,302 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಡೆಸ್ಟಿನಿ 110' ಸ್ಕೂಟರ್ 110.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 56 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಅನಲಾಗ್ ಸ್ಪೀಡೋಮೀಟರ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಹೀರೋ ಜೂಮ್ 160 (Hero Xoom 160):
ಈ ಸ್ಕೂಟರ್‌ನ್ನು ಯುವ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.1.37 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ತನ್ನದಾಗಿಸಿಕೊಂಡಿದೆ. ಮ್ಯಾಟ್ ರೇನ್‌ಫಾರೆಸ್ಟ್ ಗ್ರೇ, ಸಮ್ಮಿಟ್ ವೈಟ್, ಕ್ಯಾನ್ಯನ್ ರೆಡ್ ಮತ್ತು ಮ್ಯಾಟ್ ವಾಲ್ಕ್ಯಾನಿಕ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1348 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಹೀರೋ ಜೂಮ್ 160' ಸ್ಕೂಟರ್ 156 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 40 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಲೆಂಟ್ ಸ್ಟಾರ್ಟರ್, ಸ್ಮಾರ್ಟ್-ಕೀ ವಿತ್ ಕೀಲೆಸ್ ಇಗ್ನಿಷನ್, ರಿಮೋಟ್ ಸೀಟ್ ಅನ್‌ಲಾಕ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಹೀರೋ ಪ್ಲೆಷರ್ ಪ್ಲಸ್ ಎಕ್ಸ್‌ಟೆಕ್ (Hero Pleasure Plus XTEC):
ಇದು ಪ್ರಮುಖ ಸ್ಕೂಟರ್ ಆಗಿದೆ. ರೂ.69,766 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 110.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ಹಲವು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಜೂಮ್ 110 (Hero Xoom 110):
ಈ ಸ್ಕೂಟರ್ ರೂ.72,351 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 110.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 53 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳಿವೆ.

ಹೀರೋ ಜೂಮ್ 125 (Hero Xoom 125):
ಇದೊಂದು ನಂಬಿಕಾರ್ಹ ಸ್ಕೂಟರ್ ಆಗಿದೆ. ರೂ.80,494 ರಿಂದ ರೂ.86,025 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 124.6 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 52.8 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








