ಬ್ರೋ.. ಪ್ರಚಂಡ ಮೈಲೇಜ್ ನೀಡಬಲ್ಲ Bike ಹುಡುಕುತ್ತಿದ್ದೀರಾ, ಇವು ಬೆಸ್ಟ್ ಚಾಯ್ಸ್.. ಬೆಲೆ ಎಷ್ಟು, ವಿಶೇಷತೆಗಳೇನು?
ನಗರವೇ ಆಗಿರಲಿ.. ಹಳ್ಳಿಯೇ ಆಗಿರಲಿ.. ದಿನನಿತ್ಯದ ಬಳಕೆಗೆ ದ್ವಿಚಕ್ರ ವಾಹನಗಳು (Two Wheelers) ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಬೈಕ್‌ಗಳನ್ನು ಪ್ರತಿಯೊಬ್ಬರು ಇಷ್ಟಪಡುವರು. ನೀವು ಗರಿಷ್ಠ ಮೈಲೇಜ್ ನೀಡಬಲ್ಲ ಮೋಟಾರ್‌ಸೈಕಲ್‌ವೊಂದನ್ನು ಖರೀದಿ ಮಾಡಲು ಹುಡುಕಾಟ ನಡೆಸುತ್ತಿದ್ದೀರಾ.. ಹಾಗಾದರೆ, ಬಜಾಜ್ ಫ್ರೀಡಂ, ಹೋಂಡಾ ಶೈನ್ 100 ಡಿಎಕ್ಸ್, ಬಜಾಜ್ ಪ್ಲಾಟಿನಾ 100, ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ ಹಾಗೂ ಟಿವಿಎಸ್ ಸ್ಪೋರ್ಟ್ ಮಾಡೆಲ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಈ ಬೈಕ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ಪ್ರಮುಖ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಬಜಾಜ್ ಫ್ರೀಡಂ 125 (Bajaj Freedom 125):
ಇದು ವಿಶ್ವದ ಮೊಟ್ಟ ಮೊದಲ ಸಿಎನ್‌ಜಿ ಮೋಟಾರ್‌ಸೈಕಲ್ ಎಂದೇ ಹೆಸರುವಾಸಿಯಾಗಿದೆ. ರೂ.90 976 ರಿಂದ ರೂ. 1.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ರೇಸಿಂಗ್ ರೆಡ್, ಸೈಬರ್ ವೈಟ್, ಎಬೊನಿ ಬ್ಲ್ಯಾಕ್, ಪ್ಯೂಟರ್ ಗ್ರೇ, ಕೆರಿಬಿಯನ್ ಬ್ಲೂ ಮತ್ತು ಪ್ಯೂಟರ್ ಗ್ರೇ ಯೆಲ್ಲೋ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ.

ನೂತನ 'ಫ್ರೀಡಂ' 124.58 ಸಿಸಿ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 30 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಎಲ್‌ಸಿಡಿ ಇನ್ಸ್ಟ್ರುಮೆಂಟ್ ಡಿಸ್‌ಪ್ಲೇ, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಮೊಬೈಲ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.
ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):
ಈ ಮೋಟಾರ್‌ಸೈಕಲ್‌ನ್ನು ಬಡವರ ಬಂಡಿ ಎಂದು ಕರೆದರೂ ತಪ್ಪಾಗುವುದಿಲ್ಲ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಸಿಗಲಿದ್ದು, ರೂ.83,580 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್, ಅಥ್ಲೆಟಿಕ್ ಬ್ಲೂ ಮೆಟಾಲಿಕ್ & ಜೆನಿ ಗ್ರೇ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ಶೈನ್' 98.98 ಸಿಸಿ ಪೆಟ್ರೋಲ್ & 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 65 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್ ಆಫ್ ಹಾಗೂ ಸೈಲೆಂಟ್ ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಬಜಾಜ್ ಪ್ಲಾಟಿನಾ 100 (Bajaj Platina 100):
ಇದು ಜಗಮೆಚ್ಚಿದ ಬೈಕ್ ಎಂದೇ ಹೆಸರುವಾಸಿಯಾಗಿದೆ. ರೂ.80,420 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 102 ಸಿಸಿ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 75 ರಿಂದ 90 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಸೇರಿದಂತೆ ನಾನಾ ವಿಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC):
ಈ ಮೋಟಾರ್‌ಸೈಕಲ್ ರೂ.96,994 ರಿಂದ ರೂ.1.01 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 69 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ಸ್ಪೋರ್ಟ್ (TVS Sport):
ಇದೊಂದು ವಿಶ್ವಾಸಾರ್ಹ ಬೈಕ್ ಆಗಿದೆ. ರೂ.80,705 ರಿಂದ ರೂ.83,598 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಸ್ಪೀಡೋಮೀಟರ್, ಹ್ಯಾಲೊಜೆನ್ ಹೆಡ್‌ಲೈಟ್, ಟೈಲ್‌ಲೈಟ್ ಹಾಗೂ ಇಂಡಿಕೇಟರ್‌ಗಳು ಸೇರಿದಂತೆ ವಿವಿಧ ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








